Lover: ವಿಡಿಯೋ ಕಾಲ್‌ ಮಾಡಿ ಅಂತ್ಯಕ್ರಿಯೆಗೆ ಪ್ರಿಯತಮೆಗೆ ಆಹ್ವಾನ 


Team Udayavani, Aug 16, 2023, 11:32 AM IST

tdy-7

ನೆಲಮಂಗಲ: ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊರ್ವ ಸಾವಿಗೂ ಮುನ್ನ ತನ್ನ ಪ್ರಿಯತಮೆಗೆ ವಿಡಿಯೋ ಕಾಲಿಂಗ್‌ ಮಾಡುತ್ತಲೇ ಪ್ರಾಣ ಬಿಟ್ಟಿರುವ ಘಟನೆ ಡಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕೊನೆಗಳಿಗೆಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಪ್ರಾಣ ಬಿಟ್ಟ ಯುವಕ ಸೋಂಪುರ ಹೋಬಳಿ ದಾಸೇನಹಳ್ಳಿ ಕಿರಣ್‌ (22). ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಸಹ ಆಗಿದೆ.

ರೇಬಿಸ್‌ ಸೋಂಕು: ಯುವಕನಿಗೆ ಎರಡು ತಿಂಗಳ ಹಿಂದೆ ನಾಯಿ ಕಚ್ಚಿದ್ದು, ಅದಕ್ಕೆ ಚಿಕಿತ್ಸೆ ಪಡೆಯದೇ ಇರುವುದೇ ಸೋಂಕು ಹೆಚ್ಚಾಗಲು ಕಾರಣವೆಂದು ಹೇಳಲಾಗಿದೆ. ಯುವಕ ನೆಲಮಂಗಲ ಸರ್ಕಾರಿ ಆಸ್ಪತ್ರೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದು, ನಂತರ ಪ್ರತಿಷ್ಠಿತ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅಲ್ಲಿಯೇ ಕೊನೆಯುಸಿರು ಎಳೆದಿದ್ದಾನೆ.

ಯುವಕನಿಗೆ ರೇಬಿಸ್‌ ಕಾಯಿಲೆ ಉಲ್ಬಣ ಗೊಂಡಿರುವ ಬಗ್ಗೆ ಆಸ್ಪತ್ರೆಗಳ ವರದಿಗಳಲ್ಲೂ ದಾಖಲಾ ಗಿದೆ. ಈತನ್ಮಧ್ಯೆ ಸಾಯುವ ಕ್ಷಣಗಳು ಸಮೀಪಿಸುತ್ತಿದೆ ಎನಿಸಿ ಪ್ರಿಯತಮೆಗಾಗಿ ವಿಡಿಯೋ ಮಾಡಿದ್ದ ಎನ್ನಲಾಗಿದೆ.

ವಿಡಿಯೋದಲ್ಲಿ ಏನಿದೆ: ವಿಡಿಯೋ ರೆಕಾರ್ಡ್‌ನಲ್ಲಿ ತನ್ನ ಪ್ರೀತಿಸುವ ಹುಡುಗಿಯನ್ನು ಅಂತ್ಯಕ್ರಿಯೆಗೆ ಅಹ್ವಾನ ನೀಡಿರುವ ಯುವಕ, ಹಾಯ್‌ ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನು ಮದುವೆ ಆಗು, ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು, ಇದು ನನ್ನ ಆಕಸ್ಮಿಕ ಸಾವು, ದಯವಿಟ್ಟು ಅಂತ್ಯ ಕ್ರಿಯೆಗೆ ಬಂದು ಹೋಗಬೇಕು, ನನ್ನ ಅಂತ್ಯ ಕ್ರಿಯೆಗೆ ನಿನ್ನ ತಂಗಿಯನ್ನು ಕರೆದುಕೊಂಡು ಬಾ, ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಕಣೆ, ಒಳ್ಳೆಯ ದಾಗಲಿ. ನಿಮ್ಮ ಕುಟುಂಬ ಹೀಗೆ ಚೆನ್ನಾಗಿರಲೆಂದು ಲೈವ್‌ನಲ್ಲೇ ಕೈ ಮುಗಿದು ಪ್ರಾಣ ಬಿಟ್ಟಿದ್ದಾನೆ.

ಪ್ರತಿಭಟನೆ: ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಮುಖಂಡರು ಕೊಲೆ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಒತ್ತಡ ಹೇರಿ ಠಾಣೆಯ

ಮುಂದೆ ಪ್ರತಿಭಟನೆ ನಡೆಸಿದ್ದು, ಪೊಲೀಸರು ಹಾಗೂ ಸಂಘಟನೆಗಳ ಮುಖಂಡರ ಮಧ್ಯೆ ಮಾತಿನ ಚಕುಮಕಿ ಸಹ ನಡೆದಿದೆ. ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪ್ರಕರಣ ದಾಖಲು: ಯುವಕ ಕಿರಣ್‌ ರೇಬಿಸ್‌ ಕಾಯಿಲೆಯಿಂದಲೇ ಕೊನೆಯುಸಿರು ಎಳೆದಿರುವ ಬಗ್ಗೆ ಆಸ್ಪತ್ರೆಯ ದಾಖಲಾತಿಗಳು ಹೇಳುತ್ತಿದ್ದು, ಲೈವ್‌ನಲ್ಲಿ ಯುವಕನೇ ಹೇಳಿರುವಂತೆ ನನ್ನ ಸಾವು ಆಕಸ್ಮಿಕವಾದುದೆಂದು ತಿಳಿಸಿದ್ದರೂ ಯುವತಿ ಮನೆಯವರೇ ಏನೋ ಮಾಡಿ ನನ್ನ ಮಗನ ಸಾವಿಗೆ ಕಾರಣರಾಗಿದ್ದಾರೆಂದು ಮೃತ ಯುವಕನ ಕುಟುಂಬಸ್ಥರ ವಿರುದ್ಧ ಆರೋಪ ಹಿನ್ನೆಲೆ ವಿವಿಧ ಆಯಾಮಗಳ ತನಿಖೆಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.