ಫೇಸ್‌ಬುಕ್‌ನ ಸುಂದರ ಸ್ತ್ರೀಯರಿಗೆ ಅಶ್ಲೀಲ ಫೋಟೋ, ವಿಡಿಯೋ ರವಾನೆ!
Team Udayavani, Jun 2, 2022, 9:46 AM IST
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪರಿಚಯವಾಗುವ ಭಾರತ ಮತ್ತು ವಿದೇಶಿ ಮಹಿಳೆಯರಿಗೆ ಮೆಸೆಂಜರ್ ಮೂಲಕ ಲೈಂಗಿಕ ಪ್ರಚೋದನೆ ನೀಡುವಂತಹ ಅಪ್ರಾಪ್ತೆಯರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸುತ್ತಿದ್ದ ಫುಡ್ ಡೆಲಿವರಿ ಬಾಯ್‌ನನ್ನು ಆಗ್ನೇಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಡಿವಾಳದ ಜೈಭೀಮ್‌ನಗರದ ನಿವಾಸಿ ಪುರುಷೋತ್ತಮ್ (40) ಬಂಧಿತ. ಆರೋಪಿಯಿಂದ ಮೊಬೈಲ್ ಜಪ್ತಿ ಮಾಡಲಾಗಿದೆ.
ಆರೋಪಿ ಫೇಸ್‌ಬುಕ್ ನ ಮೆಸೆಂಜರ್‌ನಲ್ಲಿ ಯುವತಿಯರಿಗೆ ಅಪ್ರಾಪ್ತೆಯ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೈಬರ್ ಟಿಪ್‌ಲೈನ್ ಮೂಲಕ ಆರೋಪಿಯ ಮಾಹಿತಿ ಸಂಗ್ರಹಿಸಿ ರಾಜ್ಯಕ್ಕೆ ಕಳು ಹಿಸಿತ್ತು. ಈ ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪುರುಷೋತ್ತಮ್ ಹಲವು ವರ್ಷಗಳಿಂದಲೂ ಝ್ಯೊಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತ, ಫೇಸ್‌ಬುಕ್ ಮೂಲಕ ಅಪರಿಚಿತ ಸುಂದರ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಮಹಿಳೆ ಯರು ರಿಕ್ವೆಸ್ಟ್ ಸ್ವೀಕರಿಸಿದರೆ ಲೈಂಗಿಕ ಕ್ರಿಯೆಗೆ ಉತ್ತೇಜಿಸುವ ಅಶ್ಲೀಲ ವಿಡಿಯೋ ಹಾಗೂ ಫೋಟೊಗಳನ್ನು ಕಳುಹಿಸುತ್ತಿದ್ದ. ಸದ್ಯ ಆತನ ಮೊಬೈಲ್‌ನಲ್ಲಿ 8 ಮಂದಿಗೆ ವಿಡಿಯೋ ಕಳುಹಿಸಿರುವುದು ಪತ್ತೆಯಾಗಿದೆ.
ಇದನ್ನೂ ಓದಿ:ಮಾಜಿ ಪತ್ನಿ ಅಂಬರ್ ಹರ್ಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಗೆದ್ದ ಜಾನಿ ಡೆಪ್
ಎಫ್ ಎಸ್‌ಎಲ್ ಪರೀಕ್ಷೆಗೆ ಒಳಪಡಿಸಿದ ಬಳಿಕ ಎಷ್ಟು ಜನರಿಗೆ ಆ ರೀತಿ ಅಶ್ಲೀಲ ವಿಡಿಯೋ ಹಾಗೂ ಫೋಟೋ ಕಳುಹಿಸಿದ್ದಾನೆ ಎಂಬುದು ಪತ್ತೆಯಾಗಲಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