ಕಾಲೇಜುಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಘಟಕ
Team Udayavani, Sep 1, 2018, 12:05 PM IST
ಬೆಂಗಳೂರು: ‘ರಾಜ್ಯದ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನೀರಿನ ಮರು ಬಳಕೆಗೆ ತ್ಯಾಜ್ಯ ನೀರು ಸಂಸ್ಕರಣೆ ಘಟಕ ಸ್ಥಾಪಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಚಿವ ಜಿ.ಟಿ.ದೇವೇಗೌಡ ಸೂಚನೆ ನೀಡಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಎನ್.ನಾಗಾಂಬಿಕ ದೇವಿಯವರು ಅಧಿಕಾರ ವಹಿಸಿಕೊಂಡ ನಂತರ ಶುಕ್ರವಾರ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಪ್ರಧಾನ ಕಾರ್ಯದರ್ಶಿ ಸಹಿತವಾಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸೆಂಟ್ರಲ್ ಕಾಲೇಜು ಸಮೀಪವಿರುವ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಸಭೆ ನಡೆಸಿದ್ದಾರೆ.
ಕಾಲೇಜುಗಳಲ್ಲಿ ಶೌಚಾಲಯ ಮತ್ತು ನೀರಿನ ಮರು ಬಳಕೆ ಸಂಬಂಧ ಅಗತ್ಯ ತುರ್ತು ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಸರ್ಕಾರಿ ಪದವಿ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಶೌಚಾಲಯ ಮತ್ತು ನೀರಿನ ಕೊರತೆ ಇರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಕಾಲೇಜುಗಳಲ್ಲಿ ಶೌಚಾಲಯ ಮತ್ತು ತ್ಯಾಜ್ಯ ನೀರು ಸಂಸ್ಕರಣ ಘಟಕ(ಎಸ್‌ಟಿಪಿ) ಸ್ಥಾಪಿಸಲು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕಾಲೇಜುಗಳಲ್ಲಿ ನೀರಿನ ಮರು ಬಳಕೆ ಮಾಡುವ ಉದ್ದೇಶದಿಂದ ತ್ಯಾಜ್ಯ ನೀರು ಸಂಸ್ಕರಣ ಘಟಕ ಪ್ರಾರಂಭಿಸುವುದು ಅಗತ್ಯ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಸ್ವತ್ಛ ಭಾರತ್ ಅಭಿಯಾನದಡಿ 600 ಕೋಟಿ ರೂ. ಅನುದಾನಕ್ಕೆ ಮನವಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದರ ಜತೆಗೆ ಇಲಾಖೆಯಲ್ಲಿ ತುರ್ತಾಗಿ ವಿಲೇವಾರಿಯಾಗಬೇಕಿರುವ ಕಡತಗಳ ಬಗ್ಗೆಯೂ ಮಾಹಿತಿ ಪಡೆದು, ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್.ಮಂಜುಳಾ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಜಾಫೆಟ್ ಮೊದಲಾದರು ಇದ್ದರು.
ರೇಂಜರ್, ರೋವರ್ ಕಡ್ಡಾಯ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮದಡಿ ರೋವರ್ ಮತ್ತು ರೇಂಜರ್ ಘಟಕ ಕಡ್ಡಾಯವಾಗಿ ಆರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಎನ್‌ಎಸ್‌ಎಸ್ ಘಟಕದ ಜತೆಗೆ ರೋವರ್ ಮತ್ತು ರೇಂಜರ್ ಘಟಕ ತೆರೆಯಬೇಕು. ವರ್ಷಕ್ಕೆ ಪ್ರತಿ
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ 50ರೂ. ಶುಲ್ಕ ಈ ಕಾರ್ಯಕ್ಕಾಗಿ ಪಡೆಯುವುದು.
ಆಯಾ ಕಾಲೇಜಿನಿಂದ ರೇಂಜರ್, ರೋವರ್ ಕಾರ್ಯಕ್ರಮ ಆಯೋಜನೆಗೆ ಉಪನ್ಯಾಸಕರನ್ನು ನೇಮಿಸಬೇಕು. ವಾರದಲ್ಲಿ ಒಂದು ಅವಧಿಯನ್ನು ನಿಯೋಜಿತ ಉಪನ್ಯಾಸಕರು ಈ ಕಾರ್ಯಕ್ಕಾಗಿಯೇ ಮೀಸಲಿಡಬೇಕು. ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನೊಂದಿಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಇಲಾಖೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳಿಂದ ಶುಲ್ಕದ ರೂಪದಲ್ಲಿ ಪಡೆಯುವ ಹಣ ಯಾವ ರೀತಿ ವಿನಿಯೋಗ ಮಾಡಬೇಕು ಎಂಬುದಕ್ಕೂ ಸೂಕ್ತ ನಿರ್ದೇಶನ ಇಲಾಖೆಯಿಂದ ನೀಡಲಾಗಿದೆ. ಕಾಲೇಜಿನಲ್ಲಿ ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಇಲಾಖೆಯ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ನಿನಗೆ ಬೇರೆ ಹೆಸರು ಬೇಕೇ.. ಸ್ತ್ರೀ ಎಂದರೆ ಅಷ್ಟೇ ಸಾಕೆ..!
Live; ರಾಜ್ಯ ಬಜೆಟ್ ಮಂಡಿಸಿದ ಬಿಎಸ್ ವೈ; ಬಜೆಟ್ ಮಂಡನೆ ವಿರೋಧಿಸಿ ಕಾಂಗ್ರೆಸ್ ಸಭಾತ್ಯಾಗ
ಮೀಸಲಿಗಾಗಿ ಪಂಚಮಸಾಲಿ ಹೋರಾಟ : ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?
ಕೊಡಗಿನಲ್ಲಿ ವ್ಯಾಘ್ರ ಅಟ್ಟಹಾಸ: 8 ವರ್ಷದ ಬಾಲಕನನ್ನು ಕೊಂದು ಹಾಕಿದ ಹುಲಿ
ಸುದ್ದಿ ಸುತ್ತಾಟ : ಹನಿಟ್ರ್ಯಾಪ್ ಮಾಯಾಜಾಲದ ಹಿಂದೆ – ಮುಂದೆ