ಮಡಿವಾಳದಲ್ಲಿ ನಡುರಾತ್ರಿ ರಸ್ತೆಯಲ್ಲೇ ಯುವತಿಯ ನಗ್ನ ಶೋ !
Team Udayavani, May 28, 2017, 1:53 PM IST
ಬೆಂಗಳೂರು : ನಗರದ ಮಡಿವಾಳದಲ್ಲಿ ಶನಿವಾರ ತಡರಾತ್ರಿ ಯುವತಿಯೊಬ್ಬಳು ವಸ್ತ್ರಗಳನ್ನು ಬಿಚ್ಚಿ ಅರೆನಗ್ನವಾಗಿ ದೇಹದ ಅಂಗಾಂಗಳನ್ನು ಪ್ರದರ್ಶಿಸಿ ವಿಕೃತವಾಗಿ ಜನರನ್ನು ಸೆಳೆಯುತ್ತಿದ್ದ ಘಟನೆ ನಡೆದಿದ್ದು, ಈ ಸಂಬಂಧ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿವಾಳದ ಮೆಡಿಕಲ್ವೊಂದರ ಎದುರು ಅರೆನಗ್ನ ಶೋ ನೀಡುತ್ತಿದ್ದ ರೂಪಾ ಬಿಸ್ವಾಸ್ ಎಂಬ ಯುವತಿಗೆ ಜಲಾಲ್ ಪಾಷಾ,ರಾಹುಲ್ ಮತ್ತು ಇನಾಯತ್ ಎಂಬ ಯುವಕರು ಸಾಥ್ ನೀಡಿದ್ದರು.ಯುವತಿ ಸೇರಿದಂತೆ ನಾಲ್ವರೂ ಮದ್ಯಪಾನ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಸಹ್ಯಕರ ದೃಶ್ಯ ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇಚ ಸ್ಥಳಕ್ಕಾಗಮಿಸಿದ ಮಡಿವಾಳಾ ಠಾಣಾ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಣ ಬಿಸಾಡಿ ..ಮಜಾ ನೋಡಿ..ಎಂದು ನಾಲ್ವರೂ ಕೂಗುತ್ತಾ ಜನರನ್ನು ಸೆಳೆಯಲು ಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.
ಸಾರ್ವಜನಿಕ ಪ್ರದೇಶದಲ್ಲಿ ಅನುಚಿತವಾಗಿ ವರ್ತಿಸಿದ್ದು ಮತ್ತು ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಯುವತಿ ಮತ್ತು ಮೂವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು