ಓಟರ್ ಐಡಿ ಪತ್ತೆ: ಅರ್ಜಿ ವಾಪಸ್
Team Udayavani, Aug 15, 2019, 3:05 AM IST
ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫ್ಲಾಟ್ ಒಂದರಲ್ಲಿ “ಮತದಾರರ ಗುರುತಿನ ಚೀಟಿ’ ಪತ್ತೆಯಾದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೂರುದಾರ ರಾಕೇಶ್ ವಾಪಸ್ ಪಡೆದುಕೊಂಡರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಮೈಕೆಲ್ ಡಿ. ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮೆಮೋ (ಜ್ಞಾಪನಾ ಪತ್ರ) ಸಲ್ಲಿಸಿದ ದೂರುದಾರ ರಾಕೇಶ್ ಪರ ವಕೀಲರು, ತಮ್ಮ ಕಕ್ಷಿದಾರರು ಅರ್ಜಿ ಹಿಂಪಡೆಯಲಿದ್ದಾರೆ ಎಂದು ತಿಳಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಾಪಸ್ ಪಡೆಯಲು ಸಮ್ಮಿತಿ ಸೂಚಿಸಿತು.
ಕಳೆದ ವಾರ ಈ ಅರ್ಜಿಯು ನ್ಯಾ. ಪಿ.ಎಸ್. ದಿನೇಶ್ಕುಮಾರ್ ಅವರ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ಮುಕ್ತಾಯ ಹಂತದಲ್ಲಿತ್ತು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ನ್ಯಾಯಪೀಠ ಇಂಗಿತ ವ್ಯಕ್ತಪಡಿಸಿತು. ಆದರೆ, ಬುಧವಾರ ದೂರುದಾರ ರಾಕೇಶ್ ಅವರು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.
2018ರ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜಾಲಹಳ್ಳಿಯ ಎಸ್ಎಲ್ವಿ ಪಾರ್ಕ್ ವ್ಯೂ ನಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಸಂಬಂಧ ಬಿಜೆಪಿ ಕಾರ್ಯಕರ್ತ ರಾಕೇಶ್ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಚುನಾವಣಾ ಆಯೋಗ ಕೂಡ ದೂರು ದಾಖಲಿಸಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ತನಿಖೆ ನಡೆಸಿ ಮುನಿರತ್ನ ಸೇರಿದಂತೆ 34 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು