ಎಲ್ಲೆಲ್ಲೂ ಸೋಲು, ಗೆಲುವಿನ ಲೆಕ್ಕಾಚಾರ


Team Udayavani, Apr 24, 2019, 3:04 AM IST

ellellu

ದೇವನಹಳ್ಳಿ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಸೋಲು ಗೆಲುವಿನ ಬಗ್ಗೆ ಚರ್ಚೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ.

ಬೆಳಗ್ಗೆ ಟೀ ಅಂಗಡಿ, ಹೋಟೆಲ್‌, ಗಲ್ಲಿಗಲ್ಲಿಗಳಲ್ಲಿ ಸೇರುವ ನಾಲ್ಕೈದು ಜನರ ಗುಂಪಿನಲ್ಲಿ ಅಭ್ಯರ್ಥಿಗಳ ಸೋಲು, ಗೆಲುವಿನ ಅಂಶಗಳನ್ನು ಮುಂದಿಟ್ಟುಕೊಂಡು ಪರ ವಿರೋಧ ಚರ್ಚೆ ನಡೆಸುತ್ತಿರುವುದು ಸಾಮಾನ್ಯವಾಗಿದೆ.

ಸೋಲು, ಗೆಲುವಿನ ಲೆಕ್ಕಾಚಾರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ 15 ಮಂದಿ ಸ್ಪರ್ಧಿಸಿದ್ದಾರೆ. ಗೆಲುವಿನ ವಿಚಾರದಲ್ಲಿ ಕಾಂಗ್ರೆಸ್‌ನ ಹಾಲಿ ಸಂಸದ ವೀರಪ್ಪ ಮೊಯ್ಲಿ ಮತ್ತು ಬಿಜೆಪಿಯ ಬಚ್ಚೇಗೌಡರ ಹೆಸರುಗಳು ಮಾತ್ರ ಚರ್ಚೆಗೆ ಗ್ರಾಸವಾಗುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿ ಮುನ್ನಡೆ ಕಾಯ್ದುಕೊಳ್ಳುತ್ತಾರೆ.

ಯಾವ ಪಕ್ಷಕ್ಕೆ ಯಾವ ಕ್ಷೇತ್ರ ಕೈ ಕೊಡುತ್ತದೆ. ಯಾವ ಕ್ಷೇತ್ರ ಕೈ ಹಿಡಿಯುತ್ತದೆ. ಚುನಾವಣೆಯಲ್ಲಿ ಗೆಲ್ಲುವವರು ಯಾರು? ಸೋಲುವವರು ಯಾರು? ಎಂಬ ರಾಜಕೀಯ ಲೆಕ್ಕಾಚಾರದ ಜೊತೆಗೆ ಈ ಚುನಾವಣೆಯಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ಬಗ್ಗೆ ಗಹನ ಚರ್ಚೆಗಳು ನಡೆಯುತ್ತಿವೆ.

ಜನರ ಕುತೂಹಲ: ಅಭ್ಯರ್ಥಿಗಳ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಗೆಲುವಿನ ಕುರಿತು ತೀವ್ರ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಯಾರನ್ನು ಕೇಳಿದರೂ ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆಂಬ ದೃಢ ಆತ್ಮವಿಶ್ವಾಸದ ಮಾತುಗಳು ಕೇಳಿಬರುತ್ತವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸ್ಥಳೀಯರಾಗಿದ್ದು, ಶೇ.88ರಷ್ಟು ಮತದಾನ ಆಗುವುದರ ಮೂಲಕ ದಾಖಲೆಯಾಗಿದೆ.

ಮೇ 23ರಂದು ಮತ ಎಣಿಕೆ ಇರುವುದರಿಂದ ಈಗಿನಿಂದಲೇ ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಎಂಬುದರ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಲೋಕಸಭಾ ಚುನಾವಣೆ ಅಧಿಸೂಚನೆ ಹೊರಬಿದ್ದು ಮತದಾನ ನಡೆಯುವವರೆಗೂ ಕ್ಷಣ ಕ್ಷಣಕ್ಕೂ ಒಂದು ರೀತಿಯ ನಾಟಕೀಯ, ರಾಜಕೀಯ ಸನ್ನಿವೇಶಗಳು ಸಾಕ್ಷಿಯಾಗಿದ್ದವು.

