ಅಂಬೇಡ್ಕರ್‌ ಪರಿನಿರ್ವಾಣ ದಿನಾಚರಣೆ

Team Udayavani, Dec 7, 2019, 12:01 PM IST

ದೇವನಹಳ್ಳಿ : ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನರಚಿಸಿದ್ದಾರೆ ಎಂದು ಶಾಸಕ ಎಲ್‌ ಎನ್‌ ನಾರಾಯಣಸ್ವಾಮಿ ತಿಳಿಸಿದರು.

ನಗರದ ಮಿನಿವಿಧಾನ ಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್‌ ಅವರ 63 ನೇ ಮಹಾ ಪರಿನಿರ್ವಾ ದಿನದ ಅಂಗವಾಗಿ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್‌ರವರು ಕೇವಲ ಒಂದು ಜಾತಿಗೆ ಸೀಮಿತ ಅಲ್ಲ. ಮನುಕುಲಕ್ಕೆ ಅವರ ಕೊಡುಗೆ ಅಪಾರವಾದದ್ದು. ಡಾ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿ ಸಂವಿಧಾನದ ಹಕ್ಕುಗಳ ಬಗ್ಗೆ ಜನರಿಗೆ ತಿಳಿಸಿದರು. ಅಂಬೇಡ್ಕರ್‌ ರವರ ವಿಚಾರ ಧಾರೆಗಳನ್ನು ಅರ್ಥ ಮಾಡಿಕೊಂಡರೆ ಯವ ಪೀಳಿಗೆ ಭವಿಷ್ಯ ಉಜ್ವಲವಾಗುತ್ತದೆ. ಸೂರ್ಯ ಚಂದ್ರರು ಇರುವ ತನಕ ಅಂಬೇಡ್ಕರ್‌ ಅವರ ಆದರ್ಶ ಗುಣಗಳು ಅವರ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಸ್ತುತವಾಗಿರುತ್ತವೆ ಎಂದರು. ರಾಜ್ಯ ಮಾದಿಗ ದಂಡೋರ ಉಪಾಧ್ಯಕ್ಷ ಬುಳ್ಳ ಹಳ್ಳಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಂವಿಧಾನ ಸುಡುವುದು ಸಂವಿಧಾನವನ್ನು ಅಪಮಾನ ಮಾಡುತ್ತಿದ್ದಾರೆ. ಕೆಲವರು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಎಂಬ ಹೇಳಿಕೆಗಳನ್ನು ಹೇಳುತ್ತಾರೆ. ಪ್ರಜಾ ಪ್ರಭುತ್ವ ವ್ಯವಸ್ಥೆ ಉಳಿದಿದೆ ಎಂದರೆ ಅದು ಸಂವಿಧಾನ ದಿಂದ ಮಾತ್ರ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಸದಸ್ಯ ಕಾರಹಳ್ಳಿ ಶ್ರೀ ನಿವಾಸ್‌ ಮಾತನಾಡಿ ಇಡೀ ಜಗತ್ತಿನಲ್ಲಿ ಡಾ ಅಂಬೇಡ್ಕರ್‌ ರವರ 100 ಅಧ್ಯಯನ ಪೀಠಗಳಿವೆ. ಜಾತಿಗಳಿಗೆ ಸಂಬಂಧ ಪಟ್ಟಂತೆ ಹಲವಾರು ಅಧ್ಯಯನ ಮಾಡಿದ ಏಕೈಕ ವ್ಯಕ್ತಿ ಆಗಿದ್ದಾರೆ ಎಂದು ತಿಳಿಸಿದರು.

