ಬರಡು ಭೂಮಿಯಲ್ಲಿ ಕೈಗಾರಿಕೆಗಳ ನಿರ್ಮಾಣ

ಕೈಗಾರಿಕೆಗಳ ಮೂಲ ಸೌಲಭ್ಯಗಳ ಸಮಸ್ಯೆಯನ್ನು ಬಗೆಹರಿಸಲು ಕ್ರಮ: ಬೃಹತ್‌ ಕೈಗಾರಿಕಾ ಸಚಿವ ಮುರಗೇಶ್‌ ನಿರಾಣಿ ಭರವಸೆ

Team Udayavani, Sep 19, 2021, 3:17 PM IST

ಬರಡು ಭೂಮಿಯಲ್ಲಿ ಕೈಗಾರಿಕೆಗಳ ನಿರ್ಮಾಣ

ನೆಲಮಂಗಲ: ರಾಜ್ಯಾದ್ಯಂತ ಎಲ್ಲಾ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಬೇಕು, ತುಮಕೂರು ಸುತ್ತಮುತ್ತ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಬೇರೆ ರಾಜ್ಯ ಮತ್ತು ವಿದೇಶದಿಂದ ಬರುವ ಬಂಡವಾಳಗಾರರನ್ನು ಆಕರ್ಷಿಸುವ ಸಲುವಾಗಿ ಹೆಚ್ಚು ಅನುಕೂಲತೆಯನ್ನು ಕಲ್ಪಸಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಮಾಡಲಾಗು ತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ನೆಲಮಂಗಲ ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿನ ಹಲವು ಹಂತದ ಕೈಗಾರಿಕಾ ಪ್ರದೇಶ ಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಮಾತ ನಾಡಿದರು.

ರಾಜಧಾನಿಗೆ ಹೆಚ್ಚು ಹತ್ತಿರವಿರುವ ತುಮಕೂರು ಜಿಲ್ಲೆಯವರೆಗೂ ವಿವಿಧ ಕೈಗಾರಿಕಾ ವಲಯಗಳನ್ನು ಸ್ಥಾಪಿಸುವ ಮೂಲಕ ಬೃಹತ್‌ ಕೈಗಾರಿಕಾ ವಲಯವನ್ನು ನಿರ್ಮಿಸಲಾಗುತ್ತದೆ. ಈ ಭಾಗದಲ್ಲಿ ಹೆಚ್ಚು ಬರಡು ಭೂಮಿ ಇರುವ ಕಾರಣ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲವಾಗುತ್ತದೆ. ಕೃಷಿ ಭೂಮಿಗಳನ್ನು ಯಾವುದೇ ಕಾರಣಕ್ಕೂ ಸ್ವಾದೀನ ಪಡಿಸಿಕೊಳ್ಳಲಾಗುವುದಿಲ್ಲ. ಈ ಭಾಗದಲ್ಲಿ ಹೆಚ್ಚಾಗಿ ನೀರಿನ ಅಭಾವವಿದ್ದು, ಸಣ್ಣ ನೀರಾವರಿ ಸಚಿವರಾದ ಮಾಧುಸ್ವಾಮಿ ಅವರೊಂದಿಗೆ ಚರ್ಚಿಸಿ ಎತ್ತಿನಹೊಳೆ ಯೋಜನೆಯ ನೀರಾವರಿ ಯನ್ನು ಕೈಗಾರಿಕಾ ಪ್ರದೇಶಕ್ಕೆ ಅದಷ್ಟು ಬೇಗ ತರುವಲ್ಲಿ ಪಯತ್ನಿಸುತ್ತೇನೆ ಎಂದರು.