ಇದೀಗ ಯಾರು ಬರುತ್ತಾರೆ, ಯಾರು ಸೋಲುತ್ತಾರೆಂಬುದೇ ಜನರ ಕುತೂಹಲದ ಪ್ರಶ್ನೆಯಾಗಿದೆ. ಪ್ರಬಲ ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ತಮ್ಮ ಭವಿಷ್ಯದ ರಾಜಕೀಯದ ಹಿತದೃಷ್ಟಿಯಿಂದ ಮಹಾ ಸಮರದ ಫಲಿತಾಂಶ ಮಹತ್ವದ್ದಾಗಿದ್ದರೆ, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಬೆವರು ಸುರಿಸಿ ಶ್ರಮಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಫ‌ಲಿತಾಂಶ ಒಂದು ರೀತಿಯ ಪ್ರತಿಷ್ಠೆಯಾಗಿದೆ.

ಗುಂಪು ಚರ್ಚೆ: ಅಖಾಡದಲ್ಲಿರುವ ಸಿಪಿಎಂ, ಬಹುಜನ ಸಮಾಜ ಪಾಟಿ, ಕೆಜೆಪಿ ಸೇರಿದಂತೆ 12 ಮಂದಿ ಪಕ್ಷೇತರರು ಯಾರ ಗೆಲುವಿಗೆ ಅಡ್ಡಗಾಲಾಗುತ್ತಾರೆ ಎಂಬ ರಾಜಕೀಯ ಲೆಕ್ಕಾಚಾರಗಳೂ ಶುರುವಾಗಿವೆ. ರಾಜಕೀಯ ಪಕ್ಷಗಳು ಯಾವ್ಯಾವ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪಡೆಯುವ ಮತಗಳ ಬಗ್ಗೆ ಈಗಾಗಲೇ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಗುಂಪು ಚರ್ಚೆಗಳು ಶುರುವಾಗಿವೆ.

ಮೊಯ್ಲಿಗೆ ಹ್ಯಾಟ್ರಿಕ್‌ ಗೆಲುವು?: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸವಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ವಿ.ಕೃಷ್ಣರಾವ್‌ ಮತ್ತು ಆರ್‌.ಎಲ್‌.ಜಾಲಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸತತ ಮೂರು ಬಾರಿ ಹ್ಯಾಟ್ರಿಕ್‌ ಬಾರಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಎರಡು ಬಾರಿ ಗೆಲುವು ಸಾಧಿಸಿರುವ ಮೈತ್ರಿ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ ಈ ಬಾರಿ ಹ್ಯಾಟ್ರಿಕ್‌ ಸಾಧಿಸಬಲ್ಲರೇ ಎಂಬ ಬಗ್ಗೆಯೂ ಚರ್ಚೆಗಳು ನಡೆದಿವೆ.

ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಯಾವುದೇ ಅಭ್ಯರ್ಥಿಯ ಗೆಲುವಿಗೆ ನಿರ್ಣಾಯಕ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಒಕ್ಕಲಿಗರಿಗಿಂತ ಹೆಚ್ಚು ಸಂಖ್ಯೆಯಲ್ಲಿರುವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್‌ಗೆ ಸಾಂಪ್ರಾದಾಯಿಕ ಮತಗಳಾಗಿರುವುದರಿಂದ ಹಾಗೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರಿಂದ ವೀರಪ್ಪ ಮೊಯ್ಲಿ ಅವರು ಸುಲಭವಾಗಿ ಗೆಲ್ಲಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪ್ರಧಾನಿ ಮೋದಿ ಅಲೆ ವಿಶ್ವಾಸ: ಇನ್ನು ಕಳೆದ 2014ರ ಚುನಾವಣೆಯಲ್ಲಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಅವರು ಈ ಬಾರಿ ಒಕ್ಕಲಿಗರ ಕ್ಷೇತ್ರದಲ್ಲಿ ಸ್ವಸಮುದಾಯದ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧೆಯಿಂದ ಒಕ್ಕಲಿಗರ ಮತಗಳು ವಿಭಜನೆಯಾಗಿ ಸೋಲು ಅನುಭವಿಸಬೇಕಾಗಿತ್ತು.

