ಪ್ರತಿ ವಸ್ತುವಿನ ಐಎಸ್‌ಐ ಮಾರ್ಕ್‌ ಪರೀಕ್ಷಿಸಿ


Team Udayavani, Aug 23, 2022, 3:08 PM IST

ಪ್ರತಿ ವಸ್ತುವಿನ ಐಎಸ್‌ಐ ಮಾರ್ಕ್‌ ಪರೀಕ್ಷಿಸಿ

ದೇವನಹಳ್ಳಿ: ಯಾವುದೇ ವಸ್ತುವನ್ನು ಕೊಳ್ಳುವಾಗ ಐಎಸ್‌ಐ ಮಾರ್ಕ್‌ ಅನ್ನು ಪ್ರತಿಯೊಬ್ಬ ಗ್ರಾಹಕನೂ ಪರೀಕ್ಷಿಸಿ, ವಸ್ತುವಿನ ಗುಣಮಟ್ಟವನ್ನು ತಿಳಿದು ಬಳಸಬೇಕು. ಇದರಿಂದ ನಿಮ್ಮ ಕುಟುಂಬದ ಸುರಕ್ಷತೆ ನಿಮ್ಮ ಕೈಯಲ್ಲೇಇರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್‌ ಹೇಳಿದರು.

ತಾಲೂಕಿನ ಬೀರಸಂದ್ರ ಗ್ರಾಮದ ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಂಗಳೂರಿನ ಬ್ಯೂರೋ ಆಫ್ ಇಂಡಿಯನ್‌ ಸ್ಟ್ಯಾಂಡರ್ಡ್‌ ಶಾಖೆ ವತಿಯಿಂದ ನಡೆದ ಸರ್ಕಾರದ ವಿವಿಧ ಯೋಜನೆಗಳ ಮೇಲೆ ಕಾರ್ಯಗತಗೊಳಿಸುವ ಸರಕುಗಳ ಸಂಗ್ರಹಣಾ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಎಲ್ಲರೂ ಬಿಎಸ್‌ಐ ತರಬೇತಿಯ ಕಾರ್ಯಾಗಾರದ ಮಹತ್ವ ಅರಿತು, ನಿಮ್ಮ ಇಲಾಖೆಗಳ ಸಿಬ್ಬಂದಿ ವರ್ಗದವರಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರಿಗೂ ವಸ್ತುವಿನ ಗುಣಮಟ್ಟದ ಅಳೆಯುವ ಐಎಸ್‌ಐ ಗುರುತಿನ ಮಹತ್ವ ಮತ್ತು ಬಿಎಸ್‌ಐ ಕೇರ್‌ ಆಪ್‌ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಐಎಸ್‌ಐ ಮಾರ್ಕ್‌ಯಿಲ್ಲದ ವಸ್ತು ಮಾರಾಟ ಅಪರಾಧ: ಪ್ರತಿ ವಸ್ತುವಿನ ಗುಣಮಟ್ಟವನ್ನು ಪರೀಕ್ಷಿಸಿ ವಸ್ತುವಿನ ಸರ್ಟಿಫಿಕೇಷನ್‌ ಮತ್ತು ಐಎಸ್‌ಐ ಮಾರ್ಕ್‌ ನೀಡುವ ಜವಾಬ್ದಾರಿ ಬಿಎಸ್‌ಐದು ಆಗಿರುತ್ತದೆ. ವಿದೇಶಿ ವಸ್ತುಗಳಿಗೂ ಸಹ ಸರ್ಟಿಫಿಕೇಷನ್‌ ಮತ್ತು ಐಎಸ್‌ಐ ಮಾರ್ಕ್‌ ನೀಡಲಾಗುತ್ತದೆ. ಐಎಸ್‌ಐ ಮಾರ್ಕ್‌ ಇಲ್ಲದ ವಸ್ತುಗಳ ಮಾರಾಟ ಮಾಡುವುದು, ಬಿಐಎಸ್‌ 2016ನೇ ಕಾಯ್ದೆಯಡಿ ಕಾನೂನಿನ ಪ್ರಕಾರ ಅಪರಾಧವಾಗಿದೆ. ಅಂತಹ ಮಾರಾಟ ಮಳಿಗೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಅಥವಾ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಎಸ್‌ಐ ಶಾಖೆಗೆ ತಿಳಿಸಬೇಕು ಎಂದು ತಿಳಿಸಿದರು.

ಗ್ರಾಹಕರಲ್ಲಿ ಅರಿವು ಮೂಡಿಸಿ: ಬೆಂಗಳೂರಿನ ಬ್ಯುರೋ ಆಫ್ ಇಂಡಿಯನ್‌ ಸ್ಟ್ಯಾಂಡರ್ಡ್‌ಎಸ್‌ ಪಿಒ ಶಿವಾಂಗಿ ಮಾತನಾಡಿ, ಬಿಎಎಸ್‌ ಕೇರ್‌ ಆಪ್‌ ಪ್ಲೇ ಸ್ಟೋರ್‌ನಲ್ಲಿ ಡೌನ್‌ಲೋಡ್‌ ಮಾಡಿ, ಯಾವುದೇ ರೀತಿಯ ವಸ್ತುವಿನ ಗುಣಮಟ್ಟ ಪತ್ತೆ ಹಚ್ಚಲು ವಸ್ತುವಿನ ಕೋಡ್‌ ಸ್ಕ್ಯಾನ್‌ ಮಾಡಿದಲ್ಲಿ, ಅದರ ಪ್ರತಿಯೊಂದು ವಿವರ ಸಿಗುತ್ತದೆ. ಅಲ್ಲದೆ, ನಮ್ಮ ಈ ಬಿಐಎಸ್‌ ಶಾಖೆಯು ಸಾರ್ವಜನಿಕರಲ್ಲಿ ಮುಖ್ಯವಾಗಿ ಗ್ರಾಹಕರಲ್ಲಿ ವಸ್ತುವಿನ ಐಎಸ್‌ಐ ಮಾರ್ಕ್‌ ಮತ್ತು ಆಲ್‌ಮಾರ್ಕ್‌ ಬಗ್ಗೆ ಸರ್ಕಾರದ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಜಲಜೀವನ್‌ ಮಿಷನ್‌ ಸ್ಮಾರ್ಟ್‌ ಸಿಟೀಸ್‌ ಮಿಷನ್‌ ಹಾಗೂ ಮಾಲಿನ್ಯ ತಡೆಯುವ ಬೋರ್ಡ್‌ನ ಜೊತೆಗೂಡಿ ಗ್ರಾಹಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ವಿಜ್ಞಾನಿ ಜಯಚಂದ್ರ ಬಾಬು.ಪಿ ಸೇರಿದಂತೆ ಬೆಂ.ಗ್ರಾ ಜಿಲ್ಲೆಯ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.