ನಿಮಿಷದಲ್ಲಿ ಸಾವಿರ ಸಸಿ ನೆಡುವ ಅಭಿಯಾನ

Team Udayavani, Jun 6, 2023, 2:18 PM IST

tdy-6

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ನಗರದೆಲ್ಲೆಡೆ ಗಿಡ ನೆಡುವುದು, ಸ್ವಚ್ಛಗೊಳಿಸುವ ಹಾಗೂ ಪ್ಲಾಸ್ಟಿಕ್‌ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳು ಜರುಗಿವೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ಅಫ್ರಾನ್ಸ್‌ ಇನ್ಫ್ರಾಸ್ಟ್ರಕ್ಚರ್‌, ರಾಷ್ಟ್ರೀಯ ಮಿಲಿಟರಿ ಶಾಲೆ, ಸೇನಾ ಪೊಲೀಸ್‌ ಕೇಂದ್ರ ಮತ್ತು ಶಾಲೆ ಹಾಗೂ ರಾಷ್ಟ್ರೀಯ ಕೆಡೆಟ್‌ ಕಾರ್ಪಸ್‌ ಸಹಯೋಗದೊಂದಿಗೆ ವಿಶ್ವ ಪರಿಸರ ದಿನದಂದು 60 ಸೆಕೆಂಡ್‌ಗಳಲ್ಲಿ ಒಂದು ಸಾವಿರ ಸಸಿಗಳನ್ನು ನೆಡುವ ಅಭಿಯಾನವನ್ನು ಕೈಗೊಂಡಿತ್ತು.

ಈ ಅಭಿಯಾನವನ್ನು “ಪ್ಲಾಸ್ಟಿಕ್‌ ಮಾಲಿನ್ಯ ನಿಯಂತ್ರಣ’ ಎಂಬ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು, ನಗರದ ವೆಲ್ಲರಾದ ರಾಷ್ಟ್ರೀಯ ಮಿಲಿಟರಿ ಶಾಲೆ ಹಾಗೂ ಕಾರ್ಪಸ್‌ ಆಫ್ ಮಿಲಿಟರಿ ಪೊಲೀಸ್‌ ಸೆಂಟರ್‌ ಮತ್ತು ಸ್ಕೂಲ್‌ ಆವರಣದಲ್ಲಿ ಹಮ್ಮಿಕೊಂಡಿದ್ದರು.

ಈ ವೇಳೆ, ಯೋಜನೆಗಳ ನಿರ್ದೇಶಕ ಡಿ. ರಾಧಾಕೃಷ್ಣ ರೆಡ್ಡಿ, ಕಾರ್ಯನಿರ್ವಾಹಕ ನಿರ್ದೇಶಕ ಎಸ್‌.ಎಸ್‌. ಹೆಗರಡ್ಡಿ, ಆರ್‌ಎಂಎಸ್‌ನ ಆಡಳಿತಾಧಿಕಾರಿ ಮೇಜರ್‌ ವಿಕಾಸ್‌ ಸರೋಹ ಸೇರಿದಂತೆ ಕರ್ನಾಟಕ ಬೆಟಾಲಿಯನ್‌ನ ಎಲ್ಲಾ ಅಧಿಕಾರಿಗಳು, ಎನ್‌ಸಿಸಿ ಕೆಡೆಟ್‌ಗಳು ಹಾಜರಿದ್ದರು.

ಬೆಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ ಎಸ್‌ ವತಿಯಿಂದ ಸೋಮವಾರ ಜ್ಞಾನಜ್ಯೋತಿ ಆವರಣದಲ್ಲಿ ಹಮ್ಮಿಕೊಂಡ ಪರಿಸರ ದಿನಾಚರಣೆಯನ್ನು ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರದ ಪ್ರಾಮುಖ್ಯತೆ, ಅದನ್ನು ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಚ್‌.ಆರ್‌. ರವೀಶ್‌, ಪ್ರೊ. ಎಲ್‌.ರಾಜಣ್ಣ, ಪ್ರೊ. ಜಿ.ಟಿ. ದೇವರಾಜ್‌ ಭಾಗವಹಿಸಿದ್ದರು.

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಬೆಂಗಳೂರು ನಗರ ವಿಶ್ವ ವಿದ್ಯಾಲನಿಲಯವು ಪರಿಸರ ವಿಜ್ಞಾನ ವಿಭಾಗ ಹಾಗೂ ಬ್ಯಾಂಕ್‌ ಆಫ್ ಬರೋಡ ಸಹಯೋಗದಲ್ಲಿ ಸೆಂಟ್ರಲ್‌ ಕಾಲೇಜಿನ ಆವರಣದಲ್ಲಿ ಪ್ರಭಾರ ಕುಲಪತಿ ಪ್ರೊ.ಎನ್‌. ಹರಿಪ್ರಸಾದ್‌ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅರಣ್ಯ ನಾಶದಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಭವಿಷ್ಯದ ಹಿತದೃಷ್ಟಿಯಿಂದ ಯುವ ಪೀಳಿಗೆ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಶ್ರಮಿಸಬೇಕೆಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕುಲಸಚಿವ ಸಿ.ಎನ್‌.ಶ್ರೀಧರ್‌, ಕುಲಸಚಿವ (ಮೌಲ್ಯ ಮಾಪನ) ಪ್ರೊ. ಲೋಕೇಶ, ವಿತ್ತಾಧಿಕಾರಿ ಎಸ್‌.ರಘು, ಬ್ಯಾಂಕ್‌ ಆಫ್‌ ಬರೋಡಾದ ಹಿರಿಯ ಅಧಿಕಾರಿಗಳಾದ ಸಿ.ಎಸ್‌. ಶ್ರೀನಿವಾಸಲು, ಆಶಿಶ್‌ ಕುಮಾರ್‌ ಹಾಗೂ ಬಿಸಿಯು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.