ಹೃದಯ ಭಾಗದಲ್ಲಿ ಸಂಚಾರ ಸ್ತಬ್ಧ

Team Udayavani, Sep 12, 2019, 3:10 AM IST

hrudaya

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನ ಖಂಡಿಸಿ ಒಕ್ಕಲಿಗ ಸಂಘ-ಸಂಸ್ಥೆಗಳ ಒಕ್ಕೂಟ ಬುಧವಾರ ನಗರದಲ್ಲಿ ನಡೆಸಿದ ಪ್ರತಿಭಟನೆಯಿಂದ ನಗರದ ಹೃದಯ ಭಾಗ ಸೇರಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಬೆಳಗ್ಗೆ 9 ಗಂಟೆಯಿಂದಲೇ ಮೈಸೂರು, ತುಮಕೂರು, ನೆಲಮಂಗಲ, ಚಿತ್ರದುರ್ಗ, ಹಾಸನ, ರಾಮನಗರ, ಚನ್ನಪಟ್ಟಣ, ಕನಕಪುರ ಸೇರಿ ವಿವಿಧೆಡೆಯಿಂದ ಒಕ್ಕಲಿಗ ಸಮುದಾಯದವರು ಹಾಗೂ ಕಾಂಗ್ರೆಸ್‌-ಜೆಡಿಎಸ್‌ನ ಸುಮಾರು 25ರಿಂದ 30 ಸಾವಿರ ಮಂದಿ ತಂಡೋಪ ತಂಡವಾಗಿ ಸಾರ್ವಜನಿಕ ಸಾರಿಗೆ ಹಾಗೂ ಖಾಸಗಿ ವಾಹನಗಳಲ್ಲಿ ನಗರ ಪ್ರವೇಶಿಸಿದರು.

ಇನ್ನು ಕೆಲ ಸಂಘಟನೆ ಕಾರ್ಯಕರ್ತರು ಮೈಸೂರು ರಸ್ತೆ, ಮೌರ್ಯ ವೃತ್ತದಿಂದಲೇ ಬೈಕ್‌ ರ್ಯಾಲಿ ನಡೆಸಿದರು. ಇದರಿಂದಾಗಿ ಸುಮಾರು ಐದಾರು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಸುತ್ತಮುತ್ತಲ ಜಿಲ್ಲೆಗಳಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದವರು ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಸಮಾವೇಶಗೊಂಡು ನಂತರ ಅಲ್ಲಿಂದ ಮಧ್ಯಾಹ್ನ 12.30ರ ಸುಮಾರಿಗೆ ಸಜ್ಜನರಾವ್‌ ವೃತ್ತ,

ಜೆ.ಸಿ.ರಸ್ತೆ, ಹಡ್ಸನ್‌ ವೃತ್ತ, ಮೈಸೂರು ಬ್ಯಾಂಕ್‌ ವೃತ್ತ ಮೂಲಕ ಅರಮನೆ ರಸ್ತೆ, ಕಾಳಿದಾಸ ರಸ್ತೆ, ಶೇಷಾದ್ರಿ ರಸ್ತೆ ಮೂಲಕ ಮಧ್ಯಾಹ್ನ 2.30ರ ಸುಮಾರಿಗೆ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಾರ್ಗದುದ್ದಕ್ಕೂ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆ ಕೂಗಿದರು.

ಸಾರ್ವಜನಿಕರು ಹೈರಾಣು: ಸಾವಿರಾರು ಮಂದಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದರಿಂದ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನ, ನಗರದ ಹೃದಯ ಭಾಗವಾದ ಮೆಜೆಸ್ಟಿಕ್‌, ಸ್ವಾತಂತ್ರ್ಯ ಉದ್ಯಾನವನದ ಸುತ್ತ ನಾಲ್ಕೈದು ಕಿ.ಮೀ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದ ಮಾರ್ಗದಲ್ಲಿ ಸಂಚಾರ ನಿರ್ಬಂಧ ಸಹ ಹೇರಲಾಗಿತ್ತು. ಮತ್ತೂಂದೆಡೆ ಬೆಳಗ್ಗೆ 9 ಗಂಟೆಯಿಂದಲೇ ಮೈಸೂರು ರಸ್ತೆ, ತುಮಕೂರು ರಸ್ತೆ ಕಡೆಯಿಂದ ನೂರಾರು ವಾಹನಗಳು ಒಮ್ಮೆಲೆ ನಗರ ಪ್ರವೇಶಿದ್ದರಿಂದ ಈ ಭಾಗದಲ್ಲಿ ನೀರಿಕ್ಷೆಗೂ ಮೀರಿ ಸಂಚಾರ ದಟ್ಟಣೆ ಉಂಟಾಗಿತು. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ದಟ್ಟಣೆಯ ಬಿಸಿ ತಟ್ಟಿತು.

ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಖಾಸಗಿ ಕಂಪನಿಗಳ ಉದ್ಯೋಗಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಹೋಗಲು ಸಾಧ್ಯವಾಗದೆ, ಬದಲಿ ಮಾರ್ಗಗಳಲ್ಲಿ ತೆರಳಲು ಹರ ಸಾಹಸ ಪಟ್ಟರು. ಕೆಲವೆಡೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌, ಆಟೋ ರಿಕ್ಷಾಗಳು ಸಹ ಗಂಟೆಗಟ್ಟಲೇ ರಸ್ತೆಯಲ್ಲೇ ನಿಲ್ಲಬೇಕಾಯಿತು.

ಪ್ರತಿಭಟನೆಯಲ್ಲಿ ಕಂಡಿದ್ದು: ಪ್ರತಿಭಟನೆ ವೇಳೆ ವ್ಯಕ್ತಿಯೊಬ್ಬ ನಾಡಪ್ರಭು ಕೆಂಪೇಗೌಡರ ಪೋಷಾಕು ಧರಿಸಿ ಗಮನ ಸೆಳೆದರೆ, ಮತ್ತೂಬ್ಬ ಅರೆಬೆತ್ತಲೆಯಾಗಿ ಕೇಂದ್ರ ವಿರುದ್ಧದ ಘೋಷಣೆಗಳನ್ನು ತನ್ನ ಮೈಮೇಲೆ ಬರೆದುಕೊಂಡಿದ್ದ. ಪ್ರತಿಭಟನಾಕಾರರು ಡಿ.ಕೆ.ಶಿವಕುಮಾರ್‌ ಭಾವಚಿತ್ರಗಳನ್ನು ಹಿಡಿದು,ಕೇಂದ್ರ ಸರ್ಕಾರ ವಿರುದ್ಧದ ಘೋಷಣೆಗಳಿದ್ದ ಬಿತ್ತಿಪತ್ರಗಳನ್ನು ಹಿಡಿದು ಸಾಗಿದರು.

ಪೊಲೀಸ್‌ ಬಿಗಿ ಭದ್ರತೆ: ಪ್ರತಿಭಟನೆಯಲ್ಲಿ ನಿರೀಕ್ಷೆಗೂ ಮೀರಿ ಕಾರ್ಯಕರ್ತರು, ಬೆಂಬಲಿಗರು ಸೇರಿದ್ದರಿಂದ ಬಿಗಿ ಪೊಲೀಸ್‌ ಭದ್ರತೆ ನಿಯೋಜಿಸಲಾಗಿತ್ತು. ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾದ ಉಮೇಶ್‌ ಕುಮಾರ್‌, ಎಸ್‌.ಮರುಗನ್‌, ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌, ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಡಾ.ಬಿ.ಆರ್‌.ರವಿಕಾಂತೇಗೌಡ ನೇತೃತ್ವದಲ್ಲಿ ನ್ಯಾಷನಲ್‌ ಕಾಲೇಜು ಮೈದಾನದ ಸುತ್ತ ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ರಸ್ತೆಯ ಎರಡೂ ಬದಿಗಳಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ಪೊಲೀಸರ ಜತೆ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಲ್ಲದೆ, ಮಹಿಳಾ ಸಿಬ್ಬಂದಿ ಸೇರಿ ಸುಮಾರು 200 ಮಂದಿ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಿದರು. ಪೊಲೀಸರು ಇಡೀ ರ್ಯಾಲಿಯ ಚಿತ್ರೀಕರಣ ಮಾಡಿಕೊಂಡರು. ಸಂಚಾರ ವಿಭಾಗದ ಸಿಬ್ಬಂದಿ ಸೇರಿ ಮೂರೂವರೆ ಸಾವಿರ ಮಂದಿಯನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿತರಾಗಿದ್ದರು.

ವ್ಯವಸ್ಥಿತ ನಿರ್ವಹಣೆ: ಪ್ರತಿಭಟನಾ ಮೆರವಣಿಗೆ ನಡೆದ ಮಾರ್ಗದಲ್ಲಿ ವಾಹನ ಸಂಚಾರಕ್ಕೂ ಅವಕಾಶ ಮಾಡಿಕೊಟ್ಟ ನಗರ ಪೊಲೀಸರು, ಮುನ್ನಚ್ಚರಿಕೆ ಕ್ರಮವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದರು. ಜತೆಗೆ, ಕೆಲವು ರಸ್ತೆಗಳಲ್ಲಿ ಏಕಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟು ಮತ್ತೂಂದು ಬದಿಯ ರಸ್ತೆಯಲ್ಲಿ ಪ್ರತಿಭಟನಾಕಾರರ ಮೆರವಣಿಗೆಗೆ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ, ಪ್ರತಿಭಟನಾ ಮೆರವಣಿಗೆ ಶಾಂತಿಯುತವಾಗಿ ನಡೆದು ಪೊಲೀಸರು ನಿಟ್ಟುಸಿರು ಬಿಡುವಂತಾಯಿತು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.