ನಗರದಲ್ಲಿ ಮೊದಲ ದಿನ 72.66 ಲಕ್ಷ ರೂ. ಟ್ರಾಫಿಕ್ ದಂಡ ಸಂಗ್ರಹ
Team Udayavani, Mar 5, 2023, 11:28 AM IST
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಶೇ.50ರಷ್ಟು ರಿಯಾಯಿತಿ ದಂಡಕ್ಕೆ ಮತ್ತೂಮ್ಮೆ ಸರ್ಕಾರವು ಅವಕಾಶ ಕಲ್ಪಿಸಿದ ಬೆನ್ನಲ್ಲೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ದಿನವೇ 22,334 ಕೇಸ್ ಸಂಬಂಧ 72.66 ಲಕ್ಷ ರೂ. ದಂಡ ಸಂಗ್ರಹವಾಗಿದೆ.
ಫೆ.11ರೊಳಗೆ ದಾಖಲಾದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಸಂಬಂಧ ಮಾ.4ರಿಂದ ಮಾ.18ರ ವರೆಗೆ ಅಂದರೆ 15 ದಿನಗಳ ಕಾಲ ಸಾರ್ವಜನಿಕರು ಬಾಕಿ ದಂಡವನ್ನು ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್ಪಿ) ಆ್ಯಪ್, ಕರ್ನಾಟಕ ಒನ್ /ಬೆಂಗಳೂರು ಒನ್ ವೆಬ್ಸೈಟ್, ಪೇ ಟಿಎಂ ಆ್ಯಪ್, ಸಮೀಪದ ಸಂಚಾರ ಪೊಲೀಸ್ ಠಾಣೆ, ಸಂಚಾರ ನಿರ್ವಹಣಾ ಕೇಂದ್ರ(ಟಿಎಂಸಿ)ದ ಮೊದಲ ಮಹಡಿಯಲ್ಲಿ ದಣಂಡ ಪಾವತಿಗೆ ಅವಕಾಶವಿದೆ.
ಕಳೆದ ಬಾರಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೇವಲ 9 ದಿನಗಳಲ್ಲಿ 43.35 ಲಕ್ಷ ಪ್ರಕರಣಗಳಿಂದ 126.87 ಕೋಟಿ ರೂ. ದಂಡ ಸಂಗ್ರಹವಾಗಿತ್ತು. ಈ ಬಾರಿ ದಂಡ ಪಾವತಿಗೆ 15 ದಿನಗಳ ಕಾಲ ಕಾಲಾವಕಾಶ ನೀಡಿರುವುದರಿಂದ ಮತ್ತಷ್ಟು ಹೆಚ್ಚಿನ ಪ್ರಮಾಣದದಲ್ಲಿ ದಂಡ ಸಂಗ್ರಹವಾ ಗುವ ಸಾಧ್ಯತೆಗಳಿವೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂ.080 22942 883 ಅಥವಾ 080 22943381 ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