ಮೆತ್ತಗಾದ ಪ್ರತಿಪಕ್ಷ: ನಿಟ್ಟುಸಿರಿಟ್ಟ ಸರ್ಕಾರ

Team Udayavani, Dec 17, 2018, 7:45 AM IST

teppa-15-12.jpg

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಅಧಿವೇಶನ ಆರಂಭವಾಗುತ್ತದೆ ಎಂದ ತಕ್ಷಣ ಆಡಳಿತ ಪಕ್ಷಕ್ಕೆ ಪ್ರಮುಖವಾಗಿ ಕಾಡುವ ಸಮಸ್ಯೆ ಎಂದರೆ ಕಬ್ಬಿನ ಬಾಕಿ ಪಾವತಿ ಮಾಡದೇ ಇರುವುದು. ಈ ವರ್ಷವೂ ಬೆಳಗಾವಿ ಅಧಿವೇಶನದ ಆರಂಭದಲ್ಲಿ ಆಡಳಿತ ಪಕ್ಷಕ್ಕೆ ಕಬ್ಬು ಬೆಳೆಯುವ ರೈತರ ಸಮಸ್ಯೆಯೇ ಅಧಿವೇಶನದಲ್ಲಿ ಕಂಟಕವಾಗುವ ಆತಂಕ ಇತ್ತು. ಪ್ರತಿಪಕ್ಷ ಬಿಜೆಪಿ ಕೂಡ ಅದನ್ನೇ ಪ್ರಮುಖ ಅಸ್ತ್ರವನ್ನಾಗಿ ಇಟ್ಟುಕೊಂಡು ಅಧಿವೇಶನ ಎದುರಿಸಲು ಸಿದ್ಧತೆ ಮಾಡಿಕೊಂಡು ಬಂದಿತ್ತು. ಆದರೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಅಧಿವೇಶನಕ್ಕೂ ಮೊದಲೇ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಲು ರೈತರೊಂದಿಗೆ ಹಲವು ಬಾರಿ ಸಭೆ ನಡೆಸಿ ಕಾರ್ಖಾನೆ ಮಾಲೀಕರ ಸಭೆ ನಡೆಸಿ ಅವರಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡುವ ಪ್ರಯತ್ನ ಮಾಡಿ ಪ್ರತಿಪಕ್ಷ ತಣ್ಣಗಾಗುವಂತೆ ಮಾಡಿದರು.

ಪ್ರತಿಪಕ್ಷ ಬಿಜೆಪಿ ಸರ್ಕಾರಕ್ಕೆ ಆಪರೇಷನ್‌ ಕಮಲದ ಭೀತಿ ಹುಟ್ಟಿಸುತ್ತಲೇ ಸರ್ಕಾರವನ್ನು ಗೊಂದಲದಲ್ಲಿ ಮುಳುಗಿಸಿ ಅಧಿವೇಶನ ಸುಸೂತ್ರವಾಗಿ ನಡೆಯದಂತೆ ಮಾಡಬೇಕೆಂಬ ಪ್ರಯತ್ನವೂ ಮೊದಲ ವಾರದಲ್ಲಿ ಕೈಗೂಡಲಿಲ್ಲ. ಹಿಂದಿನ ವರ್ಷಗಳಲ್ಲಿ ಕಲಾಪದಲ್ಲಿ ಮೊದಲ ಎರಡು ದಿನ ಪ್ರಶ್ನೋತ್ತರ ಕಲಾಪಕ್ಕಿಂತಲೂ ಮೊದಲೇ ನಿಲುವಳಿ ಸೂಚನೆ ಮಂಡನೆಗೆ ಪಟ್ಟು ಹಿಡಿದು ಪ್ರತಿಪಕ್ಷ ಸರ್ಕಾರದ ವಿರುದ್ಧ ಧರಣಿ ನಡೆಸಿ ಸಭಾತ್ಯಾಗ ಮಾಡಿ ಸದನದ ಸಮಯ ನುಂಗಿಹಾಕುತ್ತಿತ್ತು. ಆದರೆ, ಬಿಜೆಪಿ ನಾಯಕರು ಈ ಬಾರಿ ಆರಂಭದಲ್ಲಿ ಯಾವುದೇ ಗಲಾಟೆ, ಧರಣಿಗೆ ಮುಂದಾಗದೇ ಸುಗಮ ಕಲಾಪ ನಡೆಸಲು ಅವಕಾಶ ಕಲ್ಪಿಸಿರುವುದು ಪ್ರತಿಪಕ್ಷ ಮೆತ್ತಗಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಲೋಕಸಭೆ ಚುನಾವಣೆ ಆತಂಕ: ಈ ವರ್ಷ ಲೋಕಸಭೆಗೆ ಚುನಾವಣೆ ಇರುವುದರಿಂದ ಅಧಿವೇಶನದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಬರೀ ಗಲಾಟೆ ಮಾಡಿದರೆ ಅದು ಕೂಡ ಸಾರ್ವಜನಿಕವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ತಪ್ಪುಸಂದೇಶ ರವಾನೆಯಾಗುತ್ತದೆ ಎಂಬ ಆತಂಕವೂ ಬಿಜೆಪಿ ನಾಯಕರನ್ನು ಕಾಡಿದಂತಿದೆ. ಆಡಳಿತ ಪಕ್ಷದ ಸದಸ್ಯರು ಸರ್ಕಾರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಸಿದ್ದವಿದ್ದರೂ ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸಿ ಕಲಾಪದ ಸಮಯ ಹಾಳು ಮಾಡುತ್ತಿದ್ದಾರೆ ಎಂಬ ಸಂದೇಶ ರವಾನಿಸಿದರೆ ಅದು ತಮಗೆ ಮುಳುವಾಗುವ ಸಾಧ್ಯತೆ ಇದೆ ಎಂಬ ಆತಂಕ ಬಿಜೆಪಿ ನಾಯಕರನ್ನು ಕಾಡಿದಂತಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಗೈರು ಹಾಜರಿಯಲ್ಲಿಯೂ ಸಮ್ಮಿಶ್ರ ಸರ್ಕಾರವು ಪ್ರತಿಪಕ್ಷದ ವಿರುದ್ದ ಹಠಕ್ಕೆ ಬಿದ್ದು ಗೊಂದಲ ಸೃಷ್ಟಿಸಿಕೊಳ್ಳದೇ ಹೆಚ್ಚಿನ ಚರ್ಚೆಗೆ ಅವಕಾಶ ಮಾಡಿಕೊಡುವ ಮೂಲಕ ಜಾಣತನ ತೋರಿತು. ಮೊದಲ ವಾರದ ಕಲಾಪದಲ್ಲಿ ತಾನು ಬಯಸಿದ ವಿಧೇಯಕಗಳನ್ನೂ ಪ್ರತಿಪಕ್ಷದ ವಿರೋಧವಿಲ್ಲದೇ ಅಂಗೀಕಾರ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.