ತಾಪಂ ಅಧ್ಯಕ್ಷೆ ಚೈತ್ರಾ ವೀರೇಗೌಡ ಮಾತನಾಡಿದರು. ತಹಶೀಲ್ದಾರ್‌ ಅನಿಲ್‌ ಕುಮಾರ್‌ ಅರೋಲಿಕರ್‌, ಬುದ್ದ ವಿಹಾರದ ಜ್ಞಾನ ಲೋಕ ಬಂತೇಂಜಿ , ತಾಲೂಕು ಪಮಚಾಯಿತಿ ಸದಸ್ಯರಾದ ಗೋಪಾಲಸ್ವಾಮಿ, ಮಂಜುನಾಥ್‌, ಎಸ್‌ ಮಹೇಶ್‌, ತಾಲೂಕು ಛಲವಾದಿ ಮಹಾ ಸಭಾ ಅಧ್ಯಕ್ಷ ಕೆವಿ ಸ್ವಾಮಿ, ಜಿಲ್ಲಾ ಮಾದಿಗ ದಂಡೋರ ಅಧ್ಯಕ್ಷ ಜಿ ಮಾರಪ್ಪ, ತಾಲೂಕು ಅಧ್ಯಕ್ಷ ಕದಿರಪ್ಪ, ಡಿ ಎಸ್‌ ಎಸ್‌ ಜಿಲ್ಲಾ ಸಂಘಟನಾ ಸಂಚಾಲಕ ತಿಮ್ಮರಾಯಪ್ಪ, ತಾಲೂಕು ಡಿಎಸ್‌ ಎಸ್‌ ಪ್ರಧಾನ ಸಂಚಾಲಕ ನರಸಪ್ಪ, ಕೆಪಿಸಿಸಿ ಸದಸ್ಯ ಎ ಚಿನ್ನಪ್ಪ, ಮುಖಂಡರಾದ ಸಿದ್ಧಾರ್ಥ್, ಶ್ರೀನಿವಾಸ್‌, ಸಿ ಮುನಿಯಪ್ಪ, ಕಾರಹಳ್ಳಿ ಕೆಂಪಣ್ಣ, ಮುನಿರಾಜು, ಈರಪ್ಪ,ಶಿವಾನಂದ್‌, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹೊಸಕೋಟೆ: ತಾಲೂಕಿನ ದೇವನಗೊಂದಿಯಲ್ಲಿರುವ ಭಾರತ್‌ ಪೆಟ್ರೋಲಿಯಂ ಸಂಸ್ಥೆಯ ವತಿಯಿಂದ ಮೊಬೈಲ್‌ ಆರೋಗ್ಯ ತಪಾಸಣಾ ವಾಹನವನ್ನು ಕೊಡುಗೆಯಾಗಿ ನೀಡಲಾಗಿದೆ ಎಂದು...

  • ದೇವನಹಳ್ಳಿ: ಪ್ರತಿ ಇಲಾಖೆಗಳಿಂದ ದೊರೆಯುವ ಸರ್ಕಾರದ ಸೌಲಭ್ಯ ಗಳನ್ನು ಫ‌ಲಾನುಭವಿಗಳಿಗೆ ತಲುಪಿಸುವ ಜವಬ್ದಾರಿ ಅಧಿಕಾರಿಗಳದ್ದಾಗಿದ್ದು, ಸರಿಯಾಗಿ ಮಾಹಿತಿ...

  • ದೇವನಹಳ್ಳಿ: ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಬಗ್ಗೆ, ಜನರಲ್ಲಿ ಅರಿವು ಮೂಡಿಸಬೇಕು. ಮಹಿಳೆಯರ ಹಕ್ಕುಗಳ ಬಗ್ಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ...

  • ದೊಡ್ಡಬಳ್ಳಾಪುರ: ಬೆಂಗಳೂರಿನಿಂದ ವಿದೇಶಿ ಮಹಿಳೆಯನ್ನು ಕ್ಯಾಬ್‌ನಲ್ಲಿ ಕರೆತಂದು ಬೆತ್ತಲೆಗೊಳಿಸಿದ್ದ ಪ್ರಕರಣ ಹಾಗೂ ನಂದಿಬೆಟ್ಟದ ತಪ್ಪಲಿನ ಚನ್ನಾಪುರ...

  • ನೆಲಮಂಗಲ: ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಿ ಚಾಲಕರು ದೈಹಿಕ ಸಮಸ್ಯೆ ಹಾಗೂ ಮಾನಸಿಕ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಹೀಗಾಗಿಯೇ ರಸ್ತೆ ಅಪಘಾತಗಳು...

ಹೊಸ ಸೇರ್ಪಡೆ