ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Team Udayavani, Aug 13, 2019, 3:00 AM IST

jlleyalli

ದೇವನಹಳ್ಳಿ: ಜಿಲ್ಲೆಯಲ್ಲಿ ಮುಸ್ಲಿಮರು ತ್ಯಾಗ-ಬಲಿದಾನದ ಪ್ರತೀಕವಾದ ಬ್ರಕೀದ್‌ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ನಗರ ದ ಟಿಪ್ಪು ಸುಲ್ತಾನ್‌ ಮಸೀದಿಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಬಳಿಕ ನಿರ್ಗತಿಕರು, ಬಡವರಿಗೆ ತಮ್ಮ ಕೈಲಾಗುವ ದಾನ-ಧರ್ಮ ಮಾಡಿ ಸಂತೃಪ್ತರಾದರು.

ಸಾಮೂಹಿಕ ಪ್ರಾರ್ಥನೆಯಲ್ಲಿ ಚಿಣ್ಣರಿಂದ ಹಿಡಿದು ಅತ್ಯಂತ ಹಿರಿಯ ವಯಸ್ಸಿನವರೂ ಪಾಲ್ಗೊಂಡಿದ್ದರು. ಮೌಲ್ವಿಗಳು ನೆರೆದಿದ್ದವರಿಗೆ ಹಿತವಚನ ನುಡಿದರು. ಪ್ರತಿಯೊಬ್ಬರು ಹೊಸ ಹೊಸ ಉಡುವುಗಳೊಂದಿಗೆ, ಸುಗಂಧ ದ್ರವ್ಯ ಹಚ್ಚಿಕೊಂಡು ಎಲ್ಲರೂ ಒಟ್ಟಾಗಿ ಈದ್ಗಾ ಮೈದಾನದಲ್ಲಿ ಜಮಾ ಆಗುತ್ತಾರೆ. ನಂತರ ಪ್ರಾರ್ಥನೆ ಸಲ್ಲಿಸಿ, ಮನೆಗಳಿಗೆ ಹಿಂದುರಿಗೆ ತಂದಿದ್ದ ಪ್ರಾಣಿಯನ್ನು ಅಲ್ಲಹನಿಗೆ ಅರ್ಪಿಸಿ ಅದರಲ್ಲಿ ಮೂರು ಭಾಗ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ.

ಮುಸ್ಲಿಂ ಹಿರಿಯ ಮುಖಂಡ ಮುನಾವರ್‌ ಮಾತನಾಡಿ, ತ್ಯಾಗ ಬಲಿದಾನದ ಪ್ರತೀಕ ಹಬ್ಬ. ಬಕ್ರೀದ್‌ ಹಬ್ಬ ವಿಶ್ವದ ಕೋಟ್ಯಂತರ ಮುಸಲ್ಮಾನರ ನೆಚ್ಚಿನ ಹಬ್ಬವಾಗಿದೆ. ಸಾಮೂಹಿಕವಾಗಿ ಪ್ರಾರ್ಥನೆ ನಡೆಸಿ ವಾರ್ಷಿಕ ದುಡಿಮೆ ಇಂತಿಷ್ಟು ಹಣದಲ್ಲಿ ಎಲ್ಲಾ ಸಮುದಾಯದ ಕಡು ಬಡವರಿಗೆ ಅಕ್ಕಿ, ಬಟ್ಟೆ, ಹಣ, ಮಾಂಸ ದಾನ ಮಾಡಿ ಸಾರ್ಥಕವಾಗುವುದು ಸಂಪ್ರದಾಯವಾಗಿದೆ. ನಾಡಿನ ರೈತರು ಸುಖ ಶಾಂತಿ ನೆಮ್ಮದಿಯಿಂದ ಜೀವನ ನಡೆಸಬೇಕಾದರೆ ಕಾಲಕಾಲಕ್ಕೆ ಮಳೆಯಾಗುವಂತೆ ಅಲ್ಲಾಹ್‌ನಲ್ಲಿ ಪ್ರಾರ್ಥಿಸಿದೆವು ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದಿಂದ ಸಿಲುಕಿರುವ ಜನರು ಮತ್ತೇ ಮೊದಲಿನಂತೆ ಜೀವನ ಸಾಗಿಸುವಂತಾಗಲಿ ಎಂದು ಅಲ್ಲಾಹ್‌ನನ್ನು ಪ್ರಾರ್ಥಿಸಿದೆವು. ಇದು ನಮ್ಮ ಪವಿತ್ರ ಹಬ್ಬವಾಗಿರುವುದರಿಂದ ಪ್ರತಿ ಮುಸಲ್ಮಾನರು ಪ್ರತಿ ಮನೆಯಲ್ಲೂ ಹಬ್ಬ ಸಡಗರದಿಂದ ಆಚರಿಸುತ್ತೇವೆ. ಇಸ್ಲಾಮಿಕ್‌ ಕ್ಯಾಲೆಂಡರ್‌ನಲ್ಲಿ ಕೊನೆಯ ತಿಂಗಳಾದ ದುಲ್‌ಹಜ್‌ನ 10 ದಿನದಂದು ಆಚರಿಸುವ ಬಕ್ರೀದ್‌ ಧಾರ್ಮಿಕ ಚೌಕಟ್ಟಿನಲ್ಲಿ ಆಚರಿಸುವಂತಹ ಹಬ್ಬವಾಗಿದೆ.

ಚಾರಿತ್ರಿಕ ಹಿನ್ನಲೆಯೊಂದಿಗೆ ಧಾರ್ಮಿಕ ಚೌಕಟ್ಟಿನಲ್ಲಿ ಬಂಧಿಯಾಗಿ ಆಚರಿಸುವ ಈ ಹಬ್ಬ ಸಮಕಾಲೀನ ಜಗತ್ತಿನ ತ್ಯಾಗದ ಸಂದೇಶದೊಂದಿಗೆ ಸಮಾನತೆಯ ಸಂದೇಶ ಸಾರುತ್ತದೆ. ಬಕ್ರೀದ್‌ ಹಬ್ಬ ಬಲಿಕೊಡುವ ಹಬ್ಬ ಎನ್ನುವುದಕ್ಕಿಂತಲೂ ತ್ಯಾಗ ಬಲಿದಾನದ ಸಂಕೇತವಾಗಿ ಆಚರಿಸುವ ಹಬ್ಬವಾಗಿದೆ ಎಂದು ವಿವರಿಸಿದರು. ಮಾಜಿ ಪುರಸಭೆ ಅಧ್ಯಕ್ಷ ಇಕ್ಬಾಲ್‌ ಹುಸೇನ್‌, ಖಲೀಲ್‌ ಸಾಬ್‌, ಖಾದರ್‌ ಪಾಷ, ಆರೀಫ್, ಫ‌ಯಾಜ್‌ ಖಾನ್‌, ಅಮೀರ್‌ ಜಾನ್‌ ಇದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.