ವೇಣುಗೋಪಾಲ್‌ ಖಡಕ್‌ ವಾರ್ನಿಂಗ್‌

Team Udayavani, Sep 24, 2018, 6:00 AM IST

23bnp-31.jpg

ಬೆಂಗಳೂರು: ಬ್ಲಾಕ್‌ಮೇಲ್ ತಂತ್ರ ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರಿಗೆ ರಾಜ್ಯ  ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಶಿಸ್ತು ಉಲ್ಲಂಘನೆ ಸಹಿಸುವುದಿಲ್ಲ. ಪಕ್ಷದಲ್ಲಿದ್ದುಕೊಂಡೇ ಭಿನ್ನಮತ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಶಾಸಕರಿಗೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯಲ್ಲೂ ಕಾಂಗ್ರೆಸ್‌ನಿಂದ ತೊಂದರೆಯಾಗಬಾರದು ಎಂದು ತಿಳಿಸಿದಾರೆ. ಈ ಮೂಲಕ ಬಂಡಾಯ ಶಾಸಕರಿಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರ ಕೆಟ್ಟ ರಾಜಕೀಯ ಕರ್ನಾಟಕದಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.

ಆಪರೇಷನ್‌ ಕಮಲ ಎದುರಿಸುವಲ್ಲಿ ಕಾಂಗ್ರೆಸ್‌ ಬಹಳ ಬಲಿಷ್ಠವಾಗಿದೆ. ಯಡಿಯೂರಪ್ಪ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಂದಾಗಿನಿಂದ ಅವರು ಆದೇ ಪ್ರಯತ್ನದಲ್ಲಿದ್ದಾರೆ. ಆದರೆ, ಅದು ಫ‌ಲ ಕೊಡುವುದಿಲ್ಲ ಎಂದು ತಿಳಿಸಿದರು.

ನಮ್ಮ ಶಾಸಕರಿಗೆ ವಾಟ್ಸಪ್‌ ಕಾಲ ಮಾಡಿ ಕೋಟಿ ಕೋಟಿ ರೂ. ನೀಡುವ ಆಮಿಷವೊಡ್ಡಿದ್ದಾರೆ. ಅಷ್ಟೊಂದು ಹಣ ಅವರಿಗೆ  ಎಲ್ಲಿಂದ ಬರುತ್ತದೆ. ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.ಸಂಪುಟ ವಿಸ್ತರಣೆ ಶೀಘ್ರವೇ  ಆಗಲಿದೆ. ಅ.10 ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಯಾವುದೇ ಕಾರಣಕ್ಕೂ ಮುಂದೆ ಹೋಗಲ್ಲ. ಇದು ಕಡೆಯದಾಗಿ ಹೇಳುತ್ತಿದ್ದೇನೆ ಎಂದು ಹೇಳಿದರು.

ಎಂ.ಟಿ.ಬಿ.ನಾಗರಾಜ್‌ ಹಾಗೂ ಸುಧಾಕರ್‌ ಚೆನ್ನೈಗೆ ಹೋಗಿದ್ದ ವಿಚಾರ ಕುರಿತು ಪ್ರಸ್ತಾಪಿಸಿದಾಗ, ಚೆನ್ನೈ ಸುಂದರ ನಗರ, ಅಲ್ಲಿ ಯಾಕೆ ಹೋಗಬಾರದು ಎಂದು ಪ್ರಶ್ನಿಸಿ, ಕಾಂಗ್ರೆಸ್‌ ಶಾಸಕರ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.

ಬಗ್ಗಲ್ಲ
ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಮಾತನಾಡಿ, ಕಾಂಗ್ರೆಸ್‌ ಪಕ್ಷ ಯಾರ ಬ್ಲಾಕ್‌ಮೇಲ್ ಹಾಗೂ ಹೆದರಿಕೆಗಳಿಗೆ ಬಗ್ಗಲ್ಲ. ಪಕ್ಷದ ಶಿಸ್ತು ಉಲ್ಲಂ ಸಿದರೆ ಗಂಭೀರ ಕ್ರಮ  ಎದುರಿಸಬೇಕಾಗುತ್ತದೆ.  ಈಕುರಿತು ನಾನೂ ಕೆಲವೊಂದು ಮಾಹಿತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಗುರಿ ನಮ್ಮದು. ಮುಂದಿನ ದಿನಗಳಲ್ಲಿ ಇದೇ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ.
– ಕೆ.ಸಿ.ವೇಣುಗೋಪಾಲ್‌, ರಾಜ್ಯ  ಉಸ್ತುವಾರಿ

ಸಿದ್ದರಾಮಯ್ಯ, ನಾನು ಇರೋವರೆಗೂ ಸರ್ಕಾರಕ್ಕೆ ಆತಂಕ ಇಲ್ಲ
ಹಾಸನ:
ಸಿದ್ದರಾಮಯ್ಯ ಹಾಗೂ ನಾನು ಇರುವವರೆಗೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.ಸಮ್ಮಿಶ್ರ ಸರ್ಕಾರ ಉಳಿಸುವ ಜವಾಬ್ದಾರಿ ನನಗೂ ಹಾಗೂ ಸಿದ್ದರಾಮಯ್ಯ ಅವರಿಗೂ ಇದೆ. ಆದ್ದರಿಂದ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಿಲ್ಲ. ಅಪಾಯ ಎದುರಾಗಲು ಬಿಡುವುದೂ ಇಲ್ಲ ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಸಿರಿರುವವರೆಗೂ ಸರ್ಕಾರ ಉರುಳಿಸಲು ಬಿಡಲ್ಲ ಎಂದು ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಇನ್ನಾದರೂ ಬಿಜೆಪಿಯವರು ರಾಜಕೀಯ ಅಸ್ಥಿರತೆ ಸೃಷ್ಟಿಸುವುದು ಕೈ ಬಿಡಬೇಕು ಎಂದರು. ಅಷ್ಟೇ ಅಲ್ಲ,  ಸಿದ್ದರಾಮಯ್ಯ ಮತ್ತು ನಾನು ಒಂದು ಕಾಲದ ಸ್ನೇಹಿತರು. ನಮಗಿಬ್ಬರಿಗೂ ಜವಾಬ್ದಾರಿಯಿದೆ ಎಂದು ಹೇಳಿದರು.

ಅತೃಪ್ತರ ಹಿಡಿದಿಟ್ಟುಕೊಳ್ಳಲು ಯತ್ನ
ಅತೃಪ್ತ ಕಾಂಗ್ರೆಸ್‌ ಶಾಸಕರ ಮನವೊಲಿಕೆ ಹಾಗೂ ಹಿಡಿದಿಟ್ಟುಕೊಳ್ಳುವ ಕಸರತ್ತು ಭಾನುವಾರವೂ ಮುಂದುವರಿದಿದ್ದು, ಚೆನ್ನೈಗೆ ಹೋಗಿದ್ದ ಮೂವರು ಶಾಸಕರು ನಗರಕ್ಕೆ ವಾಪಸ್‌ ಆಗಿದ್ದಾರೆ. ಎಂ.ಟಿ.ಬಿ.ನಾಗರಾಜ್‌ ಜತೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಸುಧಾಕರ್‌ ಜತೆ ಸಿದ್ದರಾಮಯ್ಯ ಮಾತನಾಡಿ ಆತುರದ ತೀರ್ಮಾನ ಕೈಗೊಳ್ಳದಂತೆ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ. ಮತ್ತೂಂದೆಡೆ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌ ಜತೆಗೂ ಸಿದ್ದರಾಮಯ್ಯ ಮಾತನಾಡಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.