ನಕಲಿ ಶೈಕ್ಷಣಿಕ ಕೇಂದ್ರಗಳಿವೆ ಎಚ್ಚರಿಕೆ

Team Udayavani, Dec 12, 2019, 3:08 AM IST

nakali

ಬೆಂಗಳೂರು: ದೇಶದ ಪ್ರತಿಷ್ಠಿತ ದೂರಶಿಕ್ಷಣ ವಿವಿಗಳ ನಕಲಿ ಅಂಕಪಟ್ಟಿ ನೀಡುವ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ವಿವಿಧ ವಿಶ್ವವಿದ್ಯಾಲಯಗಳ 30ಕ್ಕೂ ಹೆಚ್ಚು ನಕಲಿ ಅಂಕಪಟ್ಟಿ, ವಿಶ್ವವಿದ್ಯಾಲಯಗಳ ಸ್ಟಾಂಪ್‌ಗ್ಳು, ಅಂಕಪಟ್ಟಿ ತಯಾರಿಗೆ ಬಳಸುತ್ತಿದ್ದ ಕಂಪ್ಯೂಟರ್‌ ಸೇರಿ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿ. ಶ್ರೀನಿವಾಸ ರೆಡ್ಡಿ (42)ಬಂಧಿತ ಆರೋಪಿ. ಮಹಾಲಕ್ಷ್ಮೀ ಲೇಔಟ್‌ನಲ್ಲಿ ವಿ.ಎಸ್‌.ಎಸ್‌ ಇನ್‌ಸ್ಟಿಟ್ಯೂಟ್‌ ಆಫ್ ಎಜುಕೇಶನಲ್‌ ರೀಸರ್ಚ್‌ ಅಂಡ್‌ ವೆಂಕಟೇಶ್ವರ ಇಂಟರ್‌ ನ್ಯಾಷನಲ್‌ ಎಜುಕೇಶನಲ್‌ ಸೊಸೈಟಿ ನಡೆಸುತ್ತಿದ್ದಾನೆ. ಆರೋಪಿ ಬಳಿ ಡೆಲ್ಲಿ ಅಕಾಡೆಮಿಕ್‌ ಕೌನ್ಸಿಲ್‌ಫಾರ್‌ ಎಜುಕೇಶನ್‌, ಹಿಮಾಚಲ ಪ್ರದೇಶದ ಮಾನ್ವ ಭಾರತಿ ವಿವಿ, ಬಿಲಾಸ್‌ಪುರ್‌ನ ಡಾ. ಸರ್‌ ಸಿ.ವಿ ರಾಮನ್‌ ವಿ.ವಿ, ತಿರುಪತಿಯ ವೆಂಕಟೇಶ್ವರ ವಿವಿ ಸೇರಿದಂತೆ ಹತ್ತಾರು ದೂರಶಿಕ್ಷಣ ವಿವಿಗಳ ಅಂಕಪಟ್ಟಿಗಳು ಪತ್ತೆಯಾಗಿವೆ.

ಅಂಕಪಟ್ಟಿ ಅಗತ್ಯ ಇರುವವರನ್ನು ಸಂಪರ್ಕಿಸಿ ದೂರಶಿಕ್ಷಣ ಕೊಡಿಸುವುದಾಗಿ ನಂಬಿಸುತ್ತಿದ್ದ ಆರೋಪಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಫಿಲ್‌, ಎಂಟೆಕ್‌, ಬಿಫಾರ್ಮ್, ಎಂ ಫಾರ್ಮ್, ಬಿಎಡ್‌, ಎಂಎಡ್‌ ಕೋರ್ಸ್‌ಗಳಿಗೆ ದಾಖಲು ಮಾಡಿಕೊಳ್ಳುತ್ತಿದ್ದ ಬಳಿಕ ಅವರಿಗೆ ತನ್ನದೇ ಸಂಸ್ಥೆಯಲ್ಲಿ ಪರೀಕ್ಷೆ ಬರೆಸುತ್ತಿದ್ದ. ಪರೀಕ್ಷೆ ಬರೆದವರಿಂದ 40 ಸಾವಿರ ರೂ.ಗಳಿಂದ 2ಲಕ್ಷ ರೂ.ಗಳವರೆಗೆ ಹಣ ಪಡೆದು ನಕಲಿ ಅಂಕಪಟ್ಟಿಗಳನ್ನು ನೀಡುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2ನೇ ಬಾರಿ ಆರೋಪಿ ಪೊಲೀಸರ ಅತಿಥಿ!: ಆರೋಪಿ ಶ್ರೀನಿವಾಸ ರೆಡ್ಡಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ಸಂಬಂಧ 2018ರಲ್ಲಿಯೂ ಸಿಸಿಬಿ ಪೊಲೀಸರಿಂದ ಬಂಧಿತನಾಗಿದ್ದ. ಕಳೆದ ವರ್ಷ ಜನವರಿಯಲ್ಲೂ ವೆಂಕಟೇಶ್ವರ ಎಜುಕೇಶನಲ್‌ ಸೊಸೈಟಿ ಹೆಸರಿನಲ್ಲಿಯೇ ದಂಧೆ ನಡೆಸುತ್ತಿದ್ದ, ಈ ವೇಳೆ ಆತನ ಸಹಚರನೂ ಬಂಧಿತನಾಗಿದ್ದ. ಈ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಶ್ರೀನಿವಾಸ ರೆಡ್ಡಿ ಪುನ: ದಂಧೆ ಆರಂಭಿಸಿದ್ದಾನೆ. ಈ ಕುರಿತು ಮಾಹಿತಿ ಆಧರಿಸಿ ಸಿಸಿಬಿ ಎಸಿಪಿ ವೇಣುಗೋಪಾಲ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಶ್ರೀನಿವಾಸ ರೆಡ್ಡಿಯನ್ನು ಬಂಧಿಸಿದೆ. ಆತನ ಇನ್ನಿತರೆ ವ್ಯವಹಾರಗಳ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದರು.

ವಿವಿಗಳ ನೈಜತೆ ಬಗ್ಗೆ ತನಿಖೆ!: ಆರೋಪಿ ಬಳಿ ಸಿಕ್ಕಿರುವ ದೂರಶಿಕ್ಷಣ ನೀಡುವ ವಿಶ್ವವಿದ್ಯಾಲಯಗಳು ನಿಜಕ್ಕೂ ಅಸ್ತಿತ್ವದಲ್ಲಿವೆಯೇ ಎಂಬುದು ಮೊದಲು ಖಚಿತವಾಗಬೇಕಿದೆ. ಈ ನಿಟ್ಟಿನಲ್ಲಿ ಅವುಗಳ ಇರುವಿಕೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದರು.

ಅಂಕಪಟ್ಟಿ ಸಿಕ್ಕರೆ ಸಾಕು: ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡು ತ್ತಿದ್ದವರು, ವಿದೇಶಗಳಲ್ಲಿ ಉದ್ಯೋಗ ಮಾಡಲು ಅಂಕಪಟ್ಟಿ ಅಗತ್ಯವಿದ್ದಂತಹವರನ್ನೇ ಶ್ರೀನಿವಾಸ ರೆಡ್ಡಿ ಗುರುತು ಹಾಕಿಕೊಳ್ಳುತ್ತಿದ್ದ ಬಳಿಕ ದೂರ ಶಿಕ್ಷಣದ ಮೂಲಕ ಕಡಿಮೆ ಅವಧಿಯಲ್ಲಿ ಅಂಕಪಟ್ಟಿಗಳನ್ನು ಕೊಡಿಸುವುದಾಗಿ ನಂಬಿಸುತ್ತಿದ್ದ. ಮುಂಬಡ್ತಿ ಹಾಗೂ ವಿದೇಶದಲ್ಲಿ ಕೆಲಸ ಪಡೆಯಲು ತಹತಹಿಸುತ್ತಿದ್ದವರು ಹಣ ಕೊಡಲು ಸಿದ್ಧರಾಗುತ್ತಿದ್ದರು. ಅಂಕಪಟ್ಟಿ ಪಡೆದವರು ನೈಜತೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಅವರಿಗೆ ಉದ್ಯೋಗ ನೀಡಿದವರೂ ಅಂಕಪಟ್ಟಿಗಳ ಸಾಚಾತನದ ತಿಳಿಯುವ ಗೋಜಿಗೆ ಹೋಗುತ್ತಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ ದಂಧೆ ಮುಂದುವರಿ ಸಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.