ವಿಶ್ವವಾಣಿ ಫೌಂಡೇಷನ್ ಕಳಕಳಿ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ಖಾಸಗಿ ವೈದ್ಯರ ನಿಯೋಜನೆ


Team Udayavani, Apr 28, 2021, 8:30 PM IST

dfghdry

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದ ವಿಶ್ವವಾಣಿ ಫೌಂಡೇಷನ್ ಕ್ಷೇತ್ರದಲ್ಲಿ ಕೋವಿಡ್-19 ಸೋಂಕಿನಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆಗೆ ಸಹಾಯ ಹಸ್ತ ಚಾಚಿದೆ.

ಯಲಹಂಕದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯುವಂತೆ ಮಾಡುವ ದೃಷ್ಟಿಯಿಂದ ವಿಶ್ವವಾಣಿ ಫೌಂಡೇಷನ್ ಖಾಸಗಿ ಆಸ್ಪತ್ರೆಗಳ ವೈದ್ಯರನ್ನು ನಿಯೋಜನೆ ಮಾಡಲು ನಿರ್ಧರಿಸಿದೆ. ಇದಕ್ಕೆ ಪೂರಕವಾಗಿ ಕೊಲಂಬಿಯಾ ಏಷ್ಯಾ ಸೇರಿದಂತೆ ಇನ್ನಿತರೆ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜತೆ ಸಭೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ವೈದ್ಯರು ಸೋಂಕಿತರ ಚಿಕಿತ್ಸೆಗೆ ಲಭ್ಯವಾಗಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವನಾಥ್, ನಮ್ಮ ಕ್ಷೇತ್ರದಲ್ಲಿ ಸಾರ್ವಜನಿಕರು ಕೋವಿಡ್-19 ನಿಂದ ಸಂಕಷ್ಟಕ್ಕೆ ಒಳಗಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಕ್ರಮಗಳ ಜತೆಯಲ್ಲಿ ವಿಶ್ವವಾಣಿ ಫೌಂಡೇಷನ್ ಕೈಜೋಡಿಸಿದೆ. ವೈದ್ಯರ ಕೊರತೆಯನ್ನು ನೀಗಿಸುವ ಸಲುವಾಗಿ ಮೂರು ತಿಂಗಳ ಮಟ್ಟಿಗೆ ಖಾಸಗಿ ವೈದ್ಯರನ್ನು ನಿಯೋಜನೆ ಮಾಡಿಕೊಂಡು ಚಿಕಿತ್ಸೆ ಕೊಡಿಸಲಾಗುತ್ತದೆ. ಈ ಅವಧಿಯಲ್ಲಿ ವೈದ್ಯರಿಗೆ ಫೌಂಡೇಷನ್ ವತಿಯಿಂದಲೇ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ದಿನಸಿ ವಿತರಣೆ :

ಕ್ಷೇತ್ರದಲ್ಲಿ ಕೋವಿಡ್-19 ಸೋಂಕು ಪೀಡಿತರ ಕುಟುಂಬಗಳು ಹಸಿವಿನಿಂದ ಬಳಲುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಫೌಂಡೇಷನ್ ದಿನಸಿ ಪದಾರ್ಥಗಳನ್ನು ವಿತರಣೆ ಮಾಡುತ್ತಿದೆ. ಈ ಕಾರ್ಯದಲ್ಲಿ ಫೌಂಡೇಷನ್ ನ ಪ್ರತಿನಿಧಿಗಳು ನಿರತರಾಗಿದ್ದಾರೆ ಎಂದು ತಿಳಿಸಿದರು.

ವ್ಹೀಲ್ ಅಂಡ್ ಆಕ್ಸೆಲ್ ಮನವೊಲಿಕೆ ಯಶಸ್ವಿ

ಇದೇ ವೇಳೆ, ಕ್ಷೇತ್ರದ ಯಾವುದೇ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆ ಎದುರಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಆಮ್ಲಜನಕವನ್ನು ವಿತರಿಸುವಂತೆ ವ್ಹೀಲ್ ಅಂಡ್ ಆಕ್ಸೆಲ್ ಕಂಪನಿಯೊಂದಿಗೆ ನಡೆಸಿದ ಮಾತುಕತೆ ಸಫಲವಾಗಿದೆ. ಇದರನ್ವಯ ಕಂಪನಿಯು ಕ್ಷೇತ್ರದ ಎಲ್ಲಾ ಆಸ್ಪತ್ರೆಗಳಿಗೆ ಉಚಿತವಾಗಿ ಆಮ್ಲಜನಕವನ್ನು ಪೂರೈಕೆ ಮಾಡುವ ಭರವಸೆ ನೀಡಿದೆ ಮತ್ತು ಪೂರೈಕೆಗೆ ಬೇಕಾಗುವ ಕನ್ವರ್ಟರ್ ವಾಹನವನ್ನು ತನ್ನದೇ ಖರ್ಚಿನಲ್ಲಿ ಖರೀದಿಸಲು ನಿರ್ಧರಿಸಿದೆ. ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಗಳಿಗೆ ಉಚಿತವಾಗಿ ಆಮ್ಲಜನಕವನ್ನು ಪೂರೈಕೆ ಮಾಡಲಿದೆ ಎಂದು ವಿಶ್ವನಾಥ್ ಹೇಳಿದರು.

