ಜಿಲ್ಲೆಯಲ್ಲಿ 85 ಸಾವಿರ ಮಂದಿಗೆ ಲಸಿಕೆ
Team Udayavani, Apr 10, 2021, 11:59 AM IST
ದೇವನಹಳ್ಳಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಕೇಂದ್ರ ಹಾಗೂ ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿದಿನ 50 ರಿಂದ 70ಕೋವಿಡ್ ಪಾಸಿಟಿವ್ ಪ್ರಕರಣಗಳು ಬರುತ್ತಿವೆ.ಈವರೆಗೆ 708 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಕೊರತೆ ಇಲ್ಲ. ಜಿಲ್ಲೆಯಲ್ಲಿ 85 ಸಾವಿರ ಜನರಿಗೆ ಇದುವರೆಗೂ ಕೋವಿಡ್ ಲಸಿಕೆ ನೀಡಲಾಗಿದೆ.
ನಿತ್ಯ 1300-1400 ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಪ್ರಾರಂಭವಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರಸರ್ಕಾರದ ಆದೇಶದಂತೆ 45 ವರ್ಷ ಮೇಲ್ಪಟ್ಟ ಜಿಲ್ಲೆಯ ಜನತೆಗೆ ಲಸಿಕೆ ನೀಡಲಾಗುತ್ತಿದ್ದು, ಲಸಿಕೆಕುರಿತು ಅಗತ್ಯ ಮಾಹಿತಿಯೊಂದಿಗೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ ಎಂದರು.
ಬೇಸಿಗೆ ಆರಂಭವಾದ ಹಿನ್ನೆಲೆ, ಸರ್ಕಾರಿ ಕಚೇರಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ತಹಶೀಲ್ದಾರ್ ಅನಿಲ್‌ಕುಮಾರ್‌ಅರೋಲಿಕರ್, ಪುರಸಭೆ ಮುಖ್ಯಾಧಿಕಾರಿ ಎ.ಎಚ್.ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್, ಆರ್‌ಐ ಚಿದಾನಂದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್ಗೆ
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ
ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್ ಜಾನ್ಸನ್