ಬಂಧಿತ ಇಬ್ಬರಿಗೆ ಕೋವಿಡ್‌ 19: 30 ಪೊಲೀಸರಿಗೆ ಕ್ವಾರಂಟೈನ್

Team Udayavani, May 21, 2020, 6:34 AM IST

ibbarige

ಆನೇಕಲ್‌: ಪಾದರಾಯನಪುರ ನಿವಾಸಿಯಾಗಿದ್ದ ಕೊರೊನಾ ಸೋಂಕಿತ ಕಳ್ಳನೊಬ್ಬನನ್ನು ಬಂಧಿಸಿದ ತಾಲೂಕಿನ ಹೆಬ್ಬಗೋಡಿ ಠಾಣೆಯ 30 ಮಂದಿ ಪೊಲೀಸರನ್ನು ಕ್ವಾರಂಟೈನ್‌ಗೆ ಒಳಪಡಿಸಿರುವ ಘಟನೆ ನಡೆದಿದೆ. ತಾಲೂಕಿನ  ಹೆಬ್ಬಗೋಡಿ ಠಾಣೆಯಲ್ಲಿ ಪಾದರಾಯನಪುರ ನಿವಾಸಿಯಾಗಿರುವ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿ  ದ್ದರು. ಆದರೆ, ಪೊಲೀಸರಿಗೆ ಕಳ್ಳ ಕೊರೊನಾ ಸೋಂಕಿತನಾಗಿರುವುದು ತಿಳಿದಿರಲಿಲ್ಲ ಎನ್ನಲಾಗಿದೆ.

ಹೆಬ್ಬಗೋಡಿ ಭಾಗದ  ಖಾಸಗಿ ಕಂಪನಿಯೊಂದರಲ್ಲಿ ಕಬ್ಬಿಣ ಕಳ್ಳತನ ಮಾಡಿದ್ದು, ಕಂಪನಿಯವರಿಗೆ ಮಾಹಿತಿ ತಿಳಿದು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿ ದ್ದರು. ಅದರಲ್ಲಿ ಕೊರೊನಾ ಸೋಂಕು ಪಾಸಿಟಿವ್‌ ಇರುವ ಪಾದರಾಯನಪುರದ ವ್ಯಕ್ತಿ ಪೊಲೀಸರ ನಿದ್ದೆಗೆಡಿಸಿದ್ದಾನೆ. ಪೊಲೀಸರು ಬುಧವಾರ ಕಳ್ಳನನ್ನು ಆನೇಕಲ್‌ನ ನ್ಯಾಯಾಲಯಕ್ಕೆ ಹಾಜರು  ಪಡಿಸಿ ಜೈಲಿಗೆ ಕಳುಹಿಸುವ ಮೊದಲು ವೈದ್ಯಕೀಯ ಪರೀಕ್ಷೆ ಮಾಡಿಸಿದ್ದಾರೆ.

ಆಗ ಆ ಕಳ್ಳನಿಗೆ ಕೊರೊನಾ ಸೋಂಕು  ಇರುವುದು ದೃಢಪಟ್ಟಿದೆ. ಹೀಗಾಗಿ ಇಡೀ ಠಾಣೆ ಹಾಗೂ ಎಲ್ಲಾ ಪೇದೆ ಹಾಗೂ ಅಧಿಕಾರಿಗಳು ಬೆಚ್ಚಿಬಿದ್ದಿದ್ದು, ಕ್ವಾರಂಟೈನ್‌ ಗೆ ಒಳಪಡಿಸಲಾಗಿದೆ. ಆತನಿಗೆ ಊಟ ನೀಡಿದವರು, ವಾಶ್‌ ರೂಂಗೆ ಕರೆದೊಯ್ದವರು, ಜೀಪ್‌ನಲ್ಲಿ ಕರೆದುಕೊಂಡು ಹೋದವರು.. ಹೀಗೆ ಅನೇಕರನ್ನು ಸೇರಿಸಿ ಒಟ್ಟು 30 ಮಂದಿಯನ್ನು ಇದೀಗ ಕ್ವಾರಂಟೈನ್‌ ಮಾಡಲಾಗಿದ್ದು, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಕ್ವಾರಂಟೈನ್‌ ನಲ್ಲಿ ಠಾಣೆ ಎಸ್‌ಐ, ಎಎಸ್‌ಐ, ಪೇದೆ, ಹೋಂ ಗಾರ್ಡ್ಸ್‌.. ಹೀಗೆ ಅನೇಕರು ಸೇರಿದ್ದು, ಹೆಬ್ಬಗೋಡಿ ಬಳಿ ಶ್ರೀ ಸಾಯಿ ವಿಶ್ರಾಂತಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಕೊರೊನಾ ಸೋಂಕು ಪಾಸಿಟಿವ್‌ ಆಗಿರುವ ಆರೋಪಿ ಜೊತೆ ಇರುವ ಇನ್ನಿಬ್ಬರು ಆರೋಪಿಗಳಿದ್ದು, ಅವರಲ್ಲಿ ಒಬ್ಬನಿಗೆ  ಸೋಂಕು ಪತ್ತೆಯಾಗಿದೆ. ಈವರೆಗೂ ತಾಲೂಕಿನಲ್ಲಿ ಯಾವುದೇ ಪ್ರಕರಣವಿರಲಿಲ್ಲ.

ಹೀಗಾಗಿ ಜನ ನೆಮ್ಮದಿಯಾಗಿದ್ದರು. ಪಾದರಾಯನ  ಪುರದ ಈ ವ್ಯಕ್ತಿಯಿಂದಾಗಿ ಇಡೀ ಠಾಣೆಗೆ ಬರಸಿಡಿಲು ಬಡಿದಂತಾಗಿದೆ. ಠಾಣೆಯಲ್ಲಿ  ಬೆಳಗ್ಗೆ  ಮಧ್ಯಾಹ್ನ ಹಾಗೂ ಸಂಜೆ 3 ಸಮಯ ಸ್ಯಾನಿಟೈಸರ್‌ ಮಾಡಲಾಗುತ್ತಿ ದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆ ಮೇಲಧಿಕಾರಿಗಳು ಠಾಣೆಗೆ ಬಂದು ಚರ್ಚಿಸಿದ್ದಾರೆ. ಆನೇಕಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ  ಪೊಲೀಸರನ್ನು ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಗುರುವಾರ ವರದಿ ಹೊರಬರಲಿದೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.