ನಗರದ ವಿವಿಧೆಡೆ ಕಾರ್ಮಿಕರ ದಿನಾಚರಣೆ


Team Udayavani, May 2, 2019, 3:02 AM IST

nagarada

ಬೆಂಗಳೂರು: ಹಕ್ಕುಗಳಿಗಾಗಿ ಒಗ್ಗಟ್ಟಿನ ಮಂತ್ರ, ದಮನಕಾರಿ ನೀತಿಗಳ ವಿರುದ್ಧ ಆಕ್ರೋಶ, ಸಂಸ್ಥೆಗಾಗಿ ಶ್ರಮಿಸಿದ ಜೀವಗಳಿಗೆ ಪ್ರಶಂಸೆ, ಅಲ್ಲಲ್ಲಿ ರಾರಾಜಿಸಿದ ಕೆಂಪು ಬಾವುಟಗಳು, ಬಿಬಿಎಂಪಿ ಇತಿಹಾಸದಲ್ಲಿ ಮೊದಲ ಬಾರಿಗೆ ಪೌರಕಾರ್ಮಿಕರಿಗೆ ಸಿಕ್ಕಿತು ಕಾರ್ಮಿಕ ದಿನಾಚರಣೆಯ ರಜೆ.

ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಕಂಡುಬಂದ ದೃಶ್ಯಗಳಿವು. ಹಲವಾರು ಸಂಘಟನೆ, ಒಕ್ಕೂಟಗಳಡಿ ಸಹಸ್ರ ಸಂಖ್ಯೆಯಲ್ಲಿ ಕಾರ್ಮಿಕರು ಒಗ್ಗಟ್ಟಾಗಿ ಶಕ್ತಿ ಪ್ರದರ್ಶನ ಮಾಡಿದರು.

“ಮೇ ಡೇ’ ಸಂಭ್ರಮಾಚರಣೆ ಜತೆಗೆ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿರುವ ಕಾರ್ಮಿಕ ಚಳವಳಿಗಳು, ಹಕ್ಕುಗಳ ರಕ್ಷಣೆಗಾಗಿ ಮುಂದಿನ ದಿನಗಳಲ್ಲಿ ರೂಪಿಸಬೇಕಾದ ಹೋರಾಟಗಳ ಬಗ್ಗೆ ಚಿಂತನ-ಮಂಥನ ನಡೆಯಿತು. ನಗರದಾದ್ಯಂತ ವಿವಿಧ ಸಂಘಟನೆಗಳಡಿ ನಡೆದ ಕಾರ್ಮಿಕ ದಿನಾಚರಣೆ ವಿವರ ಹೀಗಿದೆ.

ಬಂಡವಾಳಶಾಹಿ ಕಪಿಮುಷ್ಠಿ: ಬಂಡವಾಳಶಾಹಿಗಳ ಕಪಿಮುಷ್ಠಿಗೆ ಸಿಲುಕಿರುವ ಕೇಂದ್ರ ಸರ್ಕಾರ, ದೇಶದ ಕಾರ್ಮಿಕರು ಹಾಗೂ ದುಡಿಯುವ ವರ್ಗದ ಹಕ್ಕುಗಳನ್ನು ಕಸಿದುಕೊಳ್ಳುವ ನಿಟ್ಟಿನಲ್ಲಿ ರೂಪಿಸಿರುವ ದಮನಕಾರಿ ನೀತಿಗಳನ್ನು ರೂಪಿಸಿದೆ ಎಂದು ಸಿಐಟಿಯು ಮುಖಂಡ ಗೋಪಾಲ ಆರೋಪಿಸಿದರು.

“ಮೇ ದಿನಾಚರಣೆ’ ಪ್ರಯುಕ್ತ ಸಂಘಟನೆ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದ ಬಳಿ ಕಾರ್ಮಿಕರ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಐದು ವರ್ಷಗಳು ಆಡಳಿತ ನಡೆಸಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಡವಾಳಶಾಹಿಗಳ ಕೈಗೊಂಬೆಯಾಗಿದೆ ಎಂದು ಆರೋಪಿಸಿದರು.ಜತೆಗೆ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.

ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ದೇಶದಲ್ಲಿ ಬಂಡವಾಳಶಾಹಿಗಳು ಅಭಿವೃದ್ಧಿಯಾಗುತ್ತಿದ್ದು, ದುಡಿಯುವ ವರ್ಗ ಹಿಂದುಳಿಯಲು ಆಳುವ ವರ್ಗಗಳ ದ್ವಿಮುಖ ನೀತಿಯೇ ಕಾರಣ ಎಂದು ಆರೋಪಿಸಿದರು. ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನಕ್ಕೆ ಆಗ್ರಹಿಸಿ ದಶಕಗಳಿಂದ ಹೋರಾಟ ಮಾಡಲಾಗುತ್ತಿದ್ದರೂ ಆಳುವ ವರ್ಗಗಳು ನ್ಯಾಯ ದೊರಕಿಸಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.