ಲೋಕಸಭಾ ಕ್ಷೇತ್ರದ ಇತಿಹಾಸವನ್ನು ಒಮ್ಮೆ ದಿಟ್ಟಿಸಿ ನೋಡಿದರೆ ಇಲ್ಲಿ ಕಮಲ ಅರಳಿದ ಉದಾಹರಣೆಗಳು ಸಿಗುವುದಿಲ್ಲ. ಈ ಬಾರಿ ಕ್ಷೇತ್ರದಲ್ಲಿ ಕಮಲ ಅರಳುತ್ತದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ. ಪ್ರಧಾನಿ ಮೋದಿ ಅಲೆ ಹಾಗೂ ಕಳೆದ ಬಾರಿ ಸೋತ ಅನುಕಂಪ ನನ್ನ ಕೈ ಹಿಡಿಯುತ್ತದೆ ಎಂಬ ಆತ್ಮವಿಶ್ವಾಸದಲ್ಲಿ ಬಿ.ಎನ್‌.ಬಚ್ಚೇಗೌಡ ಇದ್ದಾರೆ. ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಗೆಲುವಿಗೆ ನಿರ್ಣಾಯಕವಾಗಿರುವುದರಿಂದ ಈ ಬಾರಿ ಗೆಲುವು ಖಚಿತ ಎಂಬುದು ಅವರ ನಂಬಿಗೆಯಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಮತದಾರ ಪ್ರಭುಗಳು ನೀಡಿರುವ ತೀರ್ಪು ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಿವೆ. ಯಾವ ಅಭ್ಯರ್ಥಿ ಜಯದ ಮಾಲೆ ಧರಿಸುತ್ತಾರೆಂಬುದು ಮೇ 23 ರಂದು ಖಚಿತವಾಗಲಿದೆ. ಅಲ್ಲಿಯವರೆಗೂ ಸೋಲು, ಗೆಲುವಿನ ಲೆಕ್ಕಾಚಾರಗಳು ಮಾತ್ರ ಸಾರ್ವಜನಿಕ ವಲಯದಲ್ಲಿ ಸರ್ವೇ ಸಾಮಾನ್ಯ ಎನ್ನಬಹುದಾಗಿದೆ. ಹಾಗಾಗಿ, ಮತದಾರರು ಮತ ಎಣಿಕೆಗೆ ಕಾತುರದಿಂದ ಕಾಯುತ್ತಿದ್ದಾರೆ.

* ಎಸ್‌.ಮಹೇಶ್‌

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

driving practice

ಆದಿವಾಸಿ ನಿರುದ್ಯೋಗಿಗಳಿಗೆ ವಾಹನ ಚಾಲನಾ ತರಬೇತಿ

ಕರೆ ಅಭಿವೃದ್ಧಿ

ಕೆರೆ ಅಭಿವೃದ್ಧಿಗೆ ಒಂದಾದ ಅಧಿಕಾರಿಗಳು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ಕುಟುಂಬಗಳ ನಡುವೆ ಮಾರಾಮಾರಿ

ಕುಟುಂಬಗಳ ನಡುವೆ ಮಾರಾಮಾರಿ

ನವಜಾತ ಶಿಶು ಪತ್ತೆ

ದೇಗುಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ..!

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

13work

ಕಾಮಗಾರಿ ಪರಿಶೀಲಿಸಿದ ಮಡೋಳಪ್ಪ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.