ಅಂಬೇಡ್ಕರ್‌ ತತ್ವ ಆದರ್ಶ ಪಾಲಿಸಬೇಕು

Team Udayavani, Dec 9, 2019, 3:00 AM IST

ದೇವನಹಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಸಮಾನತೆಯ ತತ್ವವನ್ನು ಅಳವಡಿಸುವ ಮೂಲಕ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ತರಲು ಶ್ರಮಿಸಿದರು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ರಾಜ್ಯ ಕಾರ್ಯದರ್ಶಿ ನಂದಿಗುಂದ ವೆಂಕಟೇಶ್‌ ತಿಳಿಸಿದರು.

ನಗರದ ಸೂಲಿಬೆಲೆ ರಸ್ತೆಯ ವಕೀಲ ಮುನಿಕೃಷ್ಣ ಅವರ ಕಚೇರಿಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್‌ ಅವರ 63 ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮಮದಲ್ಲಿ ಮಾತನಾಡಿದರು.

ಸರ್ವರಿಗೂ ಸಮಪಾಲು, ಸಮಬಾಳು ತತ್ವವನ್ನು ಸಂವಿಧಾನದಲ್ಲಿ ಅಳವಡಿಸಿ ಶೋಷಿತ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟ ಡಾ.ಅಂಬೇಡ್ಕರ್‌. ಭಾರತೀಯ ರಿಸವ್‌‌ì ಬ್ಯಾಂಕ್‌ ಸ್ಥಾಪನೆ ಯಲ್ಲಿ ಪ್ರಮುಖ ಪಾತ್ರವಹಿಸಿ ದೇಶದ ಆರ್ಥಿಕತೆಗೂ ಶಕ್ತಿ ತುಂಬಿದರು. ಈ ಭಾರತ ದೇಶದ ಜಗತ್ತಿನ ಅತೀ ದೊಡ್ಡ ಪ್ರಜಾ ಪ್ರಭುತ್ವ ವ್ಯವಸ್ಥೆ ಮುನ್ನಡೆಯುತ್ತಿದೆ.

ಅದಕ್ಕೆ ಅಂಬೇಡ್ಕರ್‌ ಹಾಕಿಕೊಟ್ಟ ಸಂವಿಧಾನ ಭದ್ರ ಬುನಾದಿ ಆಗಿದೆ. ಕಾನ್ಸಿರಾಮ್‌ ಅವರೂ ಅಂಬೇಡ್ಕರ್‌ ಅವರ ಆದರ್ಶಗಳನ್ನು ಮೈ ಗೂಡಿಸಿಕೊಂಡು ಬಿಎಸ್‌ಪಿ ಪಕ ಮುನ್ನಡೆಸಿದರು ಎಂದರು. ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ, ಅಂಬೇಡ್ಕರ್‌ ತಮ್ಮ ಬದುಕನ್ನು ಹೋರಾಟದಲ್ಲೇ ಕಳೆದು ನಮಗೆ ಸಮಾನತೆ ನೀಡದೇ ಇದ್ದಿದ್ದರೆ, ಇಂದು ಸಮಾನತೆ ಅಸಾಧ್ಯವಾಗುತ್ತಿತ್ತು.

ಅಂದು ಅವರ ಬದುಕಿನ ತ್ಯಾಗ ಇಂದು ನಮ್ಮೆಲ್ಲರ ಗೌರವದ ಬದುಕಿಗೆ ಮುನ್ನುಡಿ ಬರೆದಿದೆ ಎಂದು ಹೇಳಿದರು. ತಾ.ಬಿಎಸ್‌ಪಿ ಅಧ್ಯಕ್ಷ ಬಂಗಾರಪ್ಪ, ಜಾಗೃತಿ ಸಮಿತಿ ಸದಸ್ಯೆ ರವಿಕಲಾ, ಜಿಲ್ಲಾ ಕಚೇರಿ ಕಾರ್ಯದರ್ಶಿ ನರಸಿಂಹ ಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಜಯ ಲಕ್ಷ್ಮಮ್ಮ, ಮುಖಂಡ ಶಿವಪ್ಪ, ಮತ್ತಿತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹೊಸಕೋಟೆ: ತಾಲೂಕಿನ ದೇವನಗೊಂದಿಯಲ್ಲಿರುವ ಭಾರತ್‌ ಪೆಟ್ರೋಲಿಯಂ ಸಂಸ್ಥೆಯ ವತಿಯಿಂದ ಮೊಬೈಲ್‌ ಆರೋಗ್ಯ ತಪಾಸಣಾ ವಾಹನವನ್ನು ಕೊಡುಗೆಯಾಗಿ ನೀಡಲಾಗಿದೆ ಎಂದು...

  • ದೇವನಹಳ್ಳಿ: ಪ್ರತಿ ಇಲಾಖೆಗಳಿಂದ ದೊರೆಯುವ ಸರ್ಕಾರದ ಸೌಲಭ್ಯ ಗಳನ್ನು ಫ‌ಲಾನುಭವಿಗಳಿಗೆ ತಲುಪಿಸುವ ಜವಬ್ದಾರಿ ಅಧಿಕಾರಿಗಳದ್ದಾಗಿದ್ದು, ಸರಿಯಾಗಿ ಮಾಹಿತಿ...

  • ದೇವನಹಳ್ಳಿ: ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಬಗ್ಗೆ, ಜನರಲ್ಲಿ ಅರಿವು ಮೂಡಿಸಬೇಕು. ಮಹಿಳೆಯರ ಹಕ್ಕುಗಳ ಬಗ್ಗೆ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ...

  • ದೊಡ್ಡಬಳ್ಳಾಪುರ: ಬೆಂಗಳೂರಿನಿಂದ ವಿದೇಶಿ ಮಹಿಳೆಯನ್ನು ಕ್ಯಾಬ್‌ನಲ್ಲಿ ಕರೆತಂದು ಬೆತ್ತಲೆಗೊಳಿಸಿದ್ದ ಪ್ರಕರಣ ಹಾಗೂ ನಂದಿಬೆಟ್ಟದ ತಪ್ಪಲಿನ ಚನ್ನಾಪುರ...

  • ನೆಲಮಂಗಲ: ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಿ ಚಾಲಕರು ದೈಹಿಕ ಸಮಸ್ಯೆ ಹಾಗೂ ಮಾನಸಿಕ ಒತ್ತಡಕ್ಕೆ ಸಿಲುಕುತ್ತಿದ್ದಾರೆ. ಹೀಗಾಗಿಯೇ ರಸ್ತೆ ಅಪಘಾತಗಳು...

ಹೊಸ ಸೇರ್ಪಡೆ