ಕಾಂಗ್ರೆಸ್ಗೆ ಮತ ಹಾಕಿ: ಮಾತೆ ಮಹಾದೇವಿ ಕರೆ
Team Udayavani, Apr 8, 2018, 6:20 AM IST
ಬೆಂಗಳೂರು:ಲಿಂಗಾಯತರಿಗೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವಂತೆ ಶಿಫಾರಸ್ಸು ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಮತ ನೀಡಲಾಗುವುದು ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಘೋಷಿಸಿದ್ದಾರೆ.
ಲಿಂಗಾಯತ ಮಠಾಧೀಶರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲಿಂಗಾಯತರಿಗೆ ಪ್ರತ್ಯೇಕ ಮಾನ್ಯತೆ ನೀಡಿದರೆ ಬಿಜೆಪಿಗೆ ಬೆಂಬಲ ನೀಡುವುದಾಗಿ ಪಂಚ ಪೀಠಾಧೀಶರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.
ಆದರೆ, ಅವರ ಬೆದರಿಕೆಯನ್ನೂ ಲೆಕ್ಕಿಸದೆ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ಇದು ತಮ್ಮ ವೈಯಕ್ತಿಕ ಅಭಿಪ್ರಾಯವಾಗಿದ್ದು, ನಮಗೆ ಸಹಕಾರ ನೀಡಿದವರಿಗೆ ನಾವು ಸಹಕಾರ ನೀಡುವುದು ನಮ್ಮ ಧರ್ಮ ಎಂದು ಹೇಳಿದ ಮಾತೆ ಮಹದಾದೇವಿ, ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸ್ಸು ಬಗ್ಗೆ ಕೇಂದ್ರ ಸರ್ಕಾರ ಆದಷ್ಟು ಬೇಗ ತೀರ್ಮಾನ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 18 ರ ಬಸವ ಜಯಂತಿ ದಿನ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಕೊಡುಗೆ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