ಬೆಂ.ಗ್ರಾಮಾಂತರ ಜಿಲ್ಲೆ ಮಲೇರಿಯಾ ಮುಕ್ತ


Team Udayavani, Apr 29, 2023, 2:41 PM IST

ಬೆಂ.ಗ್ರಾಮಾಂತರ ಜಿಲ್ಲೆ ಮಲೇರಿಯಾ ಮುಕ್ತ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂರು ವರ್ಷದಿಂದ ಮಲೇರಿಯಾ ಪ್ರಕರಣ ಕಂಡುಬಂದಿಲ್ಲ. ಅದನ್ನು ಕಟ್ಟಿಹಾಕುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಮಲೇರಿಯಾ ನಿಯಂತ್ರಣದ ಸಲುವಾಗಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ರಕ್ತದ ಪರೀಕ್ಷೆ, ಚಿಕಿತ್ಸೆ ವ್ಯವಸ್ಥೆ ಕೂಡ ಮಾಡಲಾಗಿದೆ. ಅಲ್ಲದೆ, ಆ ರೋಗದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಇದು ಮಲೇರಿಯಾ ನಿಯಂತ್ರಣಕ್ಕೆ ಸಾಧ್ಯವಾಗಿದೆ. ಮಲೇರಿಯಾ ಈ ಹಿಂದೆ ಮಳೆಗಾಲದಲ್ಲಿ ಬೇಸಿಗೆಯಲ್ಲಿ ಜನರನ್ನು ಹೆಚ್ಚಾಗಿ ಕಾಡುತ್ತಿತ್ತು. ಕೆಲವೊಮ್ಮೆ ಜನರನ್ನು ಬಲಿತೆಗೆದುಕೊಂಡ ಉದಾಹರಣೆಯೂ ಇದೆ. ಅದಕ್ಕಾಗಿ ಮಲೇರಿಯಾ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಇಲಾಖೆ ಕ್ರಮವಹಿಸಿದೆ. ಜಿಲ್ಲೆಯಲ್ಲಿ ನಿರಂತರ ಜ್ವರದ ಲಕ್ಷಣ ಇರುವವರಿಗೆ ರಕ್ತ ಪರೀಕ್ಷೆ ಮಾಡಿಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಜ್ವರ ಇರುವವರ ರಕ್ತಲೇಪನ ಮಾಡಿಸಲಾಗುತ್ತಿದೆ.

ಮಲೇರಿಯಾ ಬಗ್ಗೆ ಅರಿವು: ವಲಸಿಗರನ್ನು ಸ್ಕ್ರೀನಿಂಗ್‌ ಗೆ ಒಳಪಡಿಸಲಾಗುತ್ತಿದೆ. ಶಾಲೆ ಹಾಗೂ ಜನರು ಹೆಚ್ಚಾಗಿರುವ ಕಡೆಗಳಲ್ಲಿ ಮಲೇರಿಯಾ ಅಪಾಯಗಳನ್ನು ನಿಯಂತ್ರಣ ಮಾಡುವ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲೆಡೆ ಮಲೇರಿಯಾ ರೋಗದ ಬಗ್ಗೆ ಜನಜಾಗೃತಿ ಮೂಡಿಸಿ ತಡೆಗಟ್ಟುವ ಕೆಲಸವನ್ನು ಮಾಡಲಾಗುತ್ತಿದೆ.

ನೀರು ನಿಲ್ಲದಂತೆ ಎಚ್ಚರವಹಿಸಿ: ಮನೆ ಅಕ್ಕಪಕ್ಕದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಟ್ಯಾಂಕ್‌, ತೊಟ್ಟಿ, ಸೊಂಪುಗಳನ್ನು ಸ್ವತ್ಛಗೊಳಿಸಿಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ಆಗದಂತೆ ಗಮನಹರಿಸಬೇಕು. ಜ್ವರ ಇದ್ದರೆ ಉದಾಸೀನ ಮಾಡದೆ ರಕ್ತ ಪರೀಕ್ಷೆ ಮಾಡಿಸಬೇಕು. ಜ್ವರದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಮಲೇರಿಯಾ ನಿಯಂತ್ರಣಾಧಿಕಾರಿಗಳು ಮನವಿ ಮಾಡಿದ್ದಾರೆ.

