ಪಾಕಿಸ್ತಾನ ವಿದೇಶಾಂಗ ಸಚಿವ ಭುಟ್ಟೊ ಹೇಳಿಕೆಗೆ ಖಂಡನೆ

Team Udayavani, Dec 19, 2022, 12:18 PM IST

tdy-8

ದೇವನಹಳ್ಳಿ: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಪ್ರಧಾನಿ ಮೋದಿ ಕುರಿತಾಗಿ ಮಾಡಿರುವ ಟೀಕೆ ಭಯೋತ್ಪಾದಕತೆಯನ್ನು ಪೋಷಣೆ ಮಾಡುತ್ತಿರುವ ಪಾಕಿಸ್ತಾನದ ಮನಸ್ಥಿತಿ ಎಂದು ಆರೋಪಿಸಿ, ಬಿಜೆಪಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ. ನಾರಾಯಣಸ್ವಾಮಿ ಮಾತನಾಡಿ, ಪಾಕಿಸ್ಥಾನದಲ್ಲಿ ಸರ್ಕಾರ ಮತ್ತು ಅಲ್ಲಿನ ಸೇನೆಯ ನಡುವೆ ಭಿನ್ನಾಭಿಪ್ರಾಯಗಳಿವೆ. ಅದನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿಕೊಳ್ಳ ಲಾಗಿದೆ. ಅದೇ ರೀತಿ ಪಾಕಿಸ್ಥಾನದ ಆರ್ಥಿಕತೆ ಕುಸಿದಿದೆ. ಕಾನೂನು ನಿಷ್ಕ್ರಿಯವಾಗಿದೆ. ಅರಾಜಕತೆ ತಾಂಡವವಾಡುತ್ತಿದೆ. ಇದನ್ನು ಮರೆಮಾಚಲು ಅಲ್ಲಿನ ರಾಜಕಾರಣಿಗಳು ವಿವಾದಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಭಯೋತ್ಪಾದಕರ ಆಶ್ರಯ ತಾಣ: ಎಲ್ಲರನ್ನು ಒಗ್ಗೂಡಿಸಿಕೊಂಡು ವಿವಿಧತೆಯಲ್ಲಿ ಏಕತೆ ಸಾರುತ್ತಿ ರುವ ಭಾರತವೂ ಧರ್ಮ ಸಹಿಷ್ಣು ಪುಣ್ಯಭೂಮಿ ಯಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಂಗಳೂರಿನ ಕುಕ್ಕರ್‌ ಬಾಂಬ್‌ ನ್ಪೋಟದ ವಿಚಾರದಲ್ಲಿ ನೀಡಿ ರುವ ಹೇಳಿಕೆ ಅವರ ಕೀಳು ಮನಸ್ಥಿತಿಯನ್ನು ಬಯಲು ಮಾಡಿದೆ. ವಿಶ್ವದ ಶಾಂತಿಗಾಗಿ ನಿರಂತರ ಶ್ರಮ ವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯನ್ನು ವೈಯಕ್ತಿಕವಾಗಿ ಟೀಕೆ ಮಾಡಿರುವುದು ಖಂಡನೀಯ. ಇಂದು ಪಾಕಿಸ್ತಾವೂ ಆರ್ಥಿಕ ದಿವಾಳಿತನದ ಅಂಚಿನಲ್ಲಿದೆ. ಅದೊಂದು ಭಯೋ ತ್ಪಾದಕರ ಆಶ್ರಯ ತಾಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟೀಕೆ ಮಾಡುವ ನೈತಿಕತೆ ಪಾಕ್‌ಗೆ ಇಲ್ಲ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ವಿಶ್ವದ ಬಹುತೇಕ ಉಗ್ರ ಸಂಘಟನೆಗಳಿಗೆ ತವರು ನೆಲೆ ಪಾಕಿಸ್ತಾನ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹೀಗಿರುವಾಗ ನರೇಂದ್ರ ಮೋದಿಯಂತಹ ವಿಶ್ವ ನಾಯಕರ ಬಗ್ಗೆ ಟೀಕೆ ಮಾಡಿದರೆ ಅವರ ತಪ್ಪು ಮುಚ್ಚಿಕೊಳ್ಳಲು ಆಗುವುದಿಲ್ಲ. ಭಾರತ ರಾಷ್ಟ್ರವನ್ನು ಉದ್ದೇಶಿಸಿ ವಿಶ್ವದ ವೇದಿಕೆಯಲ್ಲಿ ಟೀಕೆ ಮಾಡು ವಂತಹ ನೈತಿಕತೆ ಪಾಕಿಸ್ತಾನಕ್ಕೆ ಇಲ್ಲ ಎಂದರು.

ಭಯೋತ್ಪಾದನೆಗೆ ಪಾಕಿಸ್ಥಾನ ಕುಮ್ಮಕ್ಕು: ವಿಜಯ ಪುರ ಟೌನ್‌ ಬಿಜೆಪಿ ಅಧ್ಯಕ್ಷ ಮಂಜುನಾಥ್‌ ಮಾತ ನಾಡಿ, ಭಯೋತ್ಪಾದನೆಗೆ ಪಾಕಿಸ್ಥಾನ ಕುಮ್ಮಕ್ಕು ನೀಡುತ್ತಿದೆ. ಪಾಕಿಸ್ಥಾನ ವಿದೇಶಾಂಗ ಸಚಿವ ಭುಟ್ಟೋ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮೋದಿಯವರ ಬಗ್ಗೆ ಮಾತನಾಡಿರುವು ದನ್ನು ಖಂಡಿಸುತ್ತೇವೆ ಎಂದರು.

ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ವಸಂತ್‌ಕುಮಾರ್‌ ಗೌಡ, ತಾಲೂಕು ಅಧ್ಯಕ್ಷ ಸುಂದರೇಶ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್‌, ರವಿ ಕುಮಾರ್‌, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ನಾಗರಾಜ್‌, ದೊಡ್ಡಬಳ್ಳಾಪುರ ನಗರ ಘಟಕದ ಅಧ್ಯಕ್ಷ ಶಿವಶಂಕರ್‌, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌಮ್ಯಾ, ಉಪಾಧ್ಯಕ್ಷೆ ಉಮಾಮಹೇಶ್ವರಿ, ಪ್ರಧಾನ ಕಾರ್ಯದರ್ಶಿ ನಾಗವೇಣಿ, ನಾಮಿನಿ ಪುರಸಭಾ ಸದಸ್ಯೆ ಪುನೀತ, ವಿನಯ್‌ ಕುಮಾರ್‌, ಮುಖಂಡ ಎಸ್‌.ಎಂ. ನಾರಾಯಣಸ್ವಾಮಿ, ವೆಂಕಟೇಶ್‌, ಸುರೇಶ್‌, ಶ್ರೀನಿವಾಸ್‌ ಹಾಗೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.