ಆದಾಯ ವೃದ್ಧಿಗೆ ಶಿಕ್ಷಣ ಸಂಸ್ಥೆಗಳಿಗೆ ಬರೆ

Team Udayavani, Feb 19, 2019, 6:46 AM IST

adaya.jpg

ಬೆಂಗಳೂರು: ಆದಾಯ ಪ್ರಮಾಣ ಹೆಚ್ಚಿಸಿಕೊಳ್ಳಲು ಮುಂದಾಗಿರುವ ಬಿಬಿಎಂಪಿ, ಸರ್ಕಾರದಿಂದ ಅನುದಾನ ಪಡೆಯದ ಶಿಕ್ಷಣ ಸಂಸ್ಥೆಗಳಿಂದ ಪೂರ್ಣ ಪ್ರಮಾಣದ ತೆರಿಗೆ ಸಂಗ್ರಹಿಸುವ ಮೂಲಕ ಬರೆ ಎಳೆಯಲು ಮುಂದಾಗಿದೆ.

ಅಂಗೀಕೃತ ಶಿಕ್ಷಣ ಸಂಸ್ಥೆಗಳಿಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಕೆಎಂಸಿ ಕಾಯ್ದೆಯ ಸೆಕ್ಷನ್‌ 110ರ ತಿದ್ದುಪಡಿಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿರುವ ಪಾಲಿಕೆ, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಸಂಸ್ಥೆಗಳಿಗೆ ಪೂರ್ಣ ಪ್ರಮಾಣದ ತೆರಿಗೆ ಸಂಗ್ರಹಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದೆ. 

ಈ ಹಿಂದೆ ಸರ್ಕಾರದಿಂದ ಅನುದಾನ ಪಡೆಯದ ಶಿಕ್ಷಣ ಸಂಸ್ಥೆಗಳಿಗೆ ಆಸ್ತಿ ತೆರಿಗೆಯಲ್ಲಿ ಶೇ.25ರಷ್ಟು ತೆರಿಗೆ ವಿನಾಯಿತಿ ನೀಡಲಾಗಿತ್ತು. ಇನ್ನು ಮುಂದೆ ಶಿಕ್ಷಣ ಸಂಸ್ಥೆಗಳು ಪೂರ್ಣ ಪ್ರಮಾಣದ ತೆರಿಗೆ ಪಾವತಿಸಬೇಕಾಗುತ್ತದೆ. ಇದರೊಂದಿಗೆ ವಿನಾಯಿತಿ ಪಡೆದು ತೆರಿಗೆ ಪಾವತಿಸದ ಶಿಕ್ಷಣ ಸಂಸ್ಥೆಗಳಿಂದಲೂ ಕಟ್ಟುನಿಟ್ಟಾಗಿ ತೆರಿಗೆ ಸಂಗ್ರಹಿಸಲು ಪಾಲಿಕೆ ನಿರ್ಧರಿಸಿದೆ. 

ಅದೇ ರೀತಿ ಕಂದಾಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಜಾಗೃತ ದಳ ಕಾರ್ಯನಿರ್ವಹಿಸಲಿದ್ದು, ಪಾಲಿಕೆಯಿಂದ ಈಗಾಗಲೇ ಟೋಟಲ್‌ ಸ್ಟೇಷನ್‌ ಸರ್ವೆ ಪೂರ್ಣಗೊಳಿಸಿರುವ ಬಹುಮಹಡಿ ಕಟ್ಟಡಗಳು, ಮಾಲ್‌ಗ‌ಳು, ಟೆಕ್‌ಪಾರ್ಕ್‌ಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ 400 ಕೋಟಿ ರೂ. ಸಂಗ್ರಹಿಸಲು ಯೋಜನೆ ರೂಪಿಸಿದೆ. ಜತೆಗೆ ಪ್ರಸಕ್ತ ಸಾಲಿನಲ್ಲಿ 100 ಕಟ್ಟಡಗಳನ್ನು ಟೋಟಲ್‌ ಸ್ಟೇಷನ್‌ ಸರ್ವೆಗೆ ಒಳಪಡಿಸುವುದಾಗಿ ಬಜೆಟ್‌ನಲ್ಲಿ ಉಲ್ಲೇಖೀಸಿದೆ. 

ಪಾಲಿಕೆಯಲ್ಲಿ 2007-08ನೇ ಸಾಲಿನಲ್ಲಿ ಈವರೆಗೆ ಸರ್ಕಾರ ಸಂಗ್ರಹಿಸಿರುವ ಮುದ್ರಾಂಕ ಶುಲ್ಕದಲ್ಲಿ ಶೇ.2ರಷ್ಟು ಅಂದರೆ 500 ಕೋಟಿ ರೂ. ಸೆಸ್‌ ರೂಪದಲ್ಲಿ ಪಾಲಿಕೆಗೆ ಬರಬೇಕಿದೆ. ಅದರಂತೆ ಪ್ರಸಕ್ತ ಸಾಲಿನಲ್ಲಿ ಮೊದಲ ಹಂತವಾಗಿ 100 ಕೋಟಿ ರೂ. ಸರ್ಕಾರದಿಂದ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರು ಬಜೆಟ್‌ನಲ್ಲಿ ತಿಳಿಸಿದ್ದಾರೆ. 

ಸಾರ್ವಜನಿಕ ಖಾಸಗಿ ಸಹಭಾಗಿತ್ವ ಯೋಜನೆಯಡಿ ನಿರ್ಮಿಸಿದ ಬಸ್‌ ನಿಲ್ದಾಣಗಳು, ಪಾದಚಾರಿ ಸುರಂಗ ಮಾರ್ಗಗಳು, ಶೌಚಾಲಯಗಳಲ್ಲಿ ಅಳವಡಿಸಿರುವ ಫ‌ಲಕಗಳಿಂದ ಜಾಹೀರಾತು ಶುಲ್ಕ ಬಾಕಿಯಿದ್ದು, ಈ ಸಾಲಿನಲ್ಲಿ 41.95 ಕೋಟಿ ರೂ. ಸಂಗ್ರಹಿಸಲಾಗುವುದು.

ಹೊಸ ವಲಯಗಳಲ್ಲಿ ಭೂ ಪರಿವರ್ತನೆ ಆಗಿರುವ ಆಸ್ತಿಗಳಿಂದ ಸುಧಾರಣಾ ಶುಲ್ಕ ರೂಪದಲ್ಲಿ 400 ಕೋಟಿ ರೂ., ಕೇಂದ್ರ ಹಾಗೂ ಸರ್ಕಾರ ಕಟ್ಟಡಗಳಿಂದ 75 ಕೋಟಿ ರೂ. ಸೇವಾ ಶುಲ್ಕ, ಮೊಬೈಲ್‌ ಟವರ್‌ನಿಂದ 50 ಕೋಟಿ ರೂ., ಒಎಫ್ಸಿ ವಿಭಾಗದಿಂದ 175 ಕೋಟಿ ರೂ., ನಗರ ಯೋಜನೆ ವಿಭಾಗದಿಂದ 841 ಕೋಟಿ ರೂ. ಸಂಗ್ರಹಿಸಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.