Udayavni Special

ವಾಹನ ಜಖಂ: ಆರೋಪಿಗೆ ಗುಂಡು


Team Udayavani, Feb 17, 2020, 3:08 AM IST

vahana

ಬೆಂಗಳೂರು: ಮಹಿಳೆಯೊಬ್ಬರ ಮನೆಗೆ ನುಗ್ಗಿ ದಾಂಧಲೆಗೆ ಮುಂದಾಗಿ, ಅವರ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದ ಆರೋಪಿ ಶ್ರೀನಿವಾಸ ಅಲಿಯಾಸ್‌ ಸೀಗಡಿ ಸೀನ (24) ಎಂಬಾತನ ಕಾಲಿಗೆ ಗುಂಡು ಹಾರಿಸಿ ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸೀನನ ಬಲಗಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಹಲ್ಲೆಯಿಂದ ಗಾಯಗೊಂಡಿದ್ದ ಕಾನ್‌ಸ್ಟೆಬಲ್‌ ವೀರಭದ್ರ ಅವರ ಬಲಗೈಗೆ ಗಾಯವಾಗಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆರೋಪಿ ತನ್ನ ಸಹಚರರ ಜತೆ ಸೇರಿಕೊಂಡು ರಾಜಗೋಪಾಲನಗರದಲ್ಲಿ ಮಹಿಳೆಯೊಬ್ಬರ ಮನೆಗೆ ಹೋಗಿದ್ದ.

ಮನೆ ಗೆ ಬೀಗ ಹಾಕಿದ್ದರಿಂದ ಆಕ್ರೋಶ ಗೊಂಡು ಮನೆ ಮುಂದೆ ನಿಂತಿದ್ದ 4 ಕಾರು, 11 ಆಟೋಗಳನ್ನು ಜಖಂ ಮಾಡಿ ಪ್ರಾಬಲ್ಯ ಸಾಧಿಸಲು ಮುಂದಾಗಿದ್ದರು. ಈ ಸಂಬಂಧ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇತ್ತೀಚೆಗೆ ಸೀನಾನ ಸಹಚರರಾದ ಕಿರಣ್‌ ಮತ್ತು ಮನೋಜ್‌ ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಇವರ ಮಾಹಿತಿ ಮೇರೆಗೆ ಸೀನನ ಕೃತ್ಯ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಸೀನನ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಈತನ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ರೌಡಿಪಟ್ಟಿ ತೆರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಬಲಗಾಲಿಗೆ ಗುಂಡು: ಆರೋಪಿ ಸೀನ ಜಾಲಹಳ್ಳಿಯ ಹಳೇ ಬಸ್‌ ನಿಲ್ದಾಣ ಬಳಿಯ ಅಪಾರ್ಟ್‌ಮೆಂಟ್‌ ಸಮೀಪದ ಖಾಲಿ ಜಾಗದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಲಭ್ಯವಾಗಿತ್ತು. ಕೂಡಲೇ ರಾಜಗೋಪಾಲನಗರ ಠಾಣೆ ಇನ್‌ಸ್ಪೆಕ್ಟರ್‌ ದಿನೇಶ್‌ ಪಾಟೀಲ್‌ ತಮ್ಮ ತಂಡದ ಜತೆ ಆರೋಪಿಯ ಬಂಧನಕ್ಕೆ ತೆರಳಿದ್ದರು. ಪೊಲೀಸರನ್ನು ಕಂಡು ಪರಾರಿಯಾಗಲು ಮುಂದಾಗಿದ್ದಾನೆ. ಆಗ ಕಾನ್‌ಸ್ಟೆಬಲ್‌ ವೀರಭದ್ರ ಆತನನ್ನು ಹಿಡಿಯಲು ಹೋದಾಗ, ತನ್ನ ಬಳಿಯಿದ್ದ ಡ್ರ್ಯಾಗರ್‌ನಿಂದ ಅವರ ಬಲಗೈ ಗಾಯಗೊಳಿಸಿದ್ದಾನೆ. ಆಗ ಪಿಐ ದಿನೇಶ್‌ ಒಂದು ಸುತ್ತ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಆದರೂ ಹಲ್ಲೆಗೆ ಮುಂದಾದಾಗ ಆತ್ಮರಕ್ಷಣೆಗಾಗಿ ಆತನ ಬಲಗಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮಹಿಳೆಗಾಗಿ ದಾಂಧಲೆ: ರಾಜಗೋಪಾಲನಗರದಲ್ಲಿ ಆಟೋ ಚಾಲಕ ರಂಗನಾಥ್‌, ಪತ್ನಿ ಜತೆ ವಾಸವಾಗಿದ್ದರು. ಈ ಮಧ್ಯೆ ಪೋಷಕರನ್ನು ಕಳೆದುಕೊಂಡಿದ್ದ ಕಮಲಾನಗರ ನಿವಾಸಿ ಕಿರಣ್‌ ಎಂಬ ಯುವಕನನ್ನು ಒಂದೂವರೆ ವರ್ಷದಿಂದ ದಂಪತಿ ಸಾಕಿಕೊಂಡಿದ್ದರು. ರಂಗನಾಥ್‌ ಪತ್ನಿಯ ಮೊಬೈಲ್‌ ನಂಬರ್‌ ಅನ್ನು ಸಂಗ್ರಹಿಸಿದ್ದ ಹರೀಶ್‌ ಎಂಬಾತ ಸೀನನಿಗೆ ಕೊಟ್ಟಿದ್ದ. ನಂತರ ಸೀನ, ಮನೋಜ್‌, ಹರೀಶ್‌ ಹಾಗೂ ಇತರೆ ಎಂಟು ಮಂದಿ ಆರೋಪಿಗಳು ಮಹಿಳೆಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು. ಕಿರಣ್‌ ಮತ್ತು ಆಕೆಯ ಬಗ್ಗೆ ಸಹ್ಯವಾಗಿ ಮಾತನಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿ ದ್ದರು.

