ತುಳು ಸಂಘಟನೆಗಳಿಂದ ಯಕ್ಷ ವೈವಿಧ್ಯ ಕಲಾವಿದರು-ಕಲಾರಸಿಕರ ಸಮಾಗಮ

Team Udayavani, Aug 5, 2019, 3:04 AM IST

tulu

ಬೆಂಗಳೂರು: ಬೆಂಗಳೂರು ತುಳು ಕೂಟ ಸೇರಿದಂತೆ ವಿವಿಧ ತುಳು ಸಂಘಟನೆಗಳು ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಯಕ್ಷ ಭಾವೈಕ್ಯ -ಯಕ್ಷಗಾನ ವೈವಿದ್ಯ ಕಾರ್ಯಕ್ರಮ’ ಕಲಾವಿದರು ಹಾಗೂ ಕಲಾರಸಿಕರ ಸಮಾಗಮಕ್ಕೆ ಸಾಕ್ಷಿಯಾಯಿತು. ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ “ಭಾವೈಕ್ಯ ಬಹುಭಾಷಾ ಕವಿ, ಕಾವ್ಯ, ಗಾಯನ ಗೋಷ್ಠಿ ಹಾಗೂ ಯಕ್ಷ ಭಾವೈಕ್ಯ-ಯಕ್ಷಗಾನ ವೈವಿದ್ಯ’ ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಂಜಿಸಿದರು.

ಸಂಜೆ ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಕಲಾವತಿ ಮತ್ತು ಹಿನ್ನೆಲೆ ಗಾಯಕ ರಮೇಶ್‌ ಚಂದ್ರ ಅವರು ಗೀತೆ ರಚನೆಕಾರ ಮತ್ತು ಸಂಗೀತ ನಿರ್ದೇಶಕ ವಿ.ಮನೋಹರ್‌ ಅವರು ರಚಿಸಿದ ಹಲವು ಚಿತ್ರಗೀತೆಗಳನ್ನು ಹಾಡಿ, ಸಂಗೀತ ರಸಿಕರನ್ನು ಆನಂದದ ಕಡಲಲ್ಲಿ ತೇಲಿಸಿದರು. ಪ್ರತಿಭಾನ್ವಿತ ಯುವ ಸಾಹಿತಿಗಳು ತಮ್ಮ ಕವಿತೆಗಳನ್ನು ವಾಚಿಸಿದರು. ಇದಾದ ಬಳಿಕ ನಡೆದ “ತೆಂಕು ಮತ್ತು ಬಡಗು ಯಕ್ಷಗಾನ ತುಲನಾತ್ಮಕ ಪ್ರದರ್ಶನ’ ನೆರೆದವರ ಮನಸೆಳೆಯಿತು. ಇದೇ ವೇಳೆ ವಿವಿಧ ಸಾಂಸ್ಕೃತಿ ಸ್ಪರ್ಧೆಯಲ್ಲಿ ಬಹುಮಾನಗೆದ್ದ ಮಕ್ಕಳನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಕಲುºರ್ಗಿಯ ಆಕಾಶವಾಣಿ ಕೇಂದ್ರದ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸದಾನಂದ ಪೆರ್ಲ, ರಾಜ್ಯ ಸರ್ಕಾರ ತುಳು ಭಾಷೆಯನ್ನು ಮಾನ್ಯತೆ ಇರುವ ಭಾಷೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ತನ್ನದೇ ಆದ ಇತಿಹಾಸವನ್ನು ಹೊಂದಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ತುಳು ಭಾಷೆಯನ್ನು ಮಾನ್ಯತೆ ಇರುವ ಭಾಷೆ ಎಂದು ಪರಿಗಣಿಸಿದ ಹೊರತು ತುಳು ಭಾಷೆಗೆ ರಾಷ್ಟ್ರೀಯ ಮನ್ನಣೆ ಸಿಗುವುದಿಲ್ಲ ಎಂದರು. ಅಧಿಕೃತ ಭಾಷೆಯ ಸ್ಥಾನ ನೀಡಬೇಕು.

ಚಿಂತಕ ಡಾ.ಉದಯ ಧರ್ಮಸ್ಥಳ ಮಾತನಾಡಿ, ವಿಶಿಷ್ಟವಾದ ಐತಿಹಾಸಿಕತೆಯನ್ನು ಹೊಂದಿರುವ ತುಳು ಭಾಷೆಯನ್ನು ರಾಜ್ಯ ಸರ್ಕಾರ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ಮನವಿ ಮಾಡಿದರು. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಸಂಬಂಧ ಸರ್ಕಾರವನ್ನು ಒತ್ತಾಯ ಮಾಡುತ್ತಲೇ ಇದ್ದೇವೆ. ಆದರೆ ಅದು ಇನ್ನೂ ಸಕಾರಗೊಂಡಿಲ್ಲ. ಈ ನಿಟ್ಟಿನಲ್ಲಿ ಹೊಸ ಸರ್ಕಾರ ತುಳು ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಹೇಳಿದರು.

ಮನವಿ: ತುಳುವೆರೆ ಚಾವಡಿಯ ಪುರುಷೋತ್ತಮ ಚೇಂಡ್ಲಾ ಮಾತನಾಡಿ, ಬೆಂಗಳೂರಿನಲ್ಲಿರುವ ವಿವಿಧ ತುಳು ಸಂಘಟನೆಗಳು ಸೇರಿ ಇಂತಹ ಅಪರೂಪದ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ.ತುಳುಭಾಷೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಸದ್ಯದಲ್ಲೇ ಮನವಿ ಸಲ್ಲಿಸುವುದಾಗಿ ಹೇಳಿದರು. ತುಳುನಾಡಿಗರನ್ನು ಒಟ್ಟಿಗೆ ಸೇರಿಸುವ ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ ಎಂದು ಆಶಿಸಿದರು.

ನಂದಿನಿ ಲೇಔಟ್‌ನ ಪಾಲಿಕೆ ಸದಸ್ಯ ರಾಜೇಂದ್ರಕುಮಾರ್‌, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಚಂದ್ರಹಾಸ ರೈ, ಹಾಸ್ಯಲೇಖಕ ವೈ.ವಿ.ಗುಂಡೂರಾವ್‌, ಸಂಗೀತ ನಿರ್ದೇಶಕ ವಿ.ಮನೋಹರ್‌, ಮಂಗಳೂರಿನ ಅಖೀಲ ಭಾರತ ತುಳು ಒಕ್ಕೂಟದ ನಿಟ್ಟೆ ಶಶಿಧರ್‌ ಶೆಟ್ಟಿ, ದೇವೇಂದ್ರ ಹೆಗ್ಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.