ಧೂಳಿನಿಂದ ಬೆಳೆ ಹಾನಿ, ರೈತರ ಪ್ರತಿಭಟನೆ

Team Udayavani, Jul 8, 2019, 3:00 AM IST

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ರನ್‌ವೇಯಲ್ಲಿ ಕೆಲಸ ನಡೆಯುತ್ತಿದೆ. ಆಷಾಡ ಮಾಸದ ಗಾಳಿಗೆ ಮಣ್ಣಿನ ಧೂಳಿನ ಕಣಗಳು ಗ್ರಾಮಗಳು ಹಾಗೂ ಬೆಳೆದಿರುವ ಬೆಳೆಗಳ ಮೇಲೆ ಬೀಳುತ್ತಿರುವುದರಿಂದ ಬೆಳೆಗೆ ಹಾನಿಯಾಗುತ್ತಿದೆ. ವಿಮಾನ ನಿಲ್ದಾಣ ಪ್ರಾಧಿಕಾರ ಧೂಳು ಹಾರದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಟ್ಟಕೋಟೆ ಗ್ರಾಪಂ ಆವರಣದ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ಆರೋಗ್ಯ, ಬೆಳೆಗೆ ಹಾನಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಯಿಂದ ಆಷಾಢ ಮಾಸದ ಗಾಳಿಗೆ ಮಣ್ಣಿನ ಧೂಳು ಗ್ರಾಮಗಳತ್ತ ಬರುತ್ತಿರುವುದರಿಂದ ರೇಷ್ಮೆ ಹಾಗೂ ತರಕಾರಿ ಬೆಳೆಗಳಿಗೆ ಹಾಗೂ ಸುತ್ತಲಿನ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಶ್ವಾಸಕೋಶ ಸಂಬಂಧಿತ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ಪರ್ಯಾಯ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.

ಸಭೆ ಕರೆದು ಪರಿಹಾರದ ಚರ್ಚೆ: ಧೂಳು ಹಾರುತ್ತಿರುವುದಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರ, ಮಂಗಳವಾರ ರೈತರ ಸಭೆ ಕರೆದು ಚರ್ಚಿಸಲಾಗುವುದು. ಸಭೆಯಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ರೈತರಿಗೆ ಬಹಳ ನಷ್ಟವಾಗಿದ್ದು, ನಾವು ಸಹ ರೈತರ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇವೆ ಎಂದು ತಹಶೀಲ್ದಾರ್‌ ಕೇಶವಮೂರ್ತಿ ತಿಳಿಸಿದರು.

ಶಾಶ್ವತ ಪರಿಹಾರ ಒದಗಿಸಲು ಆಗ್ರಹ: ರೈತ ಮುನಿಶಾಮಪ್ಪ ಮಾತನಾಡಿ, ಕಳೆದ ಎರಡು ವರ್ಷದಿಂದ ಆಷಾಢ ಮಾಸದಲ್ಲಿ ಗಾಳಿ ಹೆಚ್ಚಾಗಿರುವುದರಿಂದ ಮಣ್ಣಿನ ಧೂಳಿನ ಕಣಗಳು ಬೆಳಗಳ ಮೇಲೆ ನೇರವಾಗಿ ಬೀಳುತ್ತಿರುವುದರಿಂದ ನಮಗೆ ಹೆಚ್ಚಿನ ನಷ್ಟ ಅನುಭವಿಸುವಂತೆ ಆಗಿದೆ. ಈ ಭಾಗದ ಬೆಟ್ಟಕೋಟೆ, ದೊಡ್ಡಹೊಸಹಳ್ಳಿ, ಬಾಲದಿಂಬನಹಳ್ಳಿ, ಚನ್ನಹಳ್ಳಿ ಗ್ರಾಮಗಳಲ್ಲಿ ರೇಷ್ಮೆ ಬೆಳೆಗಾರರಿದ್ದು, ಹಿಪ್ಪನೇರಳೆ ಸೊಪ್ಪಿನ ಮೇಲೆ ಮಣ್ಣು ಧೂಳೂ ಇದ್ದರೆ ಅದನ್ನು ರೇಷ್ಮೆ ಹುಳುಗಳಿಗೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ರೈತರಿಗೆ ನಷ್ಟ ಉಂಟಾಗುತ್ತಲೇ ಇದೆ. ಇದಕ್ಕೆ ಶಾಶ್ವತ ಪರಿಹಾರ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ತಾಪಂ ಇಒ ಮುರುಡಯ್ಯ, ಗ್ರಾಪಂ ಪಿಡಿಒ ಸೋಮಮೂರ್ತಿ, ಚನ್ನರಾಯಪಟ್ಟಣ ಪಿಎಸ್‌ಐ ಹಾಗೂ ಪೋಲಿಸ್‌ ಸಿಬ್ಬಂದಿ ಪ್ರತಿಭಟನಾಕರರಿಗೆ ಸಾಂತ್ವನ ಹೇಳಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • ನೆಲಮಂಗಲ: ತಾಲೂಕು ಸಂಚಾರಿ ಪೊಲೀಸ್‌ ಠಾಣೆಯಿಂದ ವಾಹನ ಸವಾರರಿಗಾಗಿ ಹಮ್ಮಿಕೊಂಡಿದ್ದ ಡಿಎಲ್‌, ಇನ್ಷೊರೆನ್ಸ್‌, ಮೇಳಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು....

  • ದೇವನಹಳ್ಳಿ: ರಾಸು ಕರು ಹಾಕಿದ ಮೂರು ತಿಂಗಳಲ್ಲಿ ಕೃತಕ ಗರ್ಭಧಾರಣೆ ಮಾಡಿಸಬೇಕು. ಇದನ್ನು ತಡೆದು ತಿಂಗಳಗಟ್ಟಲೇ ಕಾಯಬಾರದು. ಹಾಲು ಬರುತ್ತದೆ ಎಂಬ ದೃಷ್ಟಿಯನ್ನಿಟ್ಟುಕೊಂಡು...

  • ದೇವನಹಳ್ಳಿ: ವಿಶ್ವಕರ್ಮ ಸಮಾಜ ತನ್ನದೇ ಆದ ಇತಿಹಾಸ ಹೊಂದಿದ್ದು, ರಾಜ್ಯ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಶಾಸಕ ಎಲ್‌ ಎನ್‌ ನಾರಾಯಣಸ್ವಾಮಿ ತಿಳಿಸಿದರು....

  • ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ನಡೆದ ಹಸೇನ್‌ ಹುಸೇನ್‌ ಧಾರ್ಮಿಕ ವಿಧಿ ವಿಧಾನಗಳನ್ನು ಧರ್ಮಗುರುಗಳ...

  • ಹೊಸಕೋಟೆ: ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವಾಹನ ಸವಾರರಿಗೆ ಚಾಲನಾ ಪರವಾನಗಿ (ಎಲ್‌ಎಲ್‌,...

ಹೊಸ ಸೇರ್ಪಡೆ