Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Team Udayavani, Apr 16, 2024, 2:39 PM IST

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಬೆಂಗಳೂರು: ಸೆಕ್ಸ್‌ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುವುದಲ್ಲದೆ, ಕಾಲ್‌ಗ‌ರ್ಲ್ಸ್ ಗಳನ್ನು ಮನೆಗೆ ಕರೆಯಿಸಿಕೊಂಡು ತನ್ನ ಎದುರೇ ಅಸಭ್ಯವಾಗಿ ವರ್ತಿಸುತ್ತಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿಯ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಜೆ.ಪಿ.ನಗರ ನಿವಾಸಿ 28 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆಕೆಯ ಪತಿ ವಿಘ್ನೇಶ್ವರನ್‌(36), ಅತ್ತೆ ವಿಜಯಲಕ್ಷ್ಮೀ (60), ಮಾವ ಕಲೈಸೆಲ್ವನ್‌(63), ನಾದಿನಿ ಪ್ರಿಯದರ್ಶಿನಿ(30) ಮೇಲೆ ಕೇಸು ದಾಖಲಿಸಲಾಗಿದೆ.

ದೂರುದಾರೆ ಮೊದಲೇ ಮದುವೆಯಾಗಿದ್ದು, ಕೌಟುಂಬಿಕ ವಿಚಾರವಾಗಿ ಪತಿಯಿಂದ ದೂರವಾಗಿ ಹೈದ್ರಾಬಾದ್‌ನಲ್ಲಿ ವಾಸವಾಗಿದ್ದರು. ಕಾಸ್ಮೋಟಾ ಲೋಜಿಸ್ಟ್‌ ವೃತ್ತಿ ಮಾಡುತ್ತಿದ್ದ ಸಂತ್ರಸ್ತೆಗೆ ಕೆಲ ವರ್ಷಗಳ ಹಿಂದೆ ಚೆನ್ನೈನಲ್ಲಿ ವಿಘ್ನೇಶ್ವರನ್‌ ಪರಿಚಯವಾಗಿ ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಅಲ್ಲದೆ, ವಿಘ್ನೇಶ್ವರನ್‌, ಸಂತ್ರಸ್ತೆಗೆ ಮೊದಲ ಪತಿಯಿಂದ ವಿಚ್ಛೇಧನ ಪಡೆಯಲು ಸಹಾಯ ಕೂಡ ಮಾಡಿದ್ದ. ಬಳಿಕ ಇಬ್ಬರು ಹಿರಿಯ ಸಮ್ಮುಖದಲ್ಲೇ 2018ರಲ್ಲಿ ಮದುವೆಯಾಗಿದ್ದರು. ದಂಪತಿ ಹೈದ್ರಾಬಾದ್‌ನಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು.

ಈ ಮಧ್ಯೆ ವಿಘ್ನೇಶ್ವರನ್‌ ಪೋಷಕರು ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ಮನೆಯಲ್ಲಿ ದಂಪತಿ ನಡುವೆ ಜಗಳ, ಕಿರುಕುಳ ಆರಂಭವಾಗಿತ್ತು. ಈ ನಡುವೆ ಸಂತ್ರಸ್ತೆಗೆ ಒಂದು ಗುಂಡು ಮಗುವಾಗಿದೆ. ಆಗಲೂ, ಆ ಮಗು ಮತ್ತು ಸಂತ್ರಸ್ತೆಯನ್ನು ಸರಿಯಾಗಿ ನೋಡಿಕೊಂಡಿಲ್ಲ. ಮೊದಲ ಪತಿಯ ವಿಚಾರ ಪ್ರಸ್ತಾಪಿಸಿ ನಿಂದಿಸುತ್ತಿದ್ದರು. ಮಗು ಮತ್ತು ತನ್ನನ್ನು ಕೊಲ್ಲುವುದಾಗಿ ನಾದಿನಿ ಪ್ರಿಯದರ್ಶಿನಿ ಬೆದರಿಕೆ ಹಾಕಿದ್ದಾಳೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಸೆಕ್ಸ್‌ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯ: ಆರೋಪಿ ವಿಘ್ನೇಶ್ವರನ್‌, ಪತ್ನಿಗೆ ಸೆಕ್ಸ್‌ ವಿಡಿಯೋ ತೋರಿಸಿ ಇದೇ ಮಾದರಿಯಲ್ಲಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾನೆ. ಇದೇ ವಿಚಾರವಾಗಿ ಮನೆಯಲ್ಲೇ ಜಗಳ ನಡೆಯುತ್ತಿತ್ತು. 2023ರ ಮೇ ನಲ್ಲಿ ಹೈದರಾಬಾದ್‌ನಿಂದ ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆತಂದಿದ್ದಾನೆ. ಇಲ್ಲಿಯೂ ಕಿರಕುಳ ಮುಂದುವರಿಸಿದ್ದಾನೆ. ಜತೆಗೆ ಕಾಲ್‌ ಗರ್ಲ್ಸ್ ಮನೆಗೆ ಕರೆಸಿಕೊಂಡು, ತನ್ನ ಎದುರೇ ಅಸಭ್ಯವಾಗಿ ವರ್ತಿಸಿ ಮಾನಸಿಕ ಕಿರುಕುಳ ನೀಡಿದ್ದಾನೆ. ಈ ಸಂಬಂಧ ಹಿಂದೆ ಪೊಲೀಸರಿಗೆ ದೂರು ನೀಡಿದ್ದಾಗ ಇನ್ನು ಮುಂದೆ ಆ ರೀತಿ ವರ್ತಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದ. ಇದೀಗ ಮತ್ತೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಅತ್ತೆ, ಮಾವ, ನಾದಿನಿಯೂ ಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.