ಶ್ರೀ ಸಾಮಾನ್ಯರ ಕೈಗೂ ಎಟುಕಿದ ವೋಲ್ವೋ ದರ 

Team Udayavani, Dec 29, 2021, 2:24 PM IST

ಶ್ರೀ ಸಾಮಾನ್ಯರ ಕೈಗೂ ಎಟುಕಿದ ವೋಲ್ವೋ ದರ 

ಬೆಂಗಳೂರು: ವೋಲ್ವೋ ಬಸ್‌ಗಳು ಗರಿಷ್ಠ ಪ್ರಮಾಣದ ದರ ಇಳಿಕೆಯ ಮೂಲಕ ಹೆಚ್ಚು ಪ್ರಯಾಣಿಕರ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಐಟಿ ಕಾರಿಡಾರ್‌, ವಿಮಾನ ನಿಲ್ದಾಣಗಳಂತಹ ಮಾರ್ಗಗಳಲ್ಲಿ ಸಂಚರಿಸುವ ವೋಲ್ವೋ ಬಸ್‌ಗಳಲ್ಲಿ ಸಾಮಾನ್ಯವಾಗಿ ಟೆಕ್ಕಿಗಳು ಸೇರಿದಂತೆ ಮೇಲ್ಮಧ್ಯಮ ವರ್ಗ ಹೆಚ್ಚಾಗಿ ಪ್ರಯಾಣಿಸುತ್ತಿತ್ತು. ಆದರೆ, ಒಟ್ಟಾರೆ ಶೇ. 50 ಪ್ರಯಾಣ ದರ ಕಡಿತಗೊಂಡಿರುವುದರಿಂದ ಮಧ್ಯಮ-ಕೆಳ ಮಧ್ಯಮ ವರ್ಗವೂ ಈ ಹೈಟೆಕ್‌ ಬಸ್‌ಗಳಲ್ಲಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ.

ಸಾಮಾನ್ಯ ಬಸ್‌ಗಳಿಗೆ ಹೋಲಿಸಿದರೆ ವೋಲ್ವೋ ಬಸ್‌ಗಳ ದರ ಈಗ 5ರಿಂದ 10 ರೂ. ಮಾತ್ರ ಅಂತರ ಇದೆ. ಈ ಹವಾನಿಯಂತ್ರಿತ ಬಸ್‌ಗಳಲ್ಲಿ ಜನದಟ್ಟಣೆ ಕೂಡ ಕಡಿಮೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಈಮಾದರಿಯ ಬಸ್‌ಗಳು ಹೆಚ್ಚು ಹತ್ತಿರವಾಗುತ್ತಿವೆ.ಉದಾಹರಣೆಗೆ ಮೆಜೆಸ್ಟಿಕ್‌ನಿಂದ ದೊಡ್ಡಬಳ್ಳಾಪುರಕ್ಕೆಸಾಮಾನ್ಯ ಬಸ್‌ ಪ್ರಯಾಣ ದರ 35 ರೂ. ಇದ್ದರೆ,ವೋಲ್ವೋದಲ್ಲಿ 45 ರೂ. ಆಗಿದೆ ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ರಸ್ತೆಗಿಳಿದ ಅಧಿಕಾರಿಗಳು: ದರ ಇಳಿಕೆ ಮಾತ್ರವಲ್ಲದೇ, ಪ್ರಯಾಣಿಕರನ್ನು ಆಕರ್ಷಿಸಲು ವೋಲ್ವೋ ಸಿಬ್ಬಂದಿ ಬಸ್‌ಗಳ ಮೇಲೆ ಭಿತ್ತಿ ಪತ್ರಗಳನ್ನು ಅಂಟಿಸುವುದು, ಮೆಜೆಸ್ಟಿಕ್‌ನಲ್ಲಿ ಧ್ವನಿ ಪೆಟ್ಟಿಗೆಗಳ ಮೂಲಕ ಸಂದೇಶ ನೀಡುವುದು, ಕರಪತ್ರಗಳನ್ನು ಹಂಚುವ ಕೆಲಸ ನಗರದಲ್ಲಿ ನಡೆಯುತ್ತಿವೆ.

ವೋಲ್ವೋ ದಿನದ ಪಾಸ್‌ ರೂ.120 ರಿಂದ ರೂ.100 ಹಾಗೂ ತಿಂಗಳ ಪಾಸ್‌ ರೂ. 2000 ದಿಂದ ರೂ.1500ಕ್ಕೆ ಇಳಿಕೆಗೊಂಡಿದೆ. ಇದರಿಂದಾಗಿ ಬೈಕ್‌ ಮತ್ತು ಕಾರುಗಳಲ್ಲಿ ಚಲಿಸುವ ಸಾಕಷ್ಟು ಜನ ವೋಲ್ವೋ ಬಸ್‌ಗೆ ಶಿಫ್ಟ್ ಆಗುತ್ತಿದ್ದಾರೆ. ನಗರಾದ್ಯಂತ ಪ್ರಮುಖ ರಸ್ತೆಗಳಲ್ಲಿ 750 ಬಸ್‌ಗಳಲ್ಲಿ 261 ಬಸ್‌ಗಳು ಕಾರ್ಯಾಚರಣೆ ಮಾಡುತ್ತಿವೆ.

ಸಾಮಾನ್ಯ ಬಸ್‌ಗಿಂತ ವೋಲ್ವೋ ಬಸ್‌ಗಳಲ್ಲಿ ಸ್ಥಳಾವಕಾಶ ಹೆಚ್ಚಾಗಿರುತ್ತದೆ. ಆದ್ದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು, ಹೆಚ್ಚಿನ ಲಗೇಜ್‌ ನೊಂದಿಗೆ ಪ್ರಯಾಣಿಸುವವರು, ವೋಲ್ವೋ ಬಸ್‌ ಗಳ ಕಡೆ ಮುಖ ಮಾಡಿದ್ದಾರೆ. ನಗರದಲ್ಲಿನ ಬಹುತೇಕ ಐಟಿ-ಬಿಟಿ ಕಂಪನಿಗಳು ಜನವರಿಯಲ್ಲಿಆರಂಭ ಮಾಡುವ ಮುನ್ಸೂಚನೆ ಒಂದು ಕಡೆ ಇದ್ದರೆ, ಮತ್ತೂಂದೆಡೆ ಒಮಿಕ್ರಾನ್‌ ಭೀತಿ ಹಿನ್ನೆಲೆ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ನೋಡಬೇಕು.

ವೋಲ್ವೋ ಬಸ್‌ ದರ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಸಾಮಾನ್ಯ ವರ್ಗ ದವರು ಎಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವುದು ಕಂಡು ಬಂದಿದೆ. ಜನರ ಸಹಕಾರವಿದ್ದು, ಇನ್ನೂ ಹೆಚ್ಚಿನ ಸಂಖ್ಯೆ ಜನ ತಲುಪಿಸಲು ಯತ್ನಿಸುತ್ತಿದ್ದೇವೆ. ಈಬೆಳವಣಿಗೆಯು ಬಿಎಂಟಿಸಿ ಆದಾಯಕ್ಕೂ ಸಹಕಾರಿಯಾಗು ತ್ತದೆ. ಮುಂಬರುವ ದಿನಗಳಲ್ಲಿ ಇನ್ನೂ 100 ವೋಲ್ವೋ ಬಸ್‌ ಗಳನ್ನು ಹೆಚ್ಚಿಸುವ ಚಿಂತನೆಯಿದೆ.– ಅನ್ಬುಕುಮಾರ್‌, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.