ಮಾಜಿ ಸಿಎಂಗೆ ಟ್ವೀಟ್‌ ಟಾಂಗ್‌

Team Udayavani, Mar 16, 2019, 6:33 AM IST

maji-cm.jpg

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಎಸ್‌.ಎಂ.ಕೃಷ್ಣ ಅವರು ಕುಟುಂಬ ರಾಜಕಾರಣ ಕುರಿತು ಟೀಕಿಸಿದ್ದಕ್ಕೆ ಟ್ವೀಟ್‌ ಮೂಲಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಸುಮಲತಾ ಅವರಿಗೂ ಟ್ವೀಟ್‌ ಮೂಲಕವೇ ಟಾಂಗ್‌ ನೀಡಿದ್ದಾರೆ.

ಎಸ್‌ಎಂಕೆಗೆ ಕುಟುಕು: ಮಾನ್ಯ, ಕೃಷ್ಣ ಸಾಹೇಬರಿಗೆ ಗೌರವಯುತ ನಮಸ್ಕಾರಗಳು. ನೀವು ತುಂಬಾ ಮುಂದೆ ಹೆಜ್ಜೆ ಹಾಕಿಬಿಟ್ಟಿರುವುದರಿಂದ ನೀವು ನಡೆದು ಬಂದ ಹಾದಿ ಮರೆತುಹೋಗಿದೆ ಎಂದು ಭಾವಿಸುತ್ತೇನೆ. 50 ವರ್ಷ ಕಾಲ ನೀವು ಅಧಿಕಾರಣದ ಬೆಣ್ಣೆಯನ್ನು ಮೆದ್ದಿರಿ. ಎರಡು ಬಾರಿ ಕೇಂದ್ರ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ, ಉಪ ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ ಅಧಿಕಾರ ಅನುಭವಿಸಿದಿರಿ. ಇಷ್ಟೆಲ್ಲಾ ಆದ ಮೇಲೆ ನೀವು ಬಿಜೆಪಿಗೆ ಕಾಲಿಟ್ಟಾಗಲೇ ಟೀಕಿಸುವ ನೈತಿಕತೆ ಕಳೆದುಕೊಂಡಿದ್ದೀರಿ.

ಕುಟುಂಬ ರಾಜಕಾರಣವನ್ನು ಪ್ರಶ್ನೆ ಮಾಡಿದ್ದೀರಿ. ಬಹಳ ಸಂತೋಷ… ಆದರೆ, ನಮ್ಮ ಕುಟುಂಬದಲ್ಲಿ ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ. ಜನ ಆರಿಸಿದಾಗ ಮಾತ್ರ ಅಧಿಕಾರ ಪಡೆದಿದ್ದಾರೆ. ಆದರೆ, ನೀವು ರಾಜ್ಯಸಭೆಗೆ ಹಿಂಬಾಗಿಲ ಮೂಲಕ ಪ್ರವೇಶ ಪಡೆಯಲು ದೇವೇಗೌಡರ ಸಹಾಯ ಪಡೆದಿದ್ದು ನೆನಪಿದೆ ಎಂದು ಭಾವಿಸುತ್ತೇನೆ ಎಂದು ಕುಟುಕಿದ್ದಾರೆ.

ಸುಮಲತಾಗೆ ಟಾಂಗ್‌: ಗೌರವಾನ್ವಿತ ಸುಮಲತಾ ಅವರೇ, ನಿಮ್ಮ ರೈತಪರ ಮಾತು ಓದಿ ಇನ್ನಿಲ್ಲದಷ್ಟು ಸಂತೋಷವಾಯಿತು. ನನಗಾಗಲೀ ನನ್ನ ತಂದೆಯವರಿಗಾಗಲೀ ರೈತರ ಬಗ್ಗೆ ಏನೇನೂ ಗೊತ್ತಿಲ್ಲ. ಮಣ್ಣಿನ ಮಕ್ಕಳು ಎಂದು ಈ ದೇಶದ ಜನ ಪ್ರೀತಿಯಿಂದ ಕರೆದರು. ನಮ್ಮದು ರೈತರಿಗೆ ಮಿಡಿದ ಮನ. ಆದರೆ… ಎಂದು ಟ್ವೀಟ್‌ ಮೂಲಕ ಸುಮಲತಾ ಆವರ ಹೇಳಿಕೆಗೆ ಅತೃಪ್ತಿ ಹೊರಹಾಕಿದ್ದಾರೆ.

ಅಧಿಕಾರ ಮದದ ಮಾತು – ಬಿಎಸ್‌ವೈ: ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ.ಕೃಷ್ಣ ಅವರ ಬಗ್ಗೆ  ಕುಮಾರಸ್ವಾಮಿಯವರು ಅಧಿಕಾರದ ಮದದಿಂದ ಮಾಡಿರುವ ಟೀಕೆ ಮುಖ್ಯಮಂತ್ರಿ ಸ್ಥಾನಕ್ಕೆ ಶೋಭಿಸುವುದಿಲ್ಲ.

ರಾಜಕೀಯ ಅನುಭವದಲ್ಲಿ ಎಸ್‌.ಎಂ.ಕೃಷ್ಣ ಹಾಗೂ ಕುಮಾರಸ್ವಾಮಿಯವರಿಗೆ ಹೋಲಿಕೆಯೇ ಇಲ್ಲ. ಕುಮಾರಸ್ವಾಮಿಯವರಿಗೆ ವಿನಾಶ ಕಾಲೇ ವಿಪರೀತ ಬುದ್ದಿ ಎಂಬಂತಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸುವುದು ಸಾಧ್ಯವಿಲ್ಲ ಎಂಬುದು ಅರ್ಥವಾದ ಬಳಿಕ ಅವರು ತೀವ್ರ ಹತಾಶೆಗೊಂಡಿದ್ದಾರೆ. ಮಂಡ್ಯದ ಜನತೆ ಈ ಅಹಂಕಾರದ ವರ್ತನೆಗೆ ಮುಖ್ಯಮಂತ್ರಿಯವರ ಕುಟುಂಬಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.