ವಲಸಿಗರಲ್ಲಿ ಪತ್ತೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕಳೆದ ಮೂರು ವರ್ಷಗಳಿಂದ ಸ್ಥಳೀಯರಲ್ಲಿ ಮಲೇರಿಯಾ ಪ್ರಕರಣ ವರದಿಯಾಗಿಲ್ಲ. ಆದರೆ, ಜಿಲ್ಲೆಯ ಕೈಗಾರಿಕೆಗಳಿಗೆ ಹಾಗೂ ಕೆಲಸ ಅರಸಿ ಬರುವ ವಲಸಿಗರಲ್ಲಿ ಮಲೇರಿಯಾ ಪತ್ತೆಯಾಗಿರುವುದು ಕಂಡುಬಂದಿದೆ. 2020-21ರಲ್ಲಿ 3, 2021-22ರಲ್ಲಿ 1 ಹಾಗೂ 2022-23ರಲ್ಲಿ 1 ಪ್ರಕರಣ ವಲಸಿಗರಲ್ಲಿ ಮಲೇರಿಯಾ ಪತ್ತೆಯಾಗಿದೆ. ಇವರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಎಚ್ಚರ ವಹಿಸಲಾಗಿದೆ.

ಅಧಿಕೃತ ಘೋಷಣೆ ಬಾಕಿ: ಮಲೇರಿಯಾ ಮುಕ್ತ ಜಿಲ್ಲೆಯಾಗುವಲ್ಲಿ ಗ್ರಾಮಾಂತರ ಸಾಗಿದೆ. ಈಗಾಗಲೇ ಜಿಲ್ಲೆಗೆ ಭೇಟಿ ನೀಡಿದ ರಾಜ್ಯ ಹಾಗೂ ಕೇಂದ್ರ ತನಿಖಾ ತಂಡ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನಿಂದ ವರದಿಯನ್ನು ಪಡೆಯಿತು. ಇದೀಗ ಉಳಿದ ಹೊಸಕೋಟೆ, ನೆಲಮಂಗಲ ತಾಲೂಕಿಗೆ ಭೇಟಿ ನೀಡಲು ತಂಡ ಬರಲಿದ್ದು, ನಂತರ ಮಲೇರಿಯಾ ಮುಕ್ತ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಬಾಕಿಯಿದೆ. ಡೆಂಗ್ಯು ರೀತಿಯಲ್ಲಿ ಜನರಲ್ಲಿ ಮಲೇರಿಯಾ ಕಾಡುತ್ತಿತ್ತು. ಇದೀಗ ಅಧಿಕಾರಿಗಳು ಹೆಚ್ಚು ಕ್ರಮವಹಿಸಿ ನಿಯಂತ್ರಣ ಮಾಡಿರುವುದರಿಂದ ಮಲೇರಿಯಾವನ್ನು ಕಟ್ಟಿಹಾಕಿದ್ದಾರೆ. ಜಿಲ್ಲೆಯ ಜನರಲ್ಲಿ ಕೆಲವರ್ಷಗಳಿಂದ ಮಲೇರಿಯಾ ರೋಗ ಪತ್ತೆಯಾಗಿಲ್ಲ

ಮಲೇರಿಯಾ ಮುಕ್ತ ಜಿಲ್ಲೆ ಆಯ್ಕೆಗೆ ಜಿಲ್ಲೆ ಯ ಎರಡು ತಾಲೂಕಿಗೆ ರಾಜ್ಯ ಕೇಂದ್ರ ತಂಡ ಭೇಟಿ ನೀಡಿ ಪರಿಶೀಲನೆ ನಡೆ ಸಿದೆ. ಮೂರು ವರ್ಷಗಳಿಂದ ಸ್ಥಳೀಯರಲ್ಲಿ ಯಾವು ದೇ ಮಲೇರಿಯಾ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಿಡಿದು ಜನರಲ್ಲಿ ಮಲೇರಿಯಾ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಲಾಗಿದೆ. ● ಡಾ.ಧರ್ಮೇಂದ್ರ, ಮಲೇರಿಯಾ ನಿಯಂತ್ರಣಾಧಿಕಾರಿ.

ಮಲೇರಿಯಾ ನಿಯಂತ್ರಣಕ್ಕೆ ಜಿಲ್ಲಾದ್ಯಂತ ಅಗತ್ಯ ಕ್ರಮ ವಹಿಸಲಾಗಿದೆ. ಜ್ವರದ ಲಕ್ಷಣ ಕಂಡುಬಂದಲ್ಲಿ ಚಿಕಿತ್ಸೆ ಪಡೆದುಕೊಳ್ಳ ಬೇಕು. ಟ್ಯಾಂಕ್‌, ತೊಟ್ಟಿಗಳಲ್ಲಿ ಹಾಗೂ ಹಳೇ ಟಯರ್‌ಗಳಲ್ಲಿ ಸೊಳ್ಳೆ ಉತ್ಪತ್ತಿ ಆಗದಂತೆ ಗಮನಹರಿಸಬೇಕು. ● ಡಾ.ವಿಜಯೇಂದ್ರ, ಜಿಲ್ಲಾ ಆರೋಗ್ಯಾಧಿಕಾರಿ.

● ಎಸ್‌.ಮಹೇಶ್‌

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.