ವಾರದಲ್ಲಿ ಸಾಲ ಮನ್ನಾ ಮಾಡದಿದ್ದರೆ ಹೋರಾಟ: ಯಡಿಯೂರಪ್ಪ

Team Udayavani, May 29, 2018, 6:20 AM IST

bsy-g-800.jpg

ಬೆಂಗಳೂರು: ರೈತರ ಸಾಲ ಮನ್ನಾಗೆ ಒತ್ತಾಯಿಸಿ ಬಿಜೆಪಿಯು ಬೆಂಗಳೂರು ಹೊರತುಪಡಿಸಿ ಸೋಮವಾರ ಕರೆ ನೀಡಿದ್ದ ಬಂದ್‌ ರಾಜ್ಯದೆಲ್ಲೆಡೆ ಯಶಸ್ವಿಯಾಗಿದೆ ಎಂದಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿಗಳು ಒಂದು ವಾರದಲ್ಲಿ ಸಾಲ ಮನ್ನಾ ಮಾಡದಿದ್ದರೆ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ಉಳಿದ 30 ಜಿಲ್ಲೆಗಳಲ್ಲಿ ಸ್ವಯಂ ಪ್ರೇರಿತ ಬಂದ್‌ ಯಶಸ್ವಿಯಾಗಿದೆ. ಎಲ್ಲಿಯೂ ಅಂಗಡಿ, ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಮುಚ್ಚಿಸಿಲ್ಲ. ಸಂಚಾರಕ್ಕೆ ಅಡ್ಡಿಪಡಿಸಿಲ್ಲ. ಸ್ವಯಂಪ್ರೇರಿತವಾಗಿ ಬಂದ್‌ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರವು ಪೊಲೀಸ್‌ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರಯತ್ನಿಸಿತು. ಅನಗತ್ಯವಾಗಿ ಸಂಸದರು ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಬಂಧಿಸಿತು ಎಂದು ದೂರಿದರು.

ಒಂದು ವಾರದಲ್ಲಿ ರೈತರ ಸಾಲ ಮನ್ನಾ ಮಾಡದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾಗಿ ಒಂದು ವಾರ ನಿರೀಕ್ಷಿಸಲಾಗುವುದು. ನಂತರವೂ ಸಾಲ ಮನ್ನಾ ಮಾಡದಿದ್ದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ರೈತರ ಹಿತರಕ್ಷಣೆ ಕಾಳಜಿ ಇಲ್ಲ
ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡುವುದಾಗಿ ಚುನಾವಣೆಗೂ ಮುನ್ನ ಘೋಷಿಸಿದ್ದ ಕುಮಾರಸ್ವಾಮಿಯವರು ಆ ನಂತರ ದಿನಕ್ಕೊಂದು ಹೇಳಿಕೆ ನೀಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಂಪುಟ ರಚನೆ, ಖಾತೆ ಹಂಚಿಕೆ ಗೊಂದಲದಲ್ಲೇ ಮುಳುಗಿರುವ ಮುಖ್ಯಮಂತ್ರಿಗಳಿಗೆ ರೈತರ ಹಿತರಕ್ಷಣೆ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ಧಾಳಿ ನಡೆಸಿದರು.

ಕಳೆದ ಐದು ವರ್ಷದಲ್ಲಿ ರಾಜ್ಯದಲ್ಲಿ 3,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣೆ ನಂತರವೂ ಬೆಳಗಾವಿ, ರಾಯಚೂರಿನಲ್ಲಿ ಸಾಲಬಾಧೆ ತಾಳಲಾರದೆ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಕಳವಳಕಾರಿ ಸಂಗತಿ. ಒಂದೊಮ್ಮೆ ಸರ್ಕಾರ ಸಾಲ ಮನ್ನಾ ಮಾಡಿದ್ದರೆ ಈ ದುರ್ಘ‌ಟನೆಗಳನ್ನು ತಪ್ಪಿಸಬಹುದಿತ್ತು. ಮೈತ್ರಿ ಸರ್ಕಾರದ ನೆಪವೊಡ್ಡಿ ಈ ಹಿಂದೆ ತಾವೇ ನೀಡಿದ್ದ ಭರವಸೆಯಿಂದ ಹಿಂದೆ ಸರಿಯುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಬಲಿಪಶುವಾಗಲು ಬಿಡುವುದಿಲ್ಲ
ಕುಮಾರಸ್ವಾಮಿಯವರು ಸಾಂದರ್ಭಿಕ ಶಿಶುವಾಗಿರಲಿ ಇಲ್ಲವೇ ಸನ್ನಿವೇಶದ ಶಿಶುವಾದರೂ ಆಗಲಿ. ಆದರೆ ಅವರ ಸಂದರ್ಭ, ಸನ್ನಿವೇಶಕ್ಕೆ ರೈತರು ಬಲಿಪಶುಗಳಾಗುವುದನ್ನು ಸಹಿಸುವುದಿಲ್ಲ. ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಅಧಿಕಾರ ಹಿಡಿಯುವ ಮುನ್ನ ಕಾಂಗ್ರೆಸ್‌ನಿಂದ ಸ್ಪಷ್ಟ ಭರವಸೆ ಪಡೆಯದೆ ಕುರ್ಚಿ ವ್ಯಾಮೋಹಕ್ಕೆ ಮುಖ್ಯಮಂತ್ರಿಯಾದ ಕುಮಾರಸ್ವಾಮಿಯವರು ಇದೀಗ ಕುಂಟು ನೆಪ ಹೇಳುವುದು ಸರಿಯಲ್ಲ ಎಂದು ಕಿಡಿ ಕಾರಿದರು.

ಜನರ ಕ್ಷಮೆ ಯಾಚಿಸಬೇಕು
ತಾವು ರಾಜ್ಯದ ಜನರ ಮುಲಾಜಿನಲ್ಲಿಲ್ಲ. ಬದಲಿಗೆ ಕಾಂಗ್ರೆಸ್ಸಿನ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಿನ ಆರೂವರೆ ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅವಮಾನಿಸಿದ್ದಾರೆ. ಸ್ವತಂತ್ರ ಭಾರತ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯೂ ಜನರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡಿಲ್ಲ. ಕುಮಾರಸ್ವಾಮಿಯವರು ಹತಾಶೆಯಿಂದ ನೀಡಿರುವ ಹೇಳಿಕೆ ಖಂಡನೀಯ. ಕೂಡಲೇ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.