ಮಹಿಳೆಗೆ ಲೈಂಗಿಕ ಕಿರುಕುಳ: ಸಹೋದ್ಯೋಗಿ ಬಂಧನ


Team Udayavani, Feb 11, 2019, 6:16 AM IST

arrest3.jpg

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿ ಆಯೋಜಿಸಿದ್ದ ಉದ್ಯೋಗಿಗಳ ಸಭೆಯಲ್ಲಿ ಪಾಲ್ಗೊಂಡು ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದ ಕೊಲ್ಕತಾ ಮೂಲದ ಮಹಿಳೆಯನ್ನು ಶೌಚಾಲಯದಲ್ಲಿ ಕೂಡಿಹಾಕಿ ಬಲವಂತವಾಗಿ ಸಿಗರೇಟ್‌ ಸೇದಿಸಿ ಅತ್ಯಾಚಾರಕ್ಕೆ ಯತ್ನಿಸಿದ ಸಹೋದ್ಯೋಗಿಯನ್ನು ಆರ್‌ಎಂಸಿ ಯಾರ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಖರ್ಜಿ (22) ಬಂಧಿತ ಆರೋಪಿ. ಅಂತಾರಾಷ್ಟ್ರೀಯ ಜವಳಿ ಸಂಸ್ಥೆಯೊಂದು ತನ್ನ ಸಹೋದ್ಯೋಗಿಗಳಿಗೆ ನಗರದ ಐಷಾರಾಮಿ ಹೋಟೆಲ್‌ನಲ್ಲಿ ಫೆ.8 ಹಾಗೂ 9ರಂದು ಸಭೆ ಆಯೋಜಿಸಿತ್ತು. ಸಭೆಗೆ ಹೊರ ರಾಜ್ಯಗಳಿಂದ ಆಗಮಿಸಿದ ಉದ್ಯೋಗಿಗಳಿಗೆ ಗೊರಗುಂಟೆ ಪಾಳ್ಯದಲ್ಲಿರುವ ಪ್ರತಿಷ್ಠಿತ ಹೋಟೆಲ್‌ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿತ್ತು. ಕೊಲ್ಕತಾ ಮೂಲದ ಮಹಿಳೆ ಪ್ರತ್ಯೇಕ ಕೊಠಡಿಯಲ್ಲಿ ಉಳಿದುಕೊಂಡಿದ್ದರು.

ಫೆ.8ರಂದು ರಾತ್ರಿ 11.45ರ ಸುಮಾರಿಗೆ ಆರೋಪಿ, ಮಹಿಳೆಯಿದ್ದ ಕೊಠಡಿಯ ಬಾಗಿಲು ಬಡಿದಿದ್ದಾನೆ. ಮಹಿಳೆ ಬಾಗಿಲು ತೆಗೆದ ಕೂಡಲೇ ನೀರು ಕೇಳುವ ನೆಪದಲ್ಲಿ ಒಳನುಗ್ಗಿದ್ದಾನೆ. ಕಂಠಪೂರ್ತಿ ಮದ್ಯ ಸೇವಿಸಿದ್ದ ಮುಖರ್ಜಿ, ಮಹಿಳೆಯನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ.

ಆಕೆ ಕಿರುಚಿಕೊಳ್ಳದಂತೆ ಬಾಯಿಮುಚ್ಚಿದ ಆತ, ಆಕೆಯನ್ನು ಸ್ನಾನಗೃಹಕ್ಕೆ ಎಳೆದೊಯ್ದು ಬಾಗಿಲು ಮುಚ್ಚಿದ್ದಾನೆ. ಬಲವಂತವಾಗಿ ಆಕೆಯ ಬಾಯಲ್ಲಿ ಸಿಗರೇಟ್‌ ಇರಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಮಲಗುವ ಕೊಠಡಿಗೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ, ಆಕೆಯ ತಲೆಯನ್ನು ಗೋಡೆಗೆ ಗುದ್ದಿ, ಹಲ್ಲೆ ನಡೆಸಿದ.

ತನಗೆ ಆರೋಗ್ಯ ಸರಿಯಿಲ್ಲ ಎಂದು ಬೇಡಿಕೊಂಡರೂ ಆತ ಕಿರುಕುಳ ಮುಂದುವರಿಸಿದ್ದ. ಬಳಿಕ ಕಿರುಚಿಕೊಳ್ಳಲು ಆರಂಭಿಸುತ್ತಿದ್ದಂತೆ, ಯಾರಿಗೂ ಹೇಳದಿದ್ದರೆ ಬಿಟ್ಟುಬಿಡುತ್ತೇನೆ ಎಂದು ಹೇಳಿ ಬಲವಂತವಾಗಿ ಚುಂಬಿಸಿ ತೆರಳಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯ ಕೃತ್ಯದಿಂದ ಆಘಾತಗೊಂಡ ಸಂತ್ರಸ್ತೆ, ತಮ್ಮ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಜತೆಗೆ ಹೋಟೆಲ್‌ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಹೋಟೆಲ್‌ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಆತನನ್ನು ವಶಕ್ಕೆ ಪಡೆಯಲಾಯಿತು. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಆರೋಪಿ ಮುಖರ್ಜಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.