27ಕ್ಕೆ ಕರ್ನಾಟಕ ಬಂದ್
Team Udayavani, Jan 11, 2018, 7:40 AM IST
ಬೆಂಗಳೂರು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಜ.27 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿವೆ. ಜ.28 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವುದರಿಂದ ಅವರ ಮೇಲೆ ಒತ್ತಡ ಹೇರಲು ರಾಜ್ಯ ಬಂದ್ಗೆ ಕರೆ ನೀಡಿರುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಮಹದಾಯಿ ವಿವಾದ ಮಾತುಕತೆಯ ಮೂಲಕ ಬಗೆ ಹರಿಸಲು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು.ಕುಡಿಯುವ ನೀರಿನ ವಿಷಯದಲ್ಲಿ ಅನಗತ್ಯ ರಾಜಕೀಯ ಮಾಡುವುದರಿಂದ ಉತ್ತರ ಕರ್ನಾಟಕ ಭಾಗದ ಜನತೆಗೆ ನಿರಂತರ ಅನ್ಯಾಯವಾಗುತ್ತಿದೆ ಎಂದರು. ಜ. 27 ರ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೂ ಸಂಪೂರ್ಣ ಕರ್ನಾಟಕ ಬಂದ್ ಇರಲಿದೆ. ರಾಜ್ಯದ ಹಿತದೃಷ್ಠಿಯಿಂದ ಸಾರ್ವಜನಿಕರು ಬಂದ್ಗೆ ಬೆಂಬಲಿಸಬೇಕು ಎಂದು ವಾಟಾಳ್ ಮನವಿ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೂಡ ಕರ್ನಾಟಕ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?