ವಿಷ ಕುಡಿದರೂ ಅಮೃತ ಎಂದುಕೊಂಡಿದ್ದೇವೆ
Team Udayavani, Mar 16, 2019, 6:33 AM IST
ಬೆಂಗಳೂರು: ರಾಜ್ಯದಲ್ಲಿ ಈಗಲೂ ಸಿದ್ದರಾಮಯ್ಯ ಅವರೇ ನಮಗೆ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಮೈತ್ರಿ ಪಕ್ಷದಲ್ಲಿ ಬಿರುಗಾಳಿ ಎಬ್ಬಿಸಿದ್ದ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮತ್ತೂಂದು ವಿವಾದಾತ್ಮ ಕ ಹೇಳಿಕೆ ನೀಡಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರ ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದರಿಂದ ಕಾಂಗ್ರೆಸ್ಗೆ ಹೊಡೆತ ಬೀಳುತ್ತದೆ. ಆದರೂ, ಪಕ್ಷದ ಹೈ ಕಮಾಂಡ್ ಹೇಳಿರುವುದರಿಂದ ಶಿರಸಾ ವಹಿಸಿ ಪಾಲಿಸುತ್ತೇವೆ.
ಕೆಲವರು ಅಮೃತ ಕುಡಿದರೂ ವಿಷ ಕುಡಿಯುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ, ನಾವು ವಿಷ ಕುಡಿದರೂ ಅಮೃತ ಕುಡಿಯುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದೇವೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದರು.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದರೂ, ಜೆಡಿಎಸ್ ಪರವಾಗಿ ಕೆಲಸ ಮಾಡುತ್ತೇವೆ. ಜೆಡಿಎಸ್ನಿಂದ ಯಾವುದೇ ಅಭ್ಯರ್ಥಿ ಸ್ಪರ್ಧಿಸಿದರೂ, ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ. ಹೈ ಕಮಾಂಡ್ ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದರಿಂದ ಪಕ್ಷದ ಆದೇಶ ಪಾಲಿಸುತ್ತೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್