ಮೂರು ಕ್ಷೇತ್ರದಲ್ಲಿ ಹೊಸಬರಿಗೆ ಬಿಜೆಪಿ ಮಣೆ


Team Udayavani, Apr 13, 2023, 2:13 PM IST

ಮೂರು ಕ್ಷೇತ್ರದಲ್ಲಿ ಹೊಸಬರಿಗೆ ಬಿಜೆಪಿ ಮಣೆ

ದೇವನಹಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಚುನಾವಣಾ ಹುರಿಯಾಳುಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಚುನಾವಣೆಯ ರಂಗು ಕಾವೇರತೊಡಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಬರಲಿದ್ದು ಅದರಲ್ಲಿ ಎರಡು ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರಗಳಾಗಿದ್ದು ಇನ್ನೆರಡು ಸಾಮಾನ್ಯ ಕ್ಷೇತ್ರಗಳಾಗಿವೆ. ದೇವನಹಳ್ಳಿ ವಿಧಾನಸಭಾ ಮೀಸಲು ಕ್ಷೇತ್ರದಿಂದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ, ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಸಚಿವ ಎಂಟಿಬಿ ನಾಗರಾಜ್‌, ನೆಲಮಂಗಲ ವಿಧಾನಸಭಾ ಮೀಸಲು ಕ್ಷೇತ್ರದಿಂದ ಸಪ್ತಗಿರಿ ನಾಯಕ್‌, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಧೀರಜ್‌ ಮುನಿರಾಜು ಅವರಿಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ.

ಎಂಟಿಬಿ ನಾಗರಾಜ್‌ ಬಿಟ್ಟು ಎಲ್ಲಾ ಹೊಸಮುಖಗಳು: ಜಿಲ್ಲೆಯ ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಪೌರಾ ಡಳಿತ ಸಚಿವ ಹಾಗೂ ಹಾಲಿ ವಿದಾನಪರಿಷತ್‌ ಸದಸ್ಯ ಎಂಟಿಬಿ ನಾಗರಾಜ್‌ ಹೊರತುಪಡಿಸಿದರೆ ಉಳಿದವರೆಲ್ಲಾ ಹೊಸಬರು ಎನ್ನುವುದು ವಿಶೇಷ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಜೆಡಿಎಸ್‌ ನಿಂದ ಬಿ ಫಾರ್ಮ್ ನೀಡಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಎಲ್‌.ಎನ್‌.ನಾರಾಯಣಸ್ವಾಮಿ ಸಿ.ಫಾರ್ಮ್ ನೀಡಲಾಗಿತ್ತು. ಕಳೆದ ಒಂದು ವರ್ಷದ ಹಿಂದೆ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಬಿಜೆಪಿಗೆ ಸೇರ್ಪಡೆ ಗೊಂಡಿದ್ದರು. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಪ್ತಗಿರಿ ನಾಯಕ್‌ ಕಾಂಗ್ರೆಸ್‌ ಪಕ್ಷದಲ್ಲಿ ಇದ್ದರು.

ಬಿಜೆಪಿ ಸೇರ್ಪಡೆಗೊಂಡನಂತರ ಅವರಿಗೆ ಟಿಕೆಟ್‌ ನೀಡಲಾಗಿದೆ. ನೆಲಮಂಗಲಕ್ಕೆ ಹೊಸ ಅಭ್ಯರ್ಥಿ ಯನ್ನು ಕಣಕ್ಕೆ ಇಳಿಸಿದ್ದಾರೆ. ದೊಡ್ಡಬಳ್ಳಾಪುರ ದಲ್ಲಿ ಸಮಾಜ ಸೇವಕರಾಗಿ ಹಾಗೂ ಫ‌ಲಾನುಭವಿಗಳ ಪ್ರಕೋಷ್ಟದ ಸಂಚಾಲಕರಾಗಿದ್ದ ಧೀರಜ್‌ ಮುನಿ ರಾಜ್‌ ಅವರಿಗೆ ಟಿಕೆಟ್‌ ವರಿಷ್ಟರು ನೀಡಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್‌ ಪುತ್ರ ನಿತೀಶ್‌ ಪುರುಷೋತ್ತಮ್‌ ಅವರಿಗೆ ಟಿಕೆಟ್‌ ನೀಡಬೇಕು ಎಂದು ವರಿಷ್ಟರಲ್ಲಿ ಮನವಿ ಮಾಡಿದ್ದರು. ಎಂಟಿಬಿ ನಾಗರಾಜ್‌ ಅವರಿಗೆ ಟಿಕೆಟ್‌ ಖಾತರಿಪಡಿಸಿದ್ದಾರೆ. ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಶರತ್‌ ಬಚ್ಚೇಗೌಡ ವಿರುದ್ಧ ಸೋಲು ಅನುಭವಿಸಿದರು.ಅಭ್ಯರ್ಥಿಗಳು ಪೈನಲ್‌ ಆಗಿರುವುದರಿಂದ ಮೂರು ಪಕ್ಷಗಳಲ್ಲೂ ಗರಗೆದರಿದ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಬಿಜೆಪಿ ಟಿಕೆಟ್‌ ಕುತೂಹಲ ಪ್ರತಿಯೊಬ್ಬರಲ್ಲೂ ಇತ್ತು.

ಕಮಲ ಅರಳಿಸಲು ಸಾಕಷ್ಟು ಪ್ರಯತ್ನ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಎರಡು ಚುನಾವಣೆಗಳಿಂದ ಬಿಜೆಪಿ ಶಾಸಕರು ಗೆದ್ದಿಲ್ಲ. ಈ ಬಾರಿ ಕಮಲ ಅರಳಿಸಲು ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದಾರೆ. 2008ರಲ್ಲಿ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು. ತದನಂತರ ಚುನಾವಣೆಗಳಲ್ಲಿ ಬಿಜೆಪಿ ಶಾಸಕರು ಗೆದ್ದಿಲ್ಲ. ನೆಲಮಂಗಲ ಮತ್ತು ದೇವನಹಳ್ಳಿಗಳಲ್ಲಿ ಜೆಡಿಎಸ್‌ ಶಾಸಕರು ಗೆದ್ದಿದ್ದಾರೆ. ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಗೆದ್ದಿದ್ದಾರೆ. ಈ ಬಾರಿ ಯಾವುದೇ ಕ್ಷೇತ್ರದಲ್ಲಿ ಪ್ರಯೋಗ ಮಾಡುವುದು ಬೇಡ. ಗೆಲ್ಲುವ ನಿರೀಕ್ಷೆಯಿರುವ ಸಮರ್ಥ ಅಭ್ಯರ್ಥಿ ಯನ್ನೇ ಕಣಕ್ಕೆ ಬಿಡಬೇಕೆಂಬ ಅಂತಿಮ ತೀರ್ಮಾನ ಸ್ಪಷ್ಟಗೊಂಡಿದೆ.

– ಎಸ್‌.ಮಹೇಶ್

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.