ಇದನ್ನೂ ಓದಿ:ಸಂಗೀತವೆಂಬ ದೀಪದಲ್ಲಿ ಬೆಳಗುತ್ತಿರುವ ‘ಉಜ್ವಲ’

ಸಮಸ್ಯೆಗಳ ಪಟ್ಟಿ: ಸೋಂಪುರ ಕೈಗಾರಿಕಾ ವಲಯ ಗಳಲ್ಲಿ 2009ರಿಂದ ರಸ್ತೆಗಳು ಮತ್ತು ವಿದ್ಯುತ್‌ ಹೊರತುಪಡಿಸಿದರೆ ಯಾವುದೇ ಮೂಲಭೂತ ಸೌಲಭ್ಯಗಳು ಲಭ್ಯವಾಗಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಈಗಾಗಲೇ ಕೈಗಾರಿಕಾ ಪ್ರದೇಶಗಳಲ್ಲಿನ ಸಮಸ್ಯೆ ಗಳಾದ ಅಗ್ನಿಶಾಮಕ ಠಾಣೆ, ಕುಡಿಯುವ ನೀರಿನ ಸಮಸ್ಯೆ, ಆಸ್ಪತ್ರೆ, ಪೋಲಿಸ್‌ ಠಾಣೆ ಯಂತಹ ಅಗತ್ಯ ಸಮಸ್ಯೆಗಳ ಪಟ್ಟಿಯನ್ನು ಪಡೆದಿದ್ದೇನೆ ಹಂತ ಹಂತ ವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದರು. ಪರಿಶೀಲನೆ: ತಾಲೂಕಿನ ಸೋಂಪುರ ಕೈಗಾರಿಕಾ ಪ್ರದೇಶದ ಮೂರು ಮತ್ತು ನಾಲ್ಕನೆ ಹಂತದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಕುಡಿಯುವ ನೀರಿನ ಓವರ್‌ ಹೆಡ್‌ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು ಹಾಗೂ ಹೊಸದಾಗಿ ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಪ್ರದೇಶಕ್ಕೂ ಭೇಟಿನೀಡಿ ಕೃಷಿ ಭೂಮಿ ಅಥವಾ ಬರಡು ಭೂಮಿಯಾಗಿದೇಯ ಎಂದು ಪರಿಶೀಲನೆ ನಡೆಸಿದರು.

ತಾಲೂಕಿನ ಸೋಂಪುರ ಕೈಗಾರಿಕಾ ಸಂಘದ ಅಧ್ಯಕ್ಷರಾದ ಕಂಠಪ್ಪ, ತ್ರಿವೇಣಿ ಟರ್ಬೈನ್‌ ಕಂಪನಿ ಮುಖ್ಯಸ್ಥ ಪ್ರಶಾಂತ್‌ ಸೇರಿದಂತೆ ಕೈಗಾರಿಕಾ ಅಧಿಕಾರಿಗಳು ಹಾಜರಿದ್ದರು.

ಬರಡು ಭೂಮಿಗೆ ಆದ್ಯತೆ
ಸೋಂಪುರ ಕೈಗಾರಿಕಾ ಪ್ರದೇಶ ಮತ್ತು ತುಮ ಕೂರು ಸುತ್ತಮುತ್ತಲಿನ ಪ್ರದೇಶಗಳು ಹೆಚ್ಚು ಬರಡು ಭೂಮಿಯಾಗಿವೆ ಹಾಗೂ ರಾಜಧಾನಿ ಬೆಂಗಳೂರಿಗೆ ಹತ್ತಿರವಿದ್ದು, ಕೈಗಾರಿಕಾ ಪ್ರದೇಶ ಗಳಾಗಿ ಮಾರ್ಪಾಡು ಮಾಡಲಾಗುತ್ತಿದೆ. ಇದ್ದ ರಿಂದ ಸ್ಥಳೀಯ ರೈತರು ಮತ್ತು ನಿರುದ್ಯೋಗಿ ಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಕೃಷಿ ಭೂಮಿ ಹೊಂದಿರುವ ರೈತರನ್ನು ಸಂಪರ್ಕಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿ ನೀರಾವರಿ ಕೃಷಿ ಭೂಮಿಯಾಗಿದ್ದಾರೆ. ಕೈಗಾರಿಕಾ ಪ್ರದೇಶ ದಿಂದ ಕೈಬಿಡಲಾಗುತ್ತದೆ. ಈ ಕುರಿತಾಗಿ ಸ್ಥಳೀಯ ಶಾಸಕರು ಮತ್ತು ಉಸ್ತುವಾರಿ ಸಚಿವರ ಜತೆಯಲ್ಲಿ ಚರ್ಚಿಸಿ ತಿರ್ಮಾನಿಸಲಾಗುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.