ಇದೇ ವಿಚಾರಕ್ಕೆ ರಂಗನಾಥ್‌ ದಂಪತಿ ನಡುವೆ ವಾಗ್ವಾದ ನಡೆದಿದ್ದು, ರಂಗನಾಥ್‌ ಪತ್ನಿ ಮೇಲೆ ಹಲ್ಲೆ ನಡೆಸಿ ವಿಚ್ಛೇದನ ಕೊಡುವುದಾಗಿ ಹೇಳಿ ಮನೆ ಬಿಟ್ಟು ಹೋಗಿದ್ದರು. ಈ ವಿಚಾರ ತಿಳಿದ ಕಿರಣ್‌, ಆರೋಪಿಗಳಿಗೆ ಕರೆ ಮಾಡಿ ಮತ್ತೂಮ್ಮೆ ಈ ರೀತಿ ಮಾಡಿದರೆ ಪರಿಣಾಮ ಸರಿ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದ. ಅಲ್ಲದೆ, ಮನೆ ಬಳಿ ಬಂದು ಮಾತನಾಡುವಂತೆ ತಾಕೀತು ಮಾಡಿದ್ದ. ಅದರಿಂದ ಆಕ್ರೋಶಗೊಂಡ ಆರೋಪಿಗಳು, ಫೆ.4ರಂದು ರಾತ್ರಿ ಮದ್ಯದ ಅಮಲಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನ ಗಳಲ್ಲಿ ರಂಗನಾಥ್‌ ಮನೆ ಬಳಿ ಬಂದಿದ್ದರು. ಅಷ್ಟರಲ್ಲಿ ಮಹಿಳೆ ಮನೆ ಬೀಗ ಹಾಕಿಕೊಂಡು ಹೋಗಿದ್ದರು. ಆರೋಪಿಗಳು ಮನೆ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಸಾಧ್ಯವಾ ಗದಿದ್ದಾಗ ಕಾರು, ಆಟೋಗಳನ್ನು ಹಾನಿಗೊಳಿಸಿ ದ್ದರು ಎಂದು ಪೊಲೀಸರು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ಮೋದಿ ನಿಜಕ್ಕೂ ಗ್ರೇಟ್- ಟ್ರಂಪ್ ಬಹುಪರಾಕ್: 29 ಮಿಲಿಯನ್ ಡೋಸ್ ಔಷಧ ಅಮೆರಿಕಕ್ಕೆ ರಫ್ತು

ಮೋದಿ ನಿಜಕ್ಕೂ ಗ್ರೇಟ್- ಟ್ರಂಪ್ ಬಹುಪರಾಕ್: 29 ಮಿಲಿಯನ್ ಡೋಸ್ ಔಷಧ ಅಮೆರಿಕಕ್ಕೆ ರಫ್ತು

ಗರ್ಭಿಣಿಯರನ್ನು ಸಂಕಷ್ಟಕ್ಕೆ ತಳ್ಳಲಿದೆಯೇ ಕೋವಿಡ್-19?

ಗರ್ಭಿಣಿಯರನ್ನು ಸಂಕಷ್ಟಕ್ಕೆ ತಳ್ಳಲಿದೆಯೇ ಕೋವಿಡ್-19?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡು ಹೆಣ್ಣು, ಒಂದು ಗಂಡು; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಎರಡು ಹೆಣ್ಣು, ಒಂದು ಗಂಡು; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

bng-tdy-5

ಸಾಮಾನ್ಯ ರೋಗಿಗಳಿಗಾಗಿ ಓಲಾ, ಊಬರ್‌ ಸೇವೆ

bng-tdy-4

ತಬ್ಲೀಘಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ

bng-tdy-3

ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

08-April-21

ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ

mysuru-tdy-3

ಪರಿಹಾರ ನಿಧಿಗೆ ಸದಸ್ಯರು ಹಣ ಪಾವತಿ

08-April-20

ಲಾಕ್‌ಡೌನ್‌ ಪಾಲಿಸಲು ಡಿಸಿಎಂ ಸವದಿ ಸಲಹೆ

mysuru-tdy-2

ಅನವಶ್ಯಕ ತಿರುಗಾಡುತ್ತಿದ್ದ 200ಕ್ಕೂ ಹೆಚ್ಚು ವಾಹನ ವಶ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