Udayavni Special

ವಿದೇಶಗಳಿಂದ 317 ಮಂದಿ ತಾಯ್ನಾಡಿಗೆ


Team Udayavani, May 22, 2020, 6:49 AM IST

taynadige

ದೇವನಹಳ್ಳಿ: ಕೋವಿಡ್‌ 19 ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಮಸ್ಕಟ್‌, ದಮ್ಮಮ್‌ ಮತ್ತು ಅಮೇರಿಕಾದ ಸ್ಯಾನ್‌ ಫ್ರಾನ್ಸಿಸ್ಕೋ ದೇಶಗಳಿಂದ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 317 ಅನಿವಾಸಿ  ಕನ್ನಡಿಗರು ಆಗಮಿಸಿದರು.

ಮಸ್ಕಟ್‌ನಿಂದ 115 ಪ್ರಯಾಣಿಕರು: ಮಸ್ಕಟ್‌ನಿಂದ 6ನೇ ವಿಮಾನದಲ್ಲಿ ಪ್ರಯಾಣಿಸಿರುವ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 115 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಸರ್ಕಾರದ ನಿರ್ದೇಶನದಂತೆ ಪ್ರಯಾಣಿಕರ  ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿಲ್ಲ. ಆರೋಗ್ಯ ತಪಾಸಣೆ ಬಳಿಕ, 115 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‌ ಗಾಗಿ ಹೋಟೆಲ್‌ಗ‌ಳಿಗೆ  ಬಿಎಂಟಿಸಿ ಬಸ್‌ಗಳ ಮೂಲಕ ಕಳುಹಿಸಿಕೊಡಲಾಗಿದೆ.

117 ಮಂದಿ ಸ್ಯಾನ್‌ಫ್ರಾನ್ಸಿಸ್ಕೋದಿಂದ: ಅಮೇರಿಕಾದ ಸ್ಯಾನ್‌ ಫ್ರಾನ್ಸಿಸ್ಕೋದಿಂದ 8ನೇ ವಿಮಾನದ ಮೂಲಕ ಒಟ್ಟು 117 ಮಂದಿ ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ. ಏರ್‌ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಟ್ಟು  117 ಮಂದಿ ಪ್ರಯಾಣಿಕರಲ್ಲಿ 50 ಪುರುಷ, 67 ಮಹಿಳಾ ಪ್ರಯಾಣಿಕರಿದ್ದರು.

ಹೈದರಾಬಾದ್‌ಗೆ 117 ಮಂದಿ ಪ್ರಯಾಣ: ಬಳಿಕ ಏರ್‌ ಇಂಡಿಯಾ ವಿಮಾನ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ ಹೈದರಾಬಾದ್‌ ವಿಮಾನ ನಿಲ್ದಾಣಕ್ಕೆ ತೆರಳಿತು. ಸರ್ಕಾರದ ನಿರ್ದೇಶ ನದಂತೆ, 117 ಪ್ರಯಾಣಿಕರ  ಆರೋಗ್ಯ ತಪಾ ಸಣೆ ನಡೆಸ ಲಾಗಿದ್ದು, ಯಾವುದೇ ಪ್ರಯಾಣಿ ಕರಲ್ಲಿ ಕೊರೊನಾ ಲಕ್ಷಣ ಕಂಡು ಬಂದಿಲ್ಲ. 117 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‌ ಗಾಗಿ ಹೋಟೆಲ್‌ಗ‌ಳಿಗೆ ಬಿಎಂ ಟಿಸಿ ಬಸ್‌ಗಳ ಮೂಲಕ ಕಳುಹಿಸಿಕೊಡಲಾಗಿದ್ದು ಕ್ವಾರಂಟೈನ್‌ ವೆಚ್ಚ ಭರಿಸಲಿದ್ದಾರೆ.

ಮೇ 11 ರಿಂದ ಇಲ್ಲಿಯವರೆಗೆ 1038 ಪ್ರಯಾಣಿಕರು ವಿವಿಧ ದೇಶಗಳಿಂದ ಬಂದಿದ್ದಾರೆಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್‌ ಕೆ.ನಾಯಕ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾ, ತಹಶೀ ಲ್ದಾರ್‌ ಅಜಿತ್‌ಕುಮಾರ್‌ ರೈ, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ,ಇಒ ವಸಂತ ಕುಮಾರ್‌, ಪುರಸಭಾ ಮುಖ್ಯಾಧಿಕಾರಿ ಹನುಮಂತೇಗೌಡ, ವಿಜಯಪುರಪುರ ಸಭಾ  ಮುಖ್ಯಾಧಿಕಾರಿ ಪ್ರದೀಪ್‌ ಇದ್ದರು.

ವ್ಯಕ್ತಿಗೆ ಸೊಂಕು ಲಕ್ಷಣ: 7ನೇ ವಿಮಾನದಲ್ಲಿ ದಮ್ಮಮ್‌ ನಿಂದ ಗರ್ಭಿಣಿಯರು, ಮಕ್ಕಳು ಸೇರಿ ಒಟ್ಟು 85 ಅನಿವಾಸಿ ಭಾರತೀಯರು ಆಗಮಿಸಿ ದ್ದಾರೆ. ಒಟ್ಟು 85 ಮಂದಿ ಪ್ರಯಾಣಿಕರಲ್ಲಿ 6 ಗರ್ಭಿಣಿಯರು, 10 ವರ್ಷದೊಳಗಿನ  4 ಮಕ್ಕಳು ಸೇರಿ 67 ಪುರುಷ, 18 ಮಹಿಳೆ ಯರು ಇದ್ದಾರೆ. ತಜ್ಞ ವೈದ್ಯರು, ಸಿಬ್ಬಂದಿ 85 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದರು. ಇದರಲ್ಲಿ ಒಬ್ಬರಿಗೆ ಕೊರೊ ನಾ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜೀವ್‌ ಗಾಂಧಿ  ಆಸ್ಪತ್ರೆಗೆ ಕ್ವಾರಂಟೈನ್‌ಗಾಗಿ ಕಳುಹಿಸಿಕೊಡಲಾಗಿದೆ.

ಟಾಪ್ ನ್ಯೂಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ, ಗ್ರಾಮಸ್ಥರಿಂದ ತರಾಟೆ, udayavanipaper, kannadanews,

ಕಸ ಹಾಕಿದವರಿಗೆ ಗ್ರಾಮಸ್ಥರಿಂದ ತರಾಟೆ

ವೀಲಿಂಗ್‌ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ಬಹುಜನ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್‌ ಮನವಿ

ವೀಲಿಂಗ್‌ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ನಿರ್ವಹಣೆ ಇಲ್ಲ ದೆ ಸೊರಗುತ್ತಿರುವ ಕೆರೆ-ಕಟ್ಟೆಗಳು

ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಕೆರೆ-ಕಟ್ಟೆಗಳು

ಮೂವರ ಸೆರೆ, ಕಳವು ಮಾಡಿದ್ದ ಆಟೋಗಳ ವಶ ಪೊಲೀಸರ ತಂಡಕ್ಕೆ ಡಿವೈಎಸ್‌ಪಿ ಅಭಿನಂದನೆ

ಕಳವು ಮಾಲು ಮಾರುತ್ತಿದ್ದವರ ಬಂಧನ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

4

ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

3

ನಿಯಮ ಪಾಲಿಸಿ ಜಾತ್ರೆ ನಡೆಸಿ

2

ಪುನರ್ವಸತಿ-ಕಾಳಜಿ ಕೇಂದ್ರ ಪ್ರಾರಂಭಕ್ಕೆ ಮನವಿ

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.