ಒಳಚರಂಡಿ ದುರಸ್ತಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು
Team Udayavani, Apr 27, 2019, 1:26 PM IST
ಬೆಂಗಳೂರು: ಒಳಚರಂಡಿ ದುರಸ್ತಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಇಂದು ಬೆಳಗ್ಗೆ ಕೆಜಿ ಹಳ್ಳಿಯಲ್ಲಿ ಒಳಚರಂಡಿಯೊಳಗಿದ್ದ ಸಂಪು ದುರಸ್ತಿ ಮಾಡುತ್ತಿದ್ದ ಚೋಟು ಹಾಗೂ ಗಫೂರ್ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಹೇಳಿದೆ.