ಹನಿಟ್ರ್ಯಾಪ್‌ ಮಾಡುತ್ತಿದ್ದ ಮಹಿಳೆ ಸೆರೆ

ಗುತ್ತಿಗೆದಾರರೊಬ್ಬರಿಗೆ ಒಂದು ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಆರೋಪಿಗಳು

Team Udayavani, Oct 16, 2021, 9:48 AM IST

ಹನಿಟ್ರ್ಯಾಪ್‌ ಮಾಡುತ್ತಿದ್ದ ಮಹಿಳೆ ಸೆರೆ

Representative Image used

ಬೆಂಗಳೂರು: ಗುತ್ತಿಗೆದಾರರೊಬ್ಬರನ್ನು “ಹನಿಟ್ರ್ಯಾಪ್‌’ಗೆ ಬೀಳಿಸಿದ ಮಹಿಳೆಯೊಬ್ಬಳು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾಳೆ. ಅನ್ನಪೂರ್ಣಶ್ವೇರಿನಗರದ ನಿವಾಸಿ ಸಿವಿಲ್‌ ಗುತ್ತಿಗೆದಾರ ಲೋಹಿತ್‌ (38) ಇವರ ಜತೆ ಸಲುಗೆ ಬೆಳೆಸಿ ಇಬ್ಬರು ಒಟ್ಟಿಗಿರುವ ಖಾಸಗಿ ದೃಶ್ಯಾವಳಿಗಳನ್ನು ಸೆರೆಹಿಡಿದು ಒಂದು ಕೋಟಿ ರೂ.ಗೆ ಬೇಡಿಕೆಯಿಟ್ಟು ಹನಿಟ್ರ್ಯಾಪ್‌ ಬಲೆ ಹೆಣೆದಿದ್ದ ವಿಜಯನಗರದ ನಿವಾಸಿ ವಿದ್ಯಾ (32) ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

ಸಿವಿಲ್‌ ಗುತ್ತಿಗೆದಾರ ನೀಡಿದ ದೂರು ಆಧರಿಸಿ ಮಹಿಳೆಯನ್ನು ಬಂಧಿಸಿರುವ ಪೊಲೀಸರು, ಹನಿಟ್ರ್ಯಾಪ್‌ಗೆ ನೆರವು ನೀಡಿದ್ದ ಇಬ್ಬರು ಯುವಕರ ಪತ್ತೆಗೆ ಶೋಧ ನಡೆಸಿದ್ದಾರೆ. ಮೂರು ತಿಂಗಳ ಹಿಂದೆ ಸಿವಿಲ್‌ ಗುತ್ತಿಗೆದಾರ ಲೋಹಿತ್‌ ನಾಗರಬಾವಿಯ ನಮ್ಮೂರ ತಿಂಡಿ ಹೋಟೆಲ್‌ ಮುಂಭಾಗದ ರಸ್ತೆಯಲ್ಲಿ ನಿಂತಿದ್ದರು. ಈ ವೇಳೆ ಅವರ ಬಳಿ ಬಂದ ಇಬ್ಬರು ಯುವಕರು, ನಮ್ಮ ಬಳಿ ಇರುವ ಹರ್ಬಲ್‌ ಲೈಫ್ ಉತ್ಪನ್ನಗಳನ್ನು ತೆಗೆದುಕೊಂಡರೆ ನೀವು ಬೇಗ ಸಣ್ಣಗಾಗುತ್ತೀರಿ ಎಂದು ನಂಬಿಸಿದ್ದರು.

ನಂತರ ಆರೋಪಿಗಳು ವಿದ್ಯಾ ಮೊಬೈಲ್‌ ನಂಬರ್‌ ಕೊಟ್ಟು ನೀವು ಈ ನಂಬರ್‌ಗೆ ಕರೆ ಮಾಡಿ ಮಾತನಾಡಿ ಎಂದಿದ್ದರು. ಅದರಂತೆ ವಿದ್ಯಾಗೆ ಕರೆ ಮಾಡಿದ್ದ ಲೋಹಿತ್‌ ಹರ್ಬಲ್‌ ಲೈಫ್ ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಖರೀದಿಸಿದ್ದರು. ನಂತರ ಆಗಾಗ ಲೋಹಿತ್‌ಗೆ ಕರೆ ಮಾಡುತ್ತಿದ್ದ ವಿದ್ಯಾ ಸಲುಗೆ ಬೆಳೆಸಿಕೊಂಡಿದ್ದಳು. ಅದರಂತೆ ಆಕೆ ಇತ್ತೀಚೆಗೆ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ಗೆ ಲೋಹಿತ್‌ನನ್ನು ಕರೆದುಕೊಂಡು ಹೋಗಿದ್ದಳು.

ಈ ವೇಳೆ ಇಬ್ಬರೂ ಖಾಸಗಿಯಾಗಿ ಕಾಲ ಕಳೆದಿದ್ದಾರೆ. ಕೆಲ ಸಮಯದ ಬಳಿಕ ವಿದ್ಯಾ ಮಾದಕ ವಸ್ತು ಸೇವಿಸಿ ರೆಸಾರ್ಟ್‌ ಸಿಬ್ಬಂದಿ ಜತೆ ಜಗಳ ಮಾಡಿದ್ದಳು. ಆಕೆಯನ್ನು ಲೋಹಿತ್‌ ಸಮಾಧಾನಪಡಿಸಿದರೂ ಆಕೆ ಕೇಳದಾಗ ವಿದ್ಯಾಳನ್ನು ಅಲ್ಲಿಯೇ ಬಿಟ್ಟು ಲೋಹಿತ್‌ ಮನೆಗೆ ಬಂದಿದ್ದರು.

ಪೆನ್‌ಡ್ರೈವ್‌ ಕೊಟ್ಟು 1 ಕೋಟಿ ರೂ.ಗೆ ಬೇಡಿಕೆ: ಸೆ.29ರಂದು ವಿದ್ಯಾ, ಲೋಹಿತ್‌ಗೆ ಕರೆ ಮಾಡಿ ನಾಗರಬಾವಿ ಬಳಿ ಬರುವಂತೆ ಸೂಚಿಸಿದ್ದಳು. ಲೋಹಿತ್‌ ಆಕೆಯನ್ನು ಭೇಟಿಯಾದಾಗ ಇವರಿ ಬ್ಬರೂ ರೆಸಾರ್ಟ್‌ನಲ್ಲಿ ಕಳೆದಿದ್ದ ಖಾಸಗಿ ಫೋಟೋ ಗಳನ್ನು ತೋರಿಸಿ 1 ಕೋಟಿ ರೂ. ಕೊಡುವಂತೆ ಬ್ಲಾಕ್‌ ಮೇಲ್‌ ಮಾಡಿದ್ದಳು. ಇದರಿಂದ ಆತಂಕಗೊಂಡ ಲೋಹಿತ್‌ ಆರಂಭದಲ್ಲಿ 2 ಲಕ್ಷ ರೂ. ಕೊಟ್ಟಿದ್ದರು. ಇದಾದ ಕೆಲ ದಿನಗಳ ಬಳಿಕ ವಿದ್ಯಾ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದಳು.

ಇದನ್ನೂ ಓದಿ:- ಅಂಬೇಡ್ಕರ್ ಕನಸಿನ ಭಾರತ ನಿರ್ಮಿಸೋಣ: ಪೆರ್ಲ

ಈ ಮಧ್ಯೆ ಕೆಲ ದಿನಗಳ ಹಿಂದೆ ಇಬ್ಬರು ಅಪರಿಚಿತ ಹುಡುಗರು ಲೋಹಿತ್‌ನನ್ನು ಭೇಟಿಯಾಗಿ ಪೆನ್‌ಡ್ರೈವ್‌ ಕೊಟ್ಟು ಇದರಲ್ಲಿ ಇರುವುದನ್ನು ನೋಡಿ ಎಂದು ಹೇಳಿ ಹೋಗಿದ್ದರು. ಪೆನ್‌ಡ್ರೈವ್‌ನಲ್ಲಿ ಏನಿದೆ ಎಂದು ನೋಡಿದಾಗ ವಿದ್ಯಾ ಮತ್ತು ಲೋಹಿತ್‌ ರೆಸಾರ್ಟ್‌ನಲ್ಲಿ ಕಳೆದ ಖಾಸಗಿ ದೃಶ್ಯಗಳಿದ್ದವು. ವಿದ್ಯಾಗೆ ಕರೆ ಮಾಡಿದ ಲೋಹಿತ್‌ ಈ ಬಗ್ಗೆ ಪ್ರಶ್ನಿಸಿದ್ದರು. 1 ಕೋಟಿ ರೂ. ಕೊಡದಿದ್ದರೆ, ವಿವಾಹವಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ನಿಮ್ಮ ವಿರುದ್ಧ ಪೊಲೀಸರಿಗೆ ದೂರು ಕೊಡುತ್ತೇನೆ ಎಂದು ಆಕೆ ಬೆದರಿಕೆ ಹಾಕಿದ್ದಳು.

ಇದರಿಂದ ಆತಂಕಗೊಂಡ ಲೋಹಿತ್‌ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ವಿದ್ಯಾ ಹನಿಟ್ರ್ಯಾಪ್‌ ನಡೆಸಿರುವುದು ಪತ್ತೆಯಾಗಿತ್ತು. ಆಕೆಯನ್ನು ಬಂಧಿಸಿದ ಪೊಲೀಸರು ಈಕೆಗೆ ಸಹಕರಿಸುತ್ತಿದ್ದ ಇಬ್ಬರು ಹುಡುಗರಿಗೆ ಶೋಧ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

farmer

78,303 ರೈತರ ಆತ್ಮಹತ್ಯೆ;ತೋಮರ್ ಸರ್, ವೈಫಲ್ಯ ಮರೆಮಾಡಬೇಡಿ ಎಂದ ಸುರ್ಜೆವಾಲಾ

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

ಅರಂತೋಡು ತಿರುವಿನಲ್ಲಿ ನಿಯಂತ್ರಣ ತಪ್ಪಿದ ಐರಾವತ ಬಸ್ : ತಪ್ಪಿದ ಭಾರಿ ದುರಂತ

1-sfdsf

ಮಣಿಪಾಲ: ಹಲ್ಲೆಗೊಳಗಾದ ಗೋರಕ್ಷಕರ ಆರೋಗ್ಯ ವಿಚಾರಿಸಿದ ಗೃಹ ಸಚಿವರು

ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ

ಶಾಸಕ ವಿಶ್ವನಾಥ್ ಹತ್ಯೆ ಸಂಚಿನ ಬಗ್ಗೆ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಗಳ ಅನುಮಾನಾಸ್ಪದ ಸಾವು

ಕೋತಿಗಳ ಅನುಮಾನಾಸ್ಪದ ಸಾವು..!

ಸಿದ್ದು ವಿರುದ್ಧ ದೂರು

ಸಿದ್ದು, ಲಾಡ್‌ ವಿರುದ್ಧ ಪೊಲೀಸರಿಗೆ ದೂರು

NEP discussion

ಎನ್‌ಇಪಿ: ಶಿಕ್ಷಣ ಸುಧಾರಣೆಗೆ ಮಹತ್ವ

riksha benglore

ಆಟೋ ಬಾಡಿಗೆ ದರ ಏರಿಕೆ..!

high court

ಸಿಡಿ ತನಿಖಾ ವರದಿ ಅನುಮೋದಿಸಿದ ಎಸ್‌ಐಟಿ

MUST WATCH

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

ಹೊಸ ಸೇರ್ಪಡೆ

farmer

78,303 ರೈತರ ಆತ್ಮಹತ್ಯೆ;ತೋಮರ್ ಸರ್, ವೈಫಲ್ಯ ಮರೆಮಾಡಬೇಡಿ ಎಂದ ಸುರ್ಜೆವಾಲಾ

aids victims in benglore rural

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 3,771 ಮಂದಿ ಏಡ್ಸ್‌ ಪೀಡಿತರು..

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ಪರಿಷತ್ ಫೈಟ್: ಹುಬ್ಬಳ್ಳಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕರ ನಡುವೆ ಹೊಯ್ ಕೈ!

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ರೈತರ ಸಾವಿನ ಅಂಕಿಅಂಶ ನಮ್ಮ ಬಳಿ ಇಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೂ ಇಲ್ಲ: ಕೇಂದ್ರ

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.