ಮದ್ಯ ನಿಷೇಧ ಆಗ್ರಹಿಸಿ ವಿಧಾನಸೌಧಕ್ಕಿಂದು ಮುತ್ತಿಗೆ


Team Udayavani, Jan 30, 2019, 6:49 AM IST

madya-bandh.jpg

ಬೆಂಗಳೂರು: ಮದ್ಯಪಾನ ನಿಷೇಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಿಂದ ಆರಂಭವಾಗಿದ್ದ ಮಹಿಳೆಯರ ಪಾದಯಾತ್ರೆ ಮಂಗಳವಾರ ಬೆಂಗಳೂರು ನಗರವನ್ನು ಪ್ರವೇಶಿಸಿದ್ದು, ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಬುಧವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ.

ಜ.19 ರಂದು ಚಿತ್ರದುರ್ಗದಲ್ಲಿ ಆರಂಭವಾದ ಈ ಪಾದಯಾತ್ರೆಯು ಹಿರಿಯೂರು, ಶಿರಾ, ತುಮಕೂರು, ನೆಲಮಂಗಲ ಮಾರ್ಗವಾಗಿ ಸಾಗಿ 11 ದಿನಗಳ ನಂತರ ಮಂಗಳವಾರ ಬೆಂಗಳೂರು ನಗರವನ್ನು ಮಧ್ಯಾಹ್ನ ವೇಳೆಗೆ ಪ್ರವೇಶಿಸಿತು. ಸುಮಾರು 200 ಕಿ.ಮೀ ದೂರ ನಡೆದು ಬಂದ ಸಾವಿರಾರು ಮಹಿಳೆಯರು ಸಂಜೆ 8ಕ್ಕೆ ಮಲ್ಲೇಶ್ವರ ಮೈದಾನ ತಲುಪಿ ಅಲ್ಲಿಯೇ ವಿಶ್ರಾಂತಿ ಪಡೆದರು.

ಪಾದಯಾತ್ರೆ ಕುರಿತು ಮಹಿಳಾ ಮುಖಂಡರಾದ ವಿರುಪಮ್ಮ ಮಾತನಾಡಿ, ಮದ್ಯ ನಿಷೇಧ ಹೋರಾಟ ಮೂರು ವರ್ಷಗಳಿಂದ ಈ ಬೇಡಿಕೆ ರಾಜ್ಯ ಸರ್ಕಾರದ ಮುಂದಿದ್ದು, ಸರ್ಕಾರ ಮಾತ್ರ ಮದ್ಯ ಮಾರಾಟವು ಸರ್ಕಾರದ ಪ್ರಮುಖ ಆದಾಯ ಮೂಲ ಎಂದು ಹೇಳಿಕೊಂಡು ರಾಜ್ಯದ ಜನರನ್ನು ಯಾಮಾರಿಸುತ್ತಿದೆ.

ಆದರೆ, ಈ ಮದ್ಯಪಾನದಿಂದ ಶೇ.70 ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದು, ಕೌಟುಂಬಿಕ ಹಿಂಸೆಗಳು ನಿರಂತರವಾಗಿ ನಡೆಯುತ್ತಲೇ ಇವೆ. ಈ ಕುರಿತು ಸರ್ಕಾರಕ್ಕೆ ನ್ಯಾಯ ಕೇಳಬೇಕು ಎಂದು ನಿರ್ಧರಿಸಿ, ರಾಜ್ಯದ 28 ಜಿಲ್ಲೆಯ ಮಹಿಳೆಯರು ಬೀದಿಗಿಳಿದು ಧೀರ ಮಹಿಳೆ ಒನಕೆ ಓಬವ್ವ ಜಿಲ್ಲೆಯಲ್ಲಿ ಒಗ್ಗೂಡಿ ಬಿಸಿಲು, ಚಳಿಯನ್ನು ಲೆಕ್ಕಿಸದೇ 11 ದಿನ ನಿರಂತರ ಪಾದಯಾತ್ರೆ ನಡೆಸಿ ಬೆಂಗಳೂರು ತಲುಪಿದ್ದೇವೆ ಎಂದು ಹೇಳಿದರು.

ಬುಧವಾರ ಬೆಳಗ್ಗೆ ಮಲ್ಲೇಶ್ವರ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ಮಾಡಿ ಆ ನಂತರ 11 ಗಂಟೆಗೆ ನೇರವಾಗಿ ವಿಧಾನಸೌಧಕ್ಕೆ  ಮುತ್ತಿಗೆ ಹಾಕಿ, ಮದ್ಯ ನಿಷೇಧಕ್ಕೆ ಸೂಚನೆ ನೀಡುವಂತೆ ಮುಖ್ಯಮಂತ್ರಿ ಸೇರಿದಂತೆ ಶಾಸಕರು, ಸಚಿವರನ್ನು ಒತ್ತಾಯಿಸುತ್ತೇವೆ. ಮುಖ್ಯಮಂತ್ರಿಗಳು ನೇರವಾಗಿ ಬಂದು ನಮ್ಮ ಮನವಿಯನ್ನು ಕೇಳಬೇಕು. ಒಂದು ವೇಳೆ ಸರ್ಕಾರ ನಮ್ಮ ಬೆಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಪರಿಹಾರಕ್ಕೆ ಒತ್ತಾಯ: ಪಾದಯಾತ್ರೆ ವೇಳೆ ದಾಬಸ್‌ಪೇಟೆಯ ಕುಲವನಹಳ್ಳಿ ಬಳಿ ರೇಣುಕಮ್ಮ (60) ಎಂಬುವವರು ರಸ್ತೆ ಅಪಘಾತದಿಂದ ಸಾವಿಗೀಡಾಗಿದ್ದಾರೆ. ಮಹಿಳೆ ಸಾವಿಗೆ ನಮ್ಮ ಪಾದಯಾತ್ರೆಗೆ ಅಗತ್ಯ ಭದ್ರತೆ ಹಾಗೂ ನೆರವು ನೀಡದ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಹೀಗಾಗಿ, ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ದಾರಿಯುದ್ದಕ್ಕೂ ಮಠ ಮಂದಿರ ಬಯಲುಗಳಲ್ಲಿ ವಿಶ್ರಾಂತಿ ಪಡೆದು, ಅಕ್ಕಪಕ್ಕದ ಊರಿನ ಜನ ನೀಡಿದ ಊಟವನ್ನು ಮಾಡಿ, ಚಳಿ- ಗಾಳಿ ಎನ್ನದೇ ಸಾವಿರಾರು ಮಹಿಳೆಯರು ಮದ್ಯ ನಿಷೇಧಕ್ಕೆ ಪಣತೊಟ್ಟು ಪಾದಯಾತ್ರೆ ಮಾಡಿದ್ದೇವೆ. ಬುಧವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಮಹಿಳೆಯರ ಕೂಗನ್ನು ಮುಟ್ಟಿಸುತ್ತೇವೆ.  
-ಸ್ವರ್ಣಾ ಭಟ್‌, ರಾಜ್ಯ ಸಂಚಾಲನ ಸಮಿತಿ ಸದಸ್ಯೆ, ಮದ್ಯ ನಿಷೇಧ ಅಂದೋಲನ ಕರ್ನಾಟಕ ಸಮಿತಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.