ಬಾಲಕನ ಜತೆ ಯುವತಿ ವಿವಾಹ: ದೂರು

Team Udayavani, Feb 23, 2020, 3:06 AM IST

chalakana

ಬೆಂಗಳೂರು: ಪ್ರಾಪ್ತ ಬಾಲಕನಿಗೆ ಆತನ ಪೋಷಕರೇ ಬಲವಂತವಾಗಿ ಮದುವೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹದಿನಾರು ವರ್ಷದ ತಮ್ಮ ಪುತ್ರ ಹತ್ತೂಂಬತ್ತು ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ ವಿಚಾರ ತಿಳಿದ ಬಾಲಕನ ಪೋಷಕರು ಇಬ್ಬರಿಗೂ ಬಲವಂತವಾಗಿ ಮದುವೆ ಮಾಡಿಸಿದ್ದಾರೆ.

ಈ ವಿಚಾರ ತಿಳಿದ ಬನಶಂಕರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಚೇರಿ ಅಧಿಕಾರಿಗಳು ಮತ್ತು ಪೊಲೀಸರು ಬಾಲ್ಯ ವಿವಾಹಿತರನ್ನು ಬೇರ್ಪಡಿಸಿ, ಬಾಲಕನನ್ನು ರಕ್ಷಿಸಿ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.  ಯುವತಿ ಊರ್ಮಿಳಾ (19) ಹಾಗೂ ಬಾಲಕನ ಪೋಷಕರ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಅಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.

ನೇಪಾಳ ಮೂಲದ ಮಾನಸಿಂಗ್‌ ಮತ್ತು ಲಕ್ಷ್ಮೀ ಸಿಂಗ್‌ 20 ವರ್ಷಗಳ ಹಿಂದೆ ಕೂಲಿ ಅರಸಿ ನಗರಕ್ಕೆ ಬಂದಿದ್ದು, ಮೈಕೋ ಲೇಔಟ್‌ನ ಅರಕೆರೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮಾನಸಿಂಗ್‌ ಆಟೋರಿಕ್ಷಾ ಓಡಿಸುತ್ತಿದ್ದು, ಲಕ್ಷ್ಮೀ ಸಿಂಗ್‌ ಮನೆ ಕೆಲಸ ಮಾಡುತ್ತಿದ್ದಾರೆ. ಬಾಲಕ ಎಂಟನೇ ತರಗತಿ ವ್ಯಾಸಂಗ ಅರ್ಧಕ್ಕೆ ಮೊಟಕುಗೊಳಿಸಿ, ಗ್ಯಾಸ್‌ ಏಜೆನ್ಸಿಯಲ್ಲಿ ಸಿಲಿಂಡರ್‌ ಡೆಲಿವರಿ ಕೆಲಸ ಮಾಡಿಕೊಂಡಿದ್ದಾನೆ.

ಯುವತಿ ನೇಪಾಳ ಮೂಲದವರಾಗಿದ್ದು, ಆಕೆಗೆ ತಂದೆ-ತಾಯಿ ಇಲ್ಲ. ಪುಟ್ಟೇನಹಳ್ಳಿಯಲ್ಲಿ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು, ಹತ್ತನೇ ತರಗತಿವರೆಗೂ ಓದಿದ್ದಾಳೆ. ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಎರಡು ಕುಟುಂಬಸ್ಥರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ದೂರದ ಸಂಬಂಧಿಕರು ಎಂಬುದು ಇದುವರೆಗಿನ ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಅಪ್ರಾಪ್ತ ಪ್ರೀತಿ: ಪ್ರೇಮಿಗಳ ಕುಟುಂಬಸ್ಥರು ದೂರದ ಸಂಬಂಧಿಕರಾಗಿರುವುದರಿಂದ ಯುವತಿ ಮತ್ತು ಬಾಲಕನ ನಡುವೆ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಆರು ತಿಂಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಬಾಲಕನ ಪೋಷಕರಿಗೆ ಗೊತ್ತಾಗಿದೆ. ಈ ವಿಚಾರ ಮಾತನಾಡುವ ನೆಪದಲ್ಲಿ ಫೆ.15ರಂದು ಯುವತಿಯನ್ನು ಮನೆಗೆ ಕರೆಸಿಕೊಂಡಿದ್ದಾರೆ. ಪುತ್ರನ ಜತೆಗಿನ ಪ್ರೀತಿ ವಿಚಾರ ಖಚಿತವಾಗುತ್ತಿದ್ದಂತೆ ಇಬ್ಬರಿಗೂ ಬಲವಂತವಾಗಿ ವಿವಾಹ ಮಾಡಿದ್ದಾರೆ. ಈ ಘಟನೆ ತಿಳಿದ ಸ್ಥಳೀಯರೊಬ್ಬರು ಫೆ.19ರಂದು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು.

ಬಲವಂತವಾಗಿ ಪ್ರೇಮಿಗಳ ವಿವಾಹ: ಬನಶಂಕರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಚೇರಿಯ ಅಧಿಕಾರಿಗಳ ತಂಡ ಹಾಗೂ ಪುಟ್ಟೇನಹಳ್ಳಿ ಪೊಲೀಸರು ಮೈಕೋ ಲೇಔಟ್‌ನಲ್ಲಿರುವ ಬಾಲಕನ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಯವತಿ ಮತ್ತು ಬಾಲಕ ಪರಸ್ಪರ ಪ್ರೀತಿಸುತ್ತಿದದ್ದು ನಿಜ. ಆದರೆ, ಇಬ್ಬರಿಗೂ ಈಗಲೇ ಮದುವೆ ಮಾಡಿಕೊಳ್ಳಲು ಇಷ್ಟ ಇರಲಿಲ್ಲ. ಪೋಷಕರು ಬಲವಂತವಾಗಿ ಮದುವೆ ಮಾಡಿಸಿದ್ದಾರೆ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.