ಗುಂಡಿ ಮುಚ್ಚಿಲ್ಲವೇಕೆ; ವಿವರಣೆ ಕೊಡಿ

Team Udayavani, Nov 12, 2019, 3:07 AM IST

gundi-mucchilla

ಬೆಂಗಳೂರು: ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತ ನ್ಯಾಯಾಲಯದ ಆದೇಶ ಪಾಲನೆ ಮಾಡದ ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌, ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ವಿವರಣೆ ನೀಡುವಂತೆ ಆದೇಶಿಸಿದೆ.

ಈ ಕುರಿತಂತೆ ಕೋರಮಂಗಲದ ನಿವಾಸಿ ವಿಜಯನ್‌ ಮೆನನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ. ಎಸ್‌.ಆರ್‌. ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ, ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯಗೊಂಡವರಿಗೆ ಪರಿಹಾರ ನೀಡುವ ಕುರಿತಂತೆ “ಕರ್ನಾಟಕ ಪೌರಾಡಳಿತ ಕಾಯ್ದೆ’ಯಲ್ಲಿ ಯಾವುದೇ ಸ್ಪಷ್ಟ ವಿವರಣೆ ಇಲ್ಲ. ಈ ವಿಚಾರವಾಗಿ ಪಾಲಿಕೆ ಇನ್ನೂ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ. ಇದಕ್ಕಾಗಿ ತಜ್ಞರ ಅಭಿಪ್ರಾಯದ ನಿರೀಕ್ಷೆಯಲ್ಲಿದ್ದೇವೆ’ ಎಂದು ಸಮಜಾಯಿಷಿ ನೀಡಿದರು.

ಅಪಘಾತಗಳು ರಸ್ತೆ ಗುಂಡಿಗಳಿಂದಲೇ ಆಗಿವೆ ಎಂಬ ಬಗ್ಗೆ ನಿರ್ದಿಷ್ಟ ಸಾಕ್ಷ್ಯಾಗಳಿರಬೇಕು ಮತ್ತು ಇಂತಹ ಅರ್ಜಿಗಳನ್ನು ಸ್ವೀಕರಿಸುವ ಹಾಗೂ ವಿಲೇವಾರಿ ಮಾಡುವ ಬಗ್ಗೆ ಸ್ಪಷ್ಟ ಕಾನೂನುಗಳಿಲ್ಲ. ಆದಾಗ್ಯೂ, ನ್ಯಾಯಪೀಠದ ಆದೇಶದ ಅನುಸಾರ ಶೇ.100ರಷ್ಟು ಗುಂಡಿ ಮುಕ್ತ ಮಾಡಲು ಪಾಲಿಕೆ ಶ್ರಮ ವಹಿಸುತ್ತದೆ. ಆದ್ದರಿಂದ ಅಪಘಾತ ಪರಿಹಾರ ನೀಡಿಕೆ ಕುರಿತಂತೆ ಜಾಹೀರಾತು ಮೂಲಕ ಸಾರ್ವಜನಿಕರಿಗೆ ಪ್ರಚಾರ ನೀಡಬೇಕೆಂಬ ಆದೇಶ ವಾಪಸ್‌ ಪಡೆಯಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತಂತೆ ಈ ಹಿಂದೆ ನೀಡಿರುವ ಆದೇಶಗಳನ್ನು ಪಾಲನೆ ಮಾಡದೇ ಇರುವ ಬಗ್ಗೆ ಬಿಬಿಎಂಪಿ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬಾರದು ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

1,337 ರಸ್ತೆ ಗುಂಡಿ ಬಾಕಿ: ರಸ್ತೆ ಗುಂಡಿ ಭರ್ತಿ ಮಾಡಲು ಪಾಲಿಕೆ ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಳೆದ 15 ದಿನಗಳಿಂದ ಆಗಾಗ ಮಳೆ ಬಿದ್ದಿದರಿಂದ ಕೆಲಸಕ್ಕೆ ಅಡ್ಡಿಯಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ 2019ರ ಅ.1ರಿಂದ ನ.8ರವರೆಗೆ ಇದ್ದ ವಸ್ತುಸ್ಥಿತಿ ವರದಿಯಂತೆ 10,656 ರಸ್ತೆ ಗುಂಡಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ 9,319 ಭರ್ತಿ ಮಾಡಲಾಗಿದೆ.

ಇನ್ನೂ 1,337 ಗುಂಡಿಗಳು ಬಾಕಿ ಇವೆ. ನವೆಂಬರ್‌ ಅಂತ್ಯಕ್ಕೆ ಎಲ್ಲ ರಸ್ತೆ ಗುಂಡಿ ಮುಕ್ತ ಮಾಡಲಾಗುವುದು. ಗುಂಡಿ ಭರ್ತಿ ಮಾಡಲು ಬಳಸುವ “ಹಾಟ್‌ ಮಿಕ್ಸ್‌’ (ಜಲ್ಲಿ ಕಲ್ಲು ಮತ್ತು ಟಾರು ಮಿಶ್ರಣ) ಘಟಕವನ್ನು ಬಿಬಿಎಂಪಿ ವತಿಯಿಂದಲೇ ಸ್ಥಾಪಿಸಲಾಗಿದೆ. ಡಿಸೆಂಬರ್‌ ನಂತರ ಈ ಘಟಕ ಕಾರ್ಯಾರಂಭಿಸಲಿದೆ ಎಂದು ಬಿಬಿಎಂಪಿ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.