ಯಶ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರತಿಷ್ಠಾನ ಪ್ರಶಸ್ತಿ
Team Udayavani, Aug 29, 2019, 3:05 AM IST
ಬೆಂಗಳೂರು: ಚಿತ್ರರಂಗದಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಗುರುತಿಸಿ, ಕೊಡಮಾಡುವ “ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೌಂಡೇಷನ್ ಅವಾರ್ಡ್ ಸೌತ್ 2019’ಗೆ ಈ ಬಾರಿ ನಟ ಯಶ್ ಅವರು ಆಯ್ಕೆಯಾಗಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಹೆಸರಲ್ಲಿ ಪ್ರಶಸ್ತಿ ನೀಡುತ್ತಾ ಬಂದಿರುವ ಪ್ರತಿಷ್ಠಾನ, ಈ ಬಾರಿಯಿಂದ ದಕ್ಷಿಣ ಭಾರತದ ಕಲಾವಿದರಿಗೂ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಬೆಸ್ಟ್ ಪರ್ಫಾಮರ್ ಆಫ್ ದಿ ಇಯರ್, ಬೆಸ್ಟ್ ಯೂಥ್ ಐಕಾನ್ ಆಫ್ ದಿ ಇಯರ್ ಎಂಬ ವಿಭಾಗಗಳಲ್ಲಿ, ಕಳೆದ ವರ್ಷ ಹೆಚ್ಚು ಜನಪ್ರಿಯತೆ ಗಳಿಸಿದ ನಟ ಯಾರು ಎಂಬುದನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ.
ಸೆ.20ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಇದೇ ಮೊದಲ ಬಾರಿ ಪ್ರತಿಷ್ಠಾನವು ಫಾಲ್ಕೆ ಹೆಸರಲ್ಲಿ ಯುವ ನಟರಿಗೆ ಪ್ರಶಸ್ತಿ ಕೊಡುತ್ತಿರುವುದು ವಿಶೇಷ. ಇದು ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಅಲ್ಲ. ದಾದಾ ಸಾಹೇಬ್ ಫಾಲ್ಕೆ ಹೆಸರಲ್ಲಿ ಪ್ರತಿಷ್ಠಾನ ನೀಡುವ ಪ್ರಶಸ್ತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್