ಸಭೆಗೂ ಮುನ್ನ ಪುರಭವನದಿಂದ ಆವರಣದಿಂದ ಸ್ವಾತಂತ್ರವ್ಯ ಉದ್ಯಾನದವರೆಗೂ ಸಿಐಟಿಯು ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ನೂರಾರು ಕಾರ್ಮಿಕರು ಸಿಐಟಿಯು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಬಿಎಂಟಿಸಿಯಿಂದ ನಗದು ಪುರಸ್ಕಾರ: ಸಂಸ್ಥೆಯ ಎಲ್ಲ 45 ಘಟಕಗಳಲ್ಲಿ ನೌಕರರಿಂದ ಕಾರ್ಮಿಕ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿ ಘಟಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ತಲಾ ಐವರು ಚಾಲಕರು, ಮೂವರು ನಿರ್ವಾಹಕರು ಹಾಗೂ ಇಬ್ಬರು ಮೆಕಾನಿಕ್‌ಗಳಿಗೆ ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಆಯಾ ವಿಭಾಗ ಮತ್ತು ಘಟಕಗಳ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಪೌರಕಾರ್ಮಿಕರಿಗೆ ರಜಾ-ಮಜಾ: ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಸುಮಾರು 17 ಸಾವಿರ ಪೌರಕಾರ್ಮಿಕರಿಗೂ ವೇತನ ಸಹಿತ ರಜೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರೆಲ್ಲಾ ನಗರದ ವಿವಿಧೆಡೆ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆಗಳು, ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಈ ಮೊದಲು ಅವರಿಗೆಲ್ಲಾ ಕಾರ್ಮಿಕ ದಿನದ ರಜೆಯನ್ನು ಮತ್ತೂಂದು ದಿನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

21

ಹೆತ್ತವರ ಅಪಸ್ವರ ಲೆಕ್ಕಿಸದೇ ಹಿಂದೂ ಯುವಕ, ಮುಸ್ಲಿಂ ಯುವತಿ ವಿವಾಹ

“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ

“ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!: ಕುಮಾರಸ್ವಾಮಿ ಕಳವಳ

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

1-asdasdsad

ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ

PM Modi

2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ

ಗುಂಡ್ಲುಪೇಟೆ: ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಓರ್ವ ಸಾವು, ಮತ್ತೊಬ್ಬ ಗಂಭೀರ

south africa team announced for t20 seies against India

ಭಾರತ ವಿರುದ್ಧದ ಟಿ20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ: ಮುಂಬೈ ಇಂಡಿಯನ್ಸ್ ಆಟಗಾರನಿಗೆ ಅವಕಾಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಸಿ ಕಸದಿಂದ ನೈಸರ್ಗಿಕ ಅನಿಲ ಉತ್ಪಾದನೆ 

ಹಸಿ ಕಸದಿಂದ ನೈಸರ್ಗಿಕ ಅನಿಲ ಉತ್ಪಾದನೆ 

ಪೊಲೀಸರ ಹೆಸರು ಬಳಸಿಕೊಂಡು ಸುಲಿಗೆ: ಆರೋಪಿ ಬಂಧನ

ಪೊಲೀಸರ ಹೆಸರು ಬಳಸಿಕೊಂಡು ಸುಲಿಗೆ: ಆರೋಪಿ ಬಂಧನ

1sucide

ಬೇಲ್‌ಗೆ ಕುಟುಂಬ ಸಹಕರಿಸದಿದ್ದಕ್ಕೆ ಕೈದಿ ಜೈಲಿನಲ್ಲಿ ಆತ್ಮಹತ್ಯೆ

Untitled-1

ಸಮವಸ್ತ್ರ ಸಮಾಚಾರ: ನಿಮ್ಮ ಮಕ್ಕಳ ಯೂನಿಫಾರಂ ಎಲ್ಲಿಂದ ಬರುತ್ತೆ?

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

ಒಬಿಸಿಗಳಿಗೆ ಆದ್ಯತೆ ನೀಡಿದ್ರೂ; ನ್ಯಾಯ ಸಿಗೋದು ಅನುಮಾನ

MUST WATCH

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

ಹೊಸ ಸೇರ್ಪಡೆ

ಡಾ. ಬಿ.ಆರ್‌.ಅಂಬೇಡ್ಕರ್‌ ನಮಗೆ ದಾರಿ ದೀಪ

ಡಾ. ಬಿ.ಆರ್‌.ಅಂಬೇಡ್ಕರ್‌ ನಮಗೆ ದಾರಿ ದೀಪ

renukacharya

ಸನಾತನ ಧರ್ಮ-ಸಂಸ್ಕೃತಿ ಉಳಿಸಿ ಬೆಳೆಸಿ

16relif

ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಎಐಎಂಎಸ್‌ಎಸ್‌ ಮನವಿ

21

ಹೆತ್ತವರ ಅಪಸ್ವರ ಲೆಕ್ಕಿಸದೇ ಹಿಂದೂ ಯುವಕ, ಮುಸ್ಲಿಂ ಯುವತಿ ವಿವಾಹ

15education

ಗುಣಮಟ್ಟ ಶಿಕ್ಷಣಕ್ಕೆ ಮೊದಲಾದ್ಯತೆ: ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.