ಸಿಎಂ ಕೇಳಿದರೆ ರಾಜೀನಾಮೆ ನೀಡುವೆ: ಸಚಿವ ಜಾರ್ಜ್
Team Udayavani, Sep 9, 2017, 7:30 AM IST
ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದರೆ ಮಾತ್ರ ರಾಜೀನಾಮೆ ನೀಡುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹೆಣದ ಮುಂದೆ ರಾಜಕಾರಣ ಮಾಡುತ್ತಾರೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ನಾನು ಸಚಿವನಾಗಿದ್ದರೆ, ಸಿಐಡಿ ಅಧಿಕಾರಿಗಳಿಗೆ ಮುಕ್ತವಾಗಿ ತನಿಖೆಗೆ ಅವಕಾಶ ದೊರೆಯುವುದಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೆ. ಸಿಐಡಿ ತನಿಖೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ವರದಿ ಬಂದಿದೆ ಎಂದು ಹೇಳಿದರು.
ನಾನು ಯಾವತ್ತೂ ಕುರ್ಚಿಗೆ ಅಂಟಿಕೊಂಡವನಲ್ಲ. ರಾಜಕೀಯ ಹಿನ್ನೆಲೆ ಇಲ್ಲದೇ ಬಂದ ನನಗೆ ಇಷ್ಟು ಎತ್ತರಕ್ಕೆ ಬೆಳೆಯಲು ಕಾಂಗ್ರೆಸ್ ಕಾರಣ. ಬಿಜೆಪಿಯವರು ಜನಸಂಘ ಕಾಲದಿಂದ ಇಂದಿನವರೆಗೂ ನನ್ನ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದಾರೆ. ನಾನು ಜನರನ್ನು ಒಡೆಯುವ ಕೆಲಸ ಮಾಡಿಲ್ಲ. ಎಲ್ಲರನ್ನೂ ಸೇರಿಸುವ ಕೆಲಸ ಮಾಡಿದ್ದೇನೆ ಎಂದು ಜಾರ್ಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್ ಮಾಡಿದ್ರಾ ಸಮಂತಾ?: ಟ್ರೆಂಡ್ ಆದ ಸ್ಯಾಮ್
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!