ಶಿವಸೇನೆ,ಎಂಇಎಸ್‌ ಧೋರಣೆಗೆ ಖಂಡನೆ


Team Udayavani, Jan 8, 2020, 12:47 PM IST

br-tdy-2

ದೊಡ್ಡಬಳ್ಳಾಪುರ; ಅನಗತ್ಯವಾಗಿ ಗಡ ವಿವಾದ, ಕನ್ನಡಿಗರನ್ನು ಕೆಣಕಿ, ನಾಡಧ್ವಜವನ್ನು ಸುಟ್ಟು ಕೋಮು ಸೌಹಾರ್ದ ಕದಡುತ್ತಿರುವ ಶಿವಸೇನೆ ಹಾಗೂ ಎಂಇಎಸ್‌ ಧೋರಣೆ ಖಂಡಿಸಿ, ಭುವನೇಶ್ವರಿ ಕನ್ನಡ ಸಂಘದ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ನಗರದ ಸಿದ್ಧಲಿಂಗಯ್ಯ ವೃತ್ತದಲ್ಲಿ ಪಂಜು ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭುವನೇಶ್ವರಿ ಕನ್ನಡ ಸಂಘದ ಸಲಹೆಗಾರ, ಟಿ.ಎನ್‌.ಪ್ರಭುದೇವ್‌, ಮಹಾರಾಷ್ಟ್ರದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮವಾಗಿದೆ. ಆದರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಬವ್‌ ಠಾಕ್ರೆ, ಕನ್ನಡದ ಪ್ರದೇಶಗಳಾದ ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರದಲ್ಲಿದೆ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿದ್ದಾರೆ. ಶಾಸಕರಮೇಶ್‌ ಜಾರಕಿಹೊಳಿ ಬೆಳಗಾವಿ ಗ್ರಾಮಾಂತರದಲ್ಲಿ ಎಂಇಎಸ್‌ ರವರೇ ಶಾಸಕರಾಗಿ ಆಯ್ಕೆಯಾಗಬೇಕು ಎಂದಿರುವುದು ಖಂಡನೀಯ. ದೇಶದ ಒಕ್ಕೂಟ

ವ್ಯವಸ್ಥೆಯ ಮೂಲ ಉದ್ದೇಶಗಳನ್ನು ಬುಡಮೇಲು ಮಾಡುತ್ತಿರುವವ ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕೆಂದು ಒತ್ತಾಯಿಸಿದರು. ತಾಲೂಕು ಡಾ.ರಾಜ್‌ಕುಮಾರ್‌ ಅಭಿ ಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂ ಹಮೂರ್ತಿ ಮಾತನಾಡಿ, ಕನ್ನಡಿಗರು ಶಾಂತಿ ಪ್ರಿಯರು,ಸಹಿಷ್ಣುಗಳು ಆದರೆ ಗಡಿ ಭಾಗಗಳಲ್ಲಿರುವ ರಾಜ್ಯಗಳು ವಿನಾಕಾರಣ ಸದಾ ಒಂದಿಲ್ಲೊಂದು ವಿಚಾರವನ್ನು ಕೆದಕಿ ಕನ್ನಡಿಗರ ಮೇಲೆ ಆಕ್ರಮಣ ಮಾಡುತ್ತಾ ಸಮ್ಮ ಸಹನೆಯನ್ನು ಕೆಣಕುತ್ತಿರುತ್ತಾರೆ.ಇತ್ತೀಚೆಗಷ್ಟೆ ಮಹಾರಾಷ್ಟ್ರದಲ್ಲಿ ನಮ್ಮ ನಾಡ ಧ್ವಜವನ್ನು ಸುಟ್ಟು ಕನ್ನಡಿಗರ ಪ್ರತಿನಿಧಿಯಾದ ಮುಖ್ಯಮಂತ್ರಿಗಳ ಪ್ರತಿಕೃತಿ ದಹಿಸಲ್ಲದೆ ಗಡಿ ಭಾಗಗಳ್ಳಿ ಕನ್ನಡ ಚಲನಚಿತ್ರದ ಪ್ರದರ್ಶನ ಕೂಡ ನಿಲ್ಲಿಸಿ ನಾಮಫಲಕಗಳಿಗೆ ಮಸಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕ್ಕಿದ್ದಾರೆ. ಕರ್ನಾಟಕ ಕಾಂಗ್ರೆಸ್‌ ಪಕ್ಷ ಕೇಂದ್ರದ ಹೆ„ಕಮಾಂಡ್‌ ಮೇಲೆ ಒತ್ತಡ ಏರಿ ಶಿವಸೇನೆ ನೀಡಿರುವ ಬೆಂಬಲವನ್ನು ಹಿಂಪಡೆದು ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ನೀಡಬೇಕಿದೆ. ತಮಿಳುನಾಡಿನಲ್ಲಿ ಕನ್ನಡ ಬಾವುಟ ವಾಹನದ ಮೇಲೆ ಕಟ್ಟಿದ್ದಕ್ಕೆ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಸಹ ಖಂಡನೀಯ,ಶಾಂತಿ ಮಂತ್ರ ಜಪಿಸುತ್ತೇವೆ ಎಂಬ ಕಾರಣಕ್ಕೆ ನಾವುಗಳು ಕೈಲಾಗದವರಲ್ಲ. ಮತ್ತೆ ಇಂತಹ ಘಟನೆಗಳು ಕಂಡು ಬಂದಲ್ಲಿ ಪರಿಣಾಮ ಎದುರಿಸಬೇಕಾಗುವುದೆಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನಗರಸಭೆ ಮಾಜಿ ಸದಸ್ಯ ಜಿ.ಸತ್ಯನಾರಾಯಣ್‌, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಪಿ.ನವೀನ್‌, ಗೌ.ಅಧ್ಯಕ್ಷ ಪುಟ್ಟಪ್ಪ, ಕಾರ್ಯದರ್ಶಿ ಸು.ವೆಂಕಟೇಶ್‌, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕು ಗೌರವಾಧ್ಯಕ್ಷ ಪು.ಮಹೇಶ್,ಮಲ್ಲಾತಹಳ್ಳಿ ಆನಂದ್‌, ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಂಜಪ್ಪ, ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಅಧ್ಯಕ್ಷ ಚಂದ್ರಪ್ಪ, ಕನ್ನಡ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ನಾಗರಾಜ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.