ದೊಡ್ಡಬಳ್ಳಾಪುರದಲ್ಲಿ ಕೊರೊನಾ ವದಂತಿ

Team Udayavani, Mar 14, 2020, 5:35 PM IST

br-tdy-1

ದೊಡ್ಡಬಳ್ಳಾಪುರ : ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಗೆ ಕೋವಿಡ್‌-19 ಸೋಂಕಿದೆ ಎಂದು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಶಿಫಾರಸ್ಸು ಮಾಡಿದ ವೈದ್ಯರೊಬ್ಬರ ಆತುರ ಹಾಗೂ ಅಚಾತುರ್ಯದಿಂದ ಇಡೀ ತಾಲೂಕು ಆತಂಕಗೊಂಡಿದ್ದ ಘಟನೆ ಶುಕ್ರವಾರ ನಡೆದಿದೆ.

ಘಟನೆ ಏನು: ಜವಳಿಪಾರ್ಕ್‌ನ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದೊಡ್ಡಬಳ್ಳಾಪುರದ ಮಹಿಳೆಯೊಬ್ಬರು ಎರಡು ದಿನಗಳ ಹಿಂದೆ ಜ್ವರ ಇರುವ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ. ಜ್ವರ, ಕೆಮ್ಮು ಇದ್ದರಿಂದ ಶುಕ್ರವಾರ ಕಫಾ ಪರೀಕ್ಷೆ ಮಾಡಿಸಿಕೊಳ್ಳಲು ಬೆಂಗಳೂರಿನ ರಾಜೀವ್‌ ಗಾಂಧಿ ಆಸ್ಪತ್ರೆಗೆ ಹೋಗುವಂತೆ ಡಾ.ಷರೀಪ್‌ ಚೀಟಿ ಬರೆದುಕೊಡುವಾಗ ಕೋವಿಡ್‌-19 ಇರುವ ಶಂಕೆ ಇದೆ ಎಂದು ಬರೆದಿದ್ದಾರೆ. ಇಷ್ಟೇ ಅಲ್ಲದೇ, ಈ ಚೀಟಿಯನ್ನು ಮೊಬೈಲ್‌ ಮೂಲಕ ಪೋಟೋ ತೆಗೆದು ವಿವಿಧ ವಾಟ್ಸ್ ಆ್ಯಪ್‌ ಗ್ರೂಪ್‌ಗ್ಳಿಗೆ ಹರಿದು ಬಿಟ್ಟಿದ್ದೇ ಕೋವಿಡ್‌-19 ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಲು ಕಾರಣವಾಗಿದೆ.

ಇದು ಸುಳ್ಳು ಸುದ್ದಿ, ವೈದ್ಯಾಧಿಕಾರಿಗೆ ನೊಟೀಸ್‌: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ದೊಡ್ಡಬಳ್ಳಾಪುರ ತಾಯಿ ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯ ಡಾ.ಷರೀಪ್‌ ಎಂಬ ವೈದ್ಯರು ಸೃಷ್ಟಿಸಿರುವ ಗೊಂದಲವೇ ಸುಳ್ಳು ಸುದ್ದಿ ಹರಡಲು ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು , ಜಿಲ್ಲೆಯಲ್ಲಿ ಹೆಚ್ಚು ಜನ ಸೇರುವ ಯಾವುದೇ ಅಧಕೃತ ಸಮಾರಂಭಗಳನ್ನು ನಡೆಸದಂತೆ ತಿಳಿಸಲಾಗಿದೆ. ಇದಲ್ಲದೆ ರಾಜ್ಯ ಸರ್ಕಾರ ಕೋವಿಡ್‌-19 ತಡೆಗೆ ನೀಡುತ್ತಿರುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಕಾರಿಗಳಿಗೂ ತಿಳಿಸಲಾಗಿದೆ ಎಂದರು.

ವೈದ್ಯರ ಮೇಲೆ ಕ್ರಮ: ಕೋವಿಡ್‌-19 ಶಂಕೆ ಇದೆ ಎಂದು ಯಾವುದೇ ಪರೀಕ್ಷೆಯನ್ನು ಮಾಡದಲೇ ನಿರ್ಧಾರಕ್ಕೆ ಬಂದು ಚೀಟಿ ಬರೆದುಕೊಟ್ಟು, ಅದನ್ನು ವಾಟ್ಸ್‌ಆ್ಯಪ್‌ಗ್ಳಲ್ಲಿ ಹರಿದು ಬಿಡಲು ಕಾರಣವಾಗಿರುವ ಡಾ.ಷರೀಪ್‌ ಅವರಿಗೆ ಕಾರಣ ಕೇಳಿ ನೊಟೀಸ್‌ ನೀಡಲಾಗಿದೆ ಎಂದು ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.