ಸೈಬರ್‌ ಅಪರಾಧ ತಡೆಗೆ ಸೂಕ್ತ ಕಾನೂನು ಅಗತ್ಯ

Team Udayavani, Jan 20, 2020, 3:00 AM IST

ದೇವನಹಳ್ಳಿ: ಮಾಹಿತಿ ತಂತ್ರಜ್ಞಾನ ಬೆಳೆದಂತೆ ಅನುಕೂಲಗಳೊಂದಿಗೆ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳ ಕಡಿವಾಣಕ್ಕೆ ಸೂಕ್ತ ಕಾನೂನಿನ ಅವಶ್ಯಕತೆ ಇದೆ ಎಂದು ಕರ್ನಾಟಕ ರಾಜ್ಯ ಉತ್ಛ ನ್ಯಾಯಾಲಯದ ನ್ಯಾಯಾಧೀಶರು, ಕರ್ನಾಟಕ ಜುಡಿಶೀಯಲ್‌ ಅಕಾಡೆಮಿಯ ಅಧ್ಯಕ್ಷೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ನ್ಯಾಯಾಧೀಶೆ ಬಿ.ವಿ.ನಾಗರತ್ನ ಹೇಳಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಜುಡಿಶೀಯಲ್‌ ಅಕಾಡೆಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜುಡಿಶೀಯರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ಏರ್ಪಡಿಸಲಾದ “”ವಿದ್ಯುನ್ಮಾನ ಪುರಾವೆಗಳು(Electronic evidence)” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುವಾಗ ಮತ್ತು ನ್ಯಾಯಾಂಗದಲ್ಲಿ ಅಪರಾಧ ಪ್ರಕರಣಗಳ ಕುರಿತು ಪರಿಶೀಲಿಸುವಾಗ ಬಹುತೇಕ ಪ್ರಕರಣಗಳು ಡಿಜಿಟಲ್‌ ತಂತ್ರಜ್ಞಾನಕ್ಕೆ ಸಂಬಂಧಿಸಿದ್ದಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಜಾರಿಗೆ ಬಂದು ಇಪ್ಪತ್ತು ವರ್ಷ ಕಳೆದಿದ್ದು, ಸೂಕ್ತ ಕಾನೂನಿನ ಅರಿವು ಇಲ್ಲದಿರುವುದರಿಂದ ತಂತ್ರಜ್ಞಾನ ಬೆಳೆದಂತೆ ಸೈಬರ್‌ ಕ್ರೈಂ, ಡಿಜಿಟಲ್‌ ಅಪರಾಧಗಳು ಹೆಚ್ಚಾಗುತ್ತಿವೆ ಎಂದು ತಂತ್ರಜ್ಞಾನದ ದುರ್ಬಳಕೆ ಕುರಿತು ವಿಷಾದ ವ್ಯಕ್ತಪಡಿಸಿದರು.

ಸೈಬರ್‌ ಸೆಕ್ಯೂರಿಟಿ ಮತ್ತು ಕಾನೂನು ತರಬೇತುದಾರ ಡಾ. ಅನಂತಪ್ರಭು ಮಾತನಾಡಿ, ಸೈಬರ್‌ ಸೆಕ್ಯೂರಿಟಿ ಹಾಗೂ ಡಿಜಿಟಲ್‌ ಹ್ಯಾಕಿಂಗ್‌ ವಿಷಯದ ಕುರಿತು ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ನ್ಯಾಯಾಲಯದ ಸಿಬ್ಬಂದಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉತ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ಜುಡಿಶೀಯಲ್‌ ಅಕಾಡೆಮಿಯ ಗವರ್ನರ್‌ ಕೆ.ಎನ್‌.ಫ‌ಣೀಂದ್ರ,

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್‌, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್‌.ಎಂ.ನಾಗರಾಜು, ಜಿಲ್ಲಾ ನ್ಯಾಯಾಧೀಶ ವಿ.ಶ್ರೀಶಾನಂದ, ಕರ್ನಾಟಕ ಜುಡಿಶೀಯಲ್‌ ಅಕಾಡೆಮಿಯ ನಿರ್ದೇಶಕರಾದ ಪ್ರಭಾವತಿ.ಎಂ.ಹಿರೇಮಠ, ನಿವೃತ್ತ ಜಿಲ್ಲಾ ನ್ಯಾಯಾ ಧೀಶರಾದ ಎಸ್‌.ಆರ್‌.ಸೋಮಶೇಖರ್‌

ಸೇರಿದಂತೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನಮಿತಾ ಮಹೇಶ್‌.ಬಿ.ಜಿ, ಸೈಬರ್‌ ಕ್ರೈಂ ಪೊಲೀಸ್‌ ಇನ್ಸ್‌ಪೆಕ್ಟರ್‌ ಯಶವಂತ್‌ ಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ನ್ಯಾಯಾಂಗ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದೊಡ್ಡಬಳ್ಳಾಪುರ:  ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಪ್ರಸ್ತುತ ಖರೀದಿಸಲಾಗುತ್ತಿರುವ 10 ಕ್ವಿಂಟಲ್‌ ರಾಗಿ ಪ್ರಮಾಣವನ್ನು 15 ಕ್ವಿಂಟಲ್‌ಗೆ ಏರಿಸಬೇಕು....

  • ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿನೂತನ ಸಪ್ತಪದಿ ಯೋಜನೆಯ ಪ್ರಚಾರದ ಸಲುವಾಗಿ ತಾಲೂಕಿನ ಎಸ್‌.ಎಸ್‌ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ...

  • ನೆಲಮಂಗಲ: ರಾಷ್ಟ್ರದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿ, ಶತ್ರು ರಾಷ್ಟ್ರಗಳ ಪರ ಘೋಷಣೆ ಕೂಗುವ ಪ್ರತಿಯೊಬ್ಬರಿಗೂ ದೇಶದ ಅನ್ನ, ನೀರು ನೀಡದೆ ಗಡಿಪಾರು ಮಾಡಬೇಕು ಎಂದು...

  • ದೇವನಹಳ್ಳಿ: ಯಾವುದೇ ಅಗ್ನಿ ಅವಘಡಗಳು ಸಂಭವಿಸಿದಾಗ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ, ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದೆಂದುಇಂಡಿಯನ್‌ ಆಯಿಲ್‌...

  • ನೆಲಮಂಗಲ : ರೈತರಿಗೆ ಎದುರಾಗುವ ಬೆಲೆ ಕುಸಿತ, ಬೆಳೆಹಾನಿಯ ಸಂಕಷ್ಟಗಳ ನಡುವೆ ಸರ್ವರ್‌ ಸಮಸ್ಯೆಯಿಂದಾಗಿ, ಸಾಲ ಸೌಲಭ್ಯಕ್ಕಾಗಿ ಬೆಳೆ ಆಧಾರ್‌ ಪತ್ರ ಪಡೆಯಲು ಅಲೆದಾಡುವ...

ಹೊಸ ಸೇರ್ಪಡೆ