ಹಾಲು ಉತ್ಪಾದಕರಿಗೆ 6 ರೂ. ಪ್ರೋತ್ಸಾಹ ಧನ

Team Udayavani, Sep 20, 2019, 2:56 PM IST

br-tdy-1

ದೇವನಹಳ್ಳಿ: ಹಾಲು ಉತ್ಪಾದಿಸುವ ರೈತರಿಗೆ ಸರ್ಕಾರದಿಂದ 6 ರೂ.ಪ್ರೋತ್ಸಾಹ ಧನ ನೀಡಲಾಗುವುದು ಎಂದು ಬೆಂಗಳೂರು ಪೂರ್ವ ತಾಲೂಕಿನ ಬಮೂಲ್‌ ನಿದೇರ್ಶಕ ಮಂಜುನಾಥ್‌ ತಿಳಿಸಿದರು.

ತಾಲೂಕಿನ ಬಾಲೇಪುರ ಹಾಲು ಉತ್ಪಾದಕರ ಸಹಕಾರಿ ಸಂಘದ 2018-19 ಸಾಲಿನ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.ತಿಂಗಳ ಹಿಂದೆ ಪ್ರತಿ ಲೀಟರ್‌ ಹಾಲಿಗೆ ಒಂದು ರೂ. ಹೆಚ್ಚಿಸಲಾಗಿದೆ. ಗುಣಮಟ್ಟದ ಹಾಲಿಗೆ ಲೀಟರ್‌ಗೆ 28 ರೂ.ಸಿಗಲಿದೆ. ಹಾಲು ಕರೆಯುವ ಯಂತ್ರವನ್ನು ಸಬ್ಸಿಡಿ ದರದಲ್ಲಿ ನೀಡುತ್ತದ್ದೇವೆ. ಬಮೂಲ್‌ನಿಂದ ಬರುವ ಎಲ್ಲಾ ಯೋಜನೆಗಳು ರೈತರಿಗೆ ತಲುಪಬೇಕು.ಈ ನಿಟ್ಟಿನಲ್ಲಿ ಬಮೂಲ್‌ ಕಾರ್ಯನಿರ್ವಹಿಸುತ್ತಿದೆ. ಗುಣಮಟ್ಟದ ಹಾಲನ್ನು ಸರಬರಾಜು ಮಾಡುವುದರ ಮೂಲಕ ಹೆಚ್ಚಿನ ಲಾಭಗಳಿಸಬಹುದು.

ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ಹಾಗೂ ರಾಸುಗಳ ವಿಮೆ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು ಕನಕಪುರದಲ್ಲಿ ಮೆಗಾ ಡೇರಿಯಾಗಿರುವುದರಿಂದ 16 ಲಕ್ಷ ಲೀಟರ್‌ ಹಾಲು ಬರುತ್ತಿದೆ. ಇದರಿಂದ 10 ಲಕ್ಷ ಲೀಟರ್‌ ಮಾತ್ರ ಖಾಲಿಯಾಗುತ್ತಿದೆ ಉಳಿದ 6 ಲಕ್ಷ ಲೀಟರ್‌ ಆಹಾರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಹಾಲಿನ ಗುಣಮಟ್ಟದ ತಕ್ಕಂತೆ ರೈತರಿಗೆ ಹಣ ಕೈ ಸೇರುತ್ತಿದೆ ಎಂದರು.

ಸಂಘದ ಅಧ್ಯಕ್ಷ ರಾಮಾಂಜನಪ್ಪ ಮಾತನಾಡಿ ನಮ್ಮ ಸಂಘವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸದಸ್ಯರಿಗೆ ಶೇಕಡ 2 ರೂ 90 ಪೈಸೆ ಬೋನಸ್‌ ನೀಡಲಾಗುತ್ತಿದೆ. ಸಂಘದಲ್ಲಿ ರೈತರಿಗೆ ಇನ್ನೂ ಹಲವಾರು ಯೋಜನೆಗಳು ಜಾರಿಯಾಗಲಿವೆ. ಬಮೂಲ್‌ ವಿಮೆ ಯೋಜನೆಯನ್ನು ಪ್ರತಿಯೊಬ್ಬ ಸದಸ್ಯರು ಉಪಯೋಗಿಸುವಂತೆ ಪ್ರೋತ್ಸಾಯಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಪೂರ್ವ ಶಿಬಿರ ಕಛೇರಿಯ ಉಪವ್ಯವಸ್ಥಾಪಕ ಅಶೋಕ್‌, ವಿಸ್ತರಣಾಧಿಕಾರಿ ಹನುಮಂತಪ್ಪ, ಸಂಘದ ಉಪಾಧ್ಯಕ್ಷ ಗೋಪಾಲಕೃಷ್ಣ, ನಿರ್ದೇಶಕರಾದ ರಾಮ ಕೃಷ್ಣಪ್ಪ, ನಂಜಪ್ಪ, ಕೆಂಪಣ್ಣ, ವೆಂಕಟರಾಮಯ್ಯ, ಕೃಷ್ಣಪ್ಪ, ಮುನಿರಾಜಪ್ಪ, ರಾಮಕೃಷ್ಣಪ್ಪ, ವನಜಾ ಕ್ಷಮ್ಮ, ಮುನಿಯಮ್ಮ, ರಾಜಪ್ಪ, ಗ್ರಾಪಂ ಉಪಾಧ್ಯಕ್ಷ ನವೀನ್‌, ಗ್ರಾಪಂ ಸದಸ್ಯ ಆಂಜಿನಪ್ಪ, ಗ್ರಾಮದ ಮುಖಂಡ ರಮೇಶ್‌, ಕಾರ್ಯನಿರ್ವಹಣಾಧಿಕಾರಿ ಕೆಂಪರಾಜ್‌, ಹಾಲು ಪರೀಕ್ಷಕ ಮುನಿಕಾಂತಪ್ಪ, ಸಹಾಯಕ ಆಂಜಿನಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.