ಸ್ನೇಹಿತನನ್ನು ಬೀಳ್ಕೊಡಲು ಏರ್ಪೋರ್ಟ್ ಗೆ ಹೋಗುತ್ತಿದ್ದಾಗ ಅಪಘಾತ: ಬೈಕ್ ಸವಾರ ಸಾವು
Team Udayavani, Jun 29, 2022, 5:24 PM IST
ವಿಜಯಪುರ(ಬೆಂ. ಗ್ರಾ): ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಮೂಲದ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ವಿದೇಶಕ್ಕೆ ಹೋಗುತ್ತಿದ್ದ ಸ್ನೇಹಿತನನ್ನು ಬೀಳ್ಕೊಡಲು ಏರ್ಪೋರ್ಟ್ ಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಸ್ನೇಹಿತರು ತಿಳಿಸಿದ್ದಾರೆ. ಇತರೆ ಸ್ನೇಹಿತರು ಕಾರಿನಲ್ಲಿ ಹೋಗುತ್ತಿದ್ದರು ಎನ್ನಲಾಗಿದೆ.
ರಸ್ತೆಯಲ್ಲಿ ಸ್ವೀಡ್ ಬ್ರೇಕರ್ ಇದ್ದರೂ ಅತಿವೇಗದಲ್ಲಿ ಲಾರಿ ಚಲಾವಣೆ ನಡೆಸಿರುವ ಬಗ್ಗೆ ಸ್ಥಳೀಯರು ಆರೋಪ ಮಾಡಿದ್ದಾರೆ. ಲಾರಿಯು ರಸ್ತೆ ಹಂಪ್ ಮೇಲೆ ಎಗರಿ ಬೈಕ್ ಗೆ ಗುದ್ದಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಈ ವೇಳೆ ಬೈಕ್ ಸಮೇತ ಸವಾರ ನಜ್ಜುಗುಜ್ಜಾಗಿ ಸಾವು ಸಂಭವಿಸಿದೆ.
ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆಯಿದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರ್ಸಿಂಗ್ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್
ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್ ಗುಂಡೂರಾವ್
ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ಆಗದು
ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ
ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್