ಅದೇ ರೀತಿ, ಫೆಡರಲ್ ಮೊಘಲ್ ಸಂಸ್ಥೆಯೊಂದಿಗೂ ಮಾತುಕತೆ ನಡೆಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಗೆ ಅಗತ್ಯವಿರುವ ಸಲಕರಣೆಗಳನ್ನು ಉಚಿತವಾಗಿ ಒದಗಿಸುವಂತೆ ಮನವಿ ಮಾಡಲಾಗಿದ್ದು, ಸಂಸ್ಥೆಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ 7 ವೆಂಟಿಲೇಟರ್ ಗಳನ್ನು ಅಳವಡಿಸಲಾಗಿದ್ದು, ಒಂದೆರಡು ದಿನಗಳಲ್ಲಿ ಇನ್ನೂ ಮೂರು ವೆಂಟಿಲೇಟರ್ ಗಳನ್ನು ಅಳವಡಿಸಿ, ಇಂಟೆನ್ಸಿವ್ ಕೇರ್ ಯೂನಿಟ್ ಗಳನ್ನು ಸುಸಜ್ಜಿತಗೊಳಿಸಲಾಗುತ್ತಿದೆ. ಸರ್ಕಾರದಿಂದ ಸೋಂಕಿತರಿಗೆ ಔಷಧವನ್ನು ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಹಜ್ ಭವನದಲ್ಲಿ 450 ಹಾಸಿಗೆ ವ್ಯವಸ್ಥೆ

ಯಲಹಂಕ ವಲಯ ವ್ಯಾಪ್ತಿಯಲ್ಲಿರುವ ಹಜ್ ಭವನವನ್ನು ಕೋವಿಡ್-19 ಚಿಕಿತ್ಸೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿ 450 ಜನರಿಗೆ ಏಕಕಾಲಕ್ಕೆ ಚಿಕಿತ್ಸೆ ನೀಡಲು ಹಾಸಿಗೆ ವ್ಯವಸ್ಥೆಯನ್ನು ಸಜ್ಜುಗೊಳಿಸಲಾಗುತ್ತಿದ್ದು, ಮೂರ್ನಾಲ್ಕು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.

ಲಸಿಕಾ ಕೇಂದ್ರಗಳಲ್ಲಿ ಬಿಜೆಪಿ ಸ್ವಯಂ ಸೇವಕರ ಸೇವೆ

ಇನ್ನು, ಕೋವಿಡ್ ಲಸಿಕೆ ನೀಡಲಾಗುತ್ತಿರುವ ಕೇಂದ್ರಗಳಿಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರು, ಸಾಮಾಜಿಕ ಅಂತರ ವ್ಯವಸ್ಥೆಯನ್ನು ಕಾಯ್ದುಕೊಳ್ಳುವುದು ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಭಾರತೀಯ ಜನತಾ ಪಕ್ಷದ ಸ್ವಯಂ ಸೇವಕರು ಮಾಡುತ್ತಿದ್ದಾರೆ.

ಕೋವಿಡ್ ಪಾಸಿಟಿವ್ ಬಂದ ತಕ್ಷಣ ಯಾರೂ ದೃತಿಗೆಡಬಾರದು. ಧೈರ್ಯದಿಂದ ಇರಬೇಕು ಮತ್ತು ಅಗತ್ಯ ಶಿಷ್ಠಾಚಾರಗಳನ್ನು ಪಾಲಿಸಬೇಕು. ಕೋವಿಡ್ ಅನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತಂದಿರುವ ಕಟ್ಟುನಿಟ್ಟಿನ ಕ್ರಮಗಳನ್ನು ಉಲ್ಲಂಘನೆ ಮಾಡಬಾರದು ಮತ್ತು ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸುವುದು, ಆಗಿಂದಾಗ್ಗೆ ಕೈ ತೊಳೆದುಕೊಳ್ಳುವುದನ್ನು ಮರೆಯಬಾರದು ಎಂದು ವಿಶ್ವನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.