ನೆಲಮಂಗಲದಲ್ಲಿ ಸಿದ್ಧಗೊಳ್ಳುತ್ತಿವೆ ಕೋವಿಡ್‌-19 ಆಸ್ಪತ್ರೆ

Team Udayavani, Jul 6, 2020, 6:43 AM IST

elmangala-aspatre

ನೆಲಮಂಗಲ: ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಗೊಳ್ಳುತ್ತಿದ್ದಂತೆ ಕೋವಿಡ್‌ 19 ರಣಕೇಕೆ ಆರಂಭಿಸಿದೆ. ಅದರ ನಿಯಂತ್ರಣಕ್ಕೆ ಸರ್ಕಾರ ತಾಲೂಕು ಮಟ್ಟದಲ್ಲಿ ಕೋವಿಡ್‌-19 ಆಸ್ಪತ್ರೆ ಆರಂಭಿಸಲು ಸಿದ್ಧತೆ ನಡೆಸಿದೆ. ರಾಜ್ಯದ 15 ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್‌ 19 ಚಿಕಿತ್ಸೆ ಆರಂಭಿಸಲಾಗಿದ್ದು, ಸರ್ಕಾರ 518 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದರ ನಿಗದಿ ಗೊಳಿಸಿ, ಅವಕಾಶ ನೀಡಿದರೆ ಸರ್ಕಾರದ 146 ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್‌-19 ಆಸ್ಪತ್ರೆಗಳನ್ನಾಗಿಸಲು ಸಿದ್ಧತೆ  ನಡೆಸಿದೆ.

ಕನಿಷ್ಠ 30 ಹಾಸಿಗೆ ವ್ಯವಸ್ಥೆ: ತಾಲೂಕು ಮಟ್ಟದಲ್ಲಿ ಕೋವಿಡ್‌ 19 ಸೋಂಕು ತಗುಲಿದವರನ್ನು ಜಿಲ್ಲಾಸ್ಪತ್ರೆ ಅಥವಾ ಬೆಂಗಳೂರಿಗೆ ಕಳುಹಿಸಬೇಕಿತ್ತು. ಆದರೆ, ತಾಲೂಕು ಕೋವಿಡ್‌-19 ಆಸ್ಪತ್ರೆಗಳಲ್ಲಿ ಕನಿಷ್ಠ 30 ಹಾಸಿಗೆ ಆರಂಭದಿಂದ  ಸೋಂಕಿತರು ಸ್ಥಳೀಯ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಈಗಾ ಗಲೇ ಬೆಂಗಳೂರು ಸಮೀಪವಿರುವ ನೆಲಮಂಗಲ ತಾಲೂಕಿನ ಹರ್ಷರಾಮಯ್ಯ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ 60 ಹಾಸಿಗೆ  ವ್ಯವಸ್ಥೆಗೊಳಿಸಲಾಗಿದ್ದು ಬೆಂಗ ಳೂರಿಗೆ ಹೋಗಬೇಕಾಗಿದ್ದ 11 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಾರಿಯರ್ಗಳಿಗೆ ಕಂಟಕ: ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್‌ 19 ವಾರಿಯರ್ಸ್‌ಗಳಾಗಿ ಕೆಲಸ ಮಾಡುತ್ತಿರುವ ಪೊಲೀಸರು, ವೈದ್ಯರು,  ಕಂದಾಯ ಅಧಿಕಾರಿಗಳು ಸೇರಿ ಸರ್ಕಾರಿ ಅಧಿಕಾರಿಗಳಿಗೆ ಕೋವಿಡ್‌ 19 ಪಾಸಿಟಿವ್‌ ಬರುತ್ತಿ ರುವುದರಿಂದ ಚಿಕಿತ್ಸೆ, ಸೌಲಭ್ಯ ನೀಡಲು ಅನೇಕ ಅಧಿಕಾರಿಗಳು ಆತಂಕಪಡುತ್ತಿದ್ದಾರೆ.

ಎಚ್ಚರಿಕೆ ವಹಿಸದ ಸರ್ಕಾರ: ಕೋವಿಡ್‌ 19 ದಿನೆ ದಿನೇ ಹೆಚ್ಚುತ್ತಿದ್ದರೂ ಹೊರರಾಜ್ಯ ಹಾಗೂ ಜಿಲ್ಲೆಯಿಂದ ಬರುವ ಜನ ಪರೀಕ್ಷೆ ಹಾಗೂ ಮುಂಜಾಗ್ರತೆ ಕ್ರಮ ಅನುಸರಿಸದೆ ಸುತ್ತಾಡುತ್ತಿದ್ದಾರೆ. ಕೆಲವು ಗಡಿಗಳಲ್ಲಿ ತಪಾಸಣೆ ಕೇಂದ್ರವಿದ್ದರೂ,  ಪರೀಕ್ಷೆ ಮಾತ್ರ ನಡೆಯುತ್ತಿಲ್ಲ. ಕೋವಿಡ್‌ 19 ನಿಯಂತ್ರಣ ಮಾಡಬೇಕು ಎಂಬ ಸರ್ಕಾರ ನಿಯಂತ್ರಣಕ್ಕೆ ಎಚ್ಚರಿಕೆ ವಹಿಸಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ.

ಕೋವಿಡ್‌ 19 ಸೋಂಕಿತ ವ್ಯಕ್ತಿ ಪ್ರತಿಕ್ರಿಯಿಸಿ, ಸ್ಥಳೀಯ ಆಸ್ಪತ್ರೆಗಳಲ್ಲಿ  ಉತ್ತಮ ಸೌಲಭ್ಯದ ಮೂಲಕ ಚಿಕಿತ್ಸೆ ನೀಡುತ್ತಿರುವುದು ನಮಗೆ ಧೈರ್ಯ ಹೆಚ್ಚಾಗಿದೆ. ಬೆಂಗಳೂರಿನ ನೂರಾರು ಜನರ ಗುಂಪಿನಲ್ಲಿ ಚಿಕಿತ್ಸೆ ಪಡೆಯುವುದಕ್ಕಿಂತ ಉತ್ತಮವಾಗಿದ್ದು, ಸರ್ಕಾರ ಸ್ಥಳೀಯವಾಗಿ ಆಸ್ಪತ್ರೆ ವ್ಯವಸ್ಥೆ ಮಾಡಿದರೆ  ